1. {#1ನಾತಾನನು ದಾವೀದನೊಂದಿಗೆ ಮಾತಾಡಿದ್ದು } [PS]ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ.
2. ಶ್ರೀಮಂತನ ಹತ್ತಿರ ಅನೇಕ ಕುರಿಗಳು ಮತ್ತು ದನಗಳು ಇದ್ದವು.
3. ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು. [PE]
4.
5. [PS]“ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಆ ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಆ ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲಿ ದನಗಳಿಂದಾಗಲಿ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಆ ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು” ಎಂದು ಹೇಳಿದನು. [PE][PS]ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!
6. ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು. [PE]
7. {#1ನಾತಾನನು ದಾವೀದನ ಪಾಪದ ಬಗ್ಗೆ ಹೇಳಿದನು } [PS]ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.
8. ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು.
9. ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.
10. ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’ [PE]
11. [PS]“ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.[* ಇದು … ತಿಳಿಯುತ್ತದೆ ಅಕ್ಷರಶಃ, “ಸೂರ್ಯನ ನೋಟದಂತೆ.” ]
12. ನೀನು ಬತ್ಷೆಬೆಳೊಂದಿಗೆ ಗುಟ್ಟಾಗಿ ಮಲಗಿದೆ. ಆದರೆ ನಾನು ಹೇಳುತ್ತಿರುವ ಮಾತೆಲ್ಲಾ ಇಸ್ರೇಲ್ ಜನರ ಕಣ್ಣೆದುರಿನಲ್ಲಿ ನಡೆಯುವುದು’ ”[† ಆದರೆ … ನಡೆಯುವುದು ಅಕ್ಷರಶಃ, “ಇಸ್ರೇಲರೆಲ್ಲರ ಎದುರಿನಲ್ಲಿ ಮತ್ತು ಸೂರ್ಯನ ಎದುರಿನಲ್ಲಿ.” ] ಎಂದು ಹೇಳಿದನು. [PE]
13. [PS]ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. [PE][PS]ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.
14. ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು. [PE]
15. {#1ದಾವೀದ ಮತ್ತು ಬತ್ಷೆಬೆಳ ಮಗುವಿನ ಮರಣ } [PS]ನಾತಾನನು ಮನೆಗೆ ಹೋದನು. ದಾವೀದನಿಗೆ ಊರೀಯನ ಹೆಂಡತಿಯಲ್ಲಿ ಹುಟ್ಟಿದ ಗಂಡುಮಗುವಿಗೆ ಯೆಹೋವನು ಬಹಳ ಕಾಯಿಲೆಯನ್ನು ಬರಮಾಡಿದನು.
16. ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆಯೇ ಬಿದ್ದುಕೊಂಡಿದ್ದನು. [PE]
17. [PS]ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.
18. ಏಳನೆಯ ದಿನ ಆ ಮಗು ಸತ್ತಿತು. ಮಗು ಸತ್ತದ್ದನ್ನು ದಾವೀದನಿಗೆ ತಿಳಿಸಲು ಅವನ ಸೇವಕರು ಅಂಜಿದರು. ಅವರು, “ನೋಡಿ, ಮಗು ಜೀವಂತವಾಗಿರುವಾಗ ನಾವು ದಾವೀದನೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವನು ನಮ್ಮ ಮಾತನ್ನು ಕೇಳಲಿಲ್ಲ. ಮಗುವು ಸತ್ತಿತೆಂದು ನಾವು ದಾವೀದನಿಗೆ ತಿಳಿಸಿದರೆ, ಬಹುಶಃ ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುತ್ತಾನೆ” ಎಂಬುದಾಗಿ ಮಾತಾಡಿಕೊಂಡರು. [PE]
19.
20. [PS]ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು ಕರೆದು, “ಮಗು ಸತ್ತುಹೋಯಿತೇ?” ಎಂದು ಕೇಳಿದನು. [PE][PS]“ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು. [PE]
21. [PS]ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು. [PE]
22. [PS]ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು. [PE][PS]ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.
23. ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು. [PE]
24. {#1ಸೊಲೊಮೋನನು ಹುಟ್ಟಿದ್ದು } [PS]ನಂತರ ದಾವೀದನು ತನ್ನ ಪತ್ನಿಯಾದ ಬತ್ಷೆಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ಷೆಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಆ ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು.
25. ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು. [PE]
26. {#1ದಾವೀದನು ರಬ್ಬವನ್ನು ವಶಪಡಿಸಿಕೊಂಡದ್ದು } [PS]ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.
27. ಯೋವಾಬನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಾನು ರಬ್ಬದ ವಿರುದ್ಧ ಹೋರಾಡಿ ನೀರಿರುವ ನಗರವನ್ನು ವಶಪಡಿಸಿಕೊಂಡಿದ್ದೇನೆ.
28. ಈಗ ಇತರ ಜನರನ್ನು ಒಟ್ಟುಗೂಡಿಸಿಕೊಂಡುಬಂದು ಈ ನಗರಕ್ಕೆ ಮುತ್ತಿಗೆ ಹಾಕು. ನಾನು ಈ ನಗರವನ್ನು ವಶಪಡಿಸಿಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೋ. ಈ ನಗರವನ್ನು ನಾನು ವಶಪಡಿಸಿಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು. [PE]
29. [PS]ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.
30. ದಾವೀದನು ಅವರ ರಾಜನ ತಲೆಯ[‡ ಅವರ ರಾಜನ ತಲೆ ಅಥವಾ “ಮಲ್ಕಾಮನ ತಲೆ.” ಅಮ್ಮೋನಿಯರು ಆರಾಧಿಸುವ ಒಂದು ಸುಳ್ಳುದೇವತೆಯೇ ಮಲ್ಕಾಮನು. ] ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು. [PE]
31. [PS]ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು. [PE]