పవిత్ర బైబిల్

ఈజీ టు రీడ్ వెర్షన్ (ERV) - తెలుగు
రాజులు రెండవ గ్రంథము
1. {#1ಅಮಚ್ಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸುವನು } [PS]ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.
2. ಅಮಚ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅಮಚ್ಯನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆರುಸಲೇಮಿನ ಯೆಹೋವದ್ದೀನಳು ಅಮಚ್ಯನ ತಾಯಿ.
3. ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.
4. ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪ ಹಾಕುತ್ತಿದ್ದರು. [PE]
5. [PS]ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.
6. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. [BKS]ಮೋಶೆಯ ಧರ್ಮಶಾಸ್ತ್ರದಲ್ಲಿ[BKE] ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ. [PE]
7.
8. [PS]ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ. [PE]{#1ಯೋವಾಷನ ವಿರುದ್ಧ ಯುದ್ಧಮಾಡಲು ಅಮಚ್ಯನ ಅಪೇಕ್ಷೆ }
9. [PS]ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು. [PE][PS]ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು.
10. ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು. [PE]
11. [PS]ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು.
12. ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು.
13. ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.
14. ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು. [PE]
15. [PS][BKS]“ಇಸ್ರೇಲಿನ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.
16. ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು. [PE]
17. {#1ಅಮಚ್ಯನ ಸಾವು } [PS]ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು.
18. [BKS]“ಯೆಹೂದದ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ.
19. ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.
20. ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. [PE]
21. {#1ಅಜರ್ಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು } [PS]ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.
22. ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು. [PE]
23. {#1ಎರಡನೆಯ ಯಾರೊಬ್ಬಾಮನು ಇಸ್ರೇಲಿನಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು } [PS]ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.
24. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.
25. ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.
26. ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.
27. ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು. [PE]
28. [PS][BKS]“ಇಸ್ರೇಲಿನ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)
29. ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು. [PE]
మొత్తం 25 అధ్యాయాలు, ఎంపిక చేయబడింది అధ్యాయము 14 / 25
1 {#1ಅಮಚ್ಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸುವನು } ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು. 2 ಅಮಚ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅಮಚ್ಯನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆರುಸಲೇಮಿನ ಯೆಹೋವದ್ದೀನಳು ಅಮಚ್ಯನ ತಾಯಿ. 3 ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು. 4 ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪ ಹಾಕುತ್ತಿದ್ದರು. 5 ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು. 6 ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. [BKS]ಮೋಶೆಯ ಧರ್ಮಶಾಸ್ತ್ರದಲ್ಲಿ[BKE] ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ. 7 8 ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ. {#1ಯೋವಾಷನ ವಿರುದ್ಧ ಯುದ್ಧಮಾಡಲು ಅಮಚ್ಯನ ಅಪೇಕ್ಷೆ } 9 ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು. ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು. 10 ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು. 11 ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು. 12 ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು. 13 ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು. 14 ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು. 15 [BKS]“ಇಸ್ರೇಲಿನ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ. 16 ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು. 17 {#1ಅಮಚ್ಯನ ಸಾವು } ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು. 18 [BKS]“ಯೆಹೂದದ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ. 19 ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು. 20 ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. 21 {#1ಅಜರ್ಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು } ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. 22 ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು. 23 {#1ಎರಡನೆಯ ಯಾರೊಬ್ಬಾಮನು ಇಸ್ರೇಲಿನಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು } ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು. 24 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ. 25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು. 26 ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. 27 ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು. 28 [BKS]“ಇಸ್ರೇಲಿನ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.) 29 ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು.
మొత్తం 25 అధ్యాయాలు, ఎంపిక చేయబడింది అధ్యాయము 14 / 25
×

Alert

×

Telugu Letters Keypad References