1. {#1ದಾವೀದನು ಯೆಹೋವನಿಗಾಗಿ ರಚಿಸಿದ ಸ್ತುತಿಗೀತೆ } [PS]ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು: [PE][PBR]
2. [QS]ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ. [QE]
[QS2]3. ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. [QE][QS]ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. [QE][QS2]ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; [QE][QS]ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು! [QE]
4. [QS]ಯೆಹೋವನು ಸ್ತೋತ್ರಕ್ಕೆ ಅರ್ಹನಾಗಿದ್ದಾನೆ. [QE][QS2]ನಾನು ಸಹಾಯಕ್ಕಾಗಿ ಆತನನ್ನು ಕರೆಯುವೆನು. [QE][QS2]ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುವನು. [QE][PBR]
5. [QS]ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; [QE][QS2]ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. [QE][QS2]ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ. [QE]
6. [QS]ಪಾತಾಳದ ಪಾಶಗಳು ನನ್ನನ್ನು ಸುತ್ತುವರೆದಿವೆ; [QE][QS2]ಮರಣಕರವಾದ ಉರುಲುಗಳು ನನ್ನೆದುರಿನಲ್ಲಿವೆ. [QE]
7. [QS]ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. [QE][QS2]ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; [QE][QS]ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; [QE][QS2]ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು. [QE]
8. [QS]ಆಗ ಭೂಮಿಯು ಗಡಗಡನೆ ನಡುಗಿತು. [QE][QS2]ಆಕಾಶದ ಅಡಿಪಾಯಗಳು ಅಲುಗಾಡಿದವು. [QE][QS2]ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು! [QE]
9. [QS]ಆತನ ಮೂಗಿನ ಹೊಳ್ಳೆಗಳಿಂದ ಹೊಗೆಯು ಹೊರಬಂದಿತು. [QE][QS2]ಬೆಂಕಿಕಿಡಿಯ ಜ್ವಾಲೆಗಳು ಆತನ ಬಾಯಿಂದ ಹೊರಬಂದವು; [QE][QS2]ದಹಿಸುವ ಬೆಂಕಿಯು ಆತನ ಬಾಯೊಳಗಿಂದ ಬಂದಿತು. [QE]
10. [QS]ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! [QE][QS2]ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು. [QE]
11. [QS]ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ [QE][QS2]ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು. [QE]
12. [QS]ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. [QE][QS2]ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು. [QE]
13. [QS]ಉರಿಯುವ ಕಲ್ಲಿದ್ದಲಿನಂತಿದ್ದ ಕಿಡಿಗಳು [QE][QS2]ಆತನ ಸುತ್ತಲೂ ಇದ್ದ ಬೆಳಕಿನಿಂದ ಬಂದವು. [QE]
14. [QS]ಯೆಹೋವನು ಆಕಾಶದಿಂದ ಗುಡುಗಿದನು! [QE][QS2]ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು. [QE]
15. [QS]ಆತನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. [QE][QS2]ಆತನು ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿಹೋದರು. [QE][PBR]
16. [QS]ಯೆಹೋವನೇ, ನೀನು ಗದರಿಸಿದಾಗ [QE][QS2]ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; [QE][QS]ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ [QE][QS2]ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು. [QE][PBR]
17. [QS]ಆತನು ಮೇಲಿನ ಲೋಕದಿಂದ ಕೆಳಗಿಳಿದನು. [QE][QS2]ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು. [QE]
18. [QS]ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. [QE][QS2]ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು. [QE]
19. [QS]ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. [QE][QS2]ಆದರೆ ನನಗೆ ಯೆಹೋವನು ಸಹಾಯ ಮಾಡಿದನು. [QE]
20. [QS]ಆತನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. [QE][QS2]ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು. [QE]
21. [QS]ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. [QE][QS2]ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು. [QE]
22. [QS]ನಾನು ಆತನ ಮಾರ್ಗಗಳನ್ನೇ ಅನುಸರಿಸಿದೆನು. [QE][QS2]ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ. [QE]
23. [QS]ನಾನು ಯೆಹೋವನ ಆಜ್ಞೆಗಳನ್ನು ಯಾವಾಗಲೂ ಜ್ಞಾಪಿಸಿಕೊಂಡೆನು. [QE][QS2]ನಾನು ಯಾವಾಗಲೂ ಆತನ ಕಟ್ಟಳೆಗನುಸಾರವಾಗಿಯೇ ನಡೆದುಕೊಂಡೆನು. [QE]
24. [QS]ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. [QE][QS2]ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು. [QE]
25. [QS]ನಾನು ಒಳ್ಳೆಯದನ್ನೇ ಮಾಡಿದೆನು. [QE][QS2]ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು! [QE][PBR]
26. [QS]ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. [QE][QS2]ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ. [QE]
27. [QS]ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; [QE][QS2]ಮೋಸಗಾರರಿಗೆ ಜಾಣನಾಗಿರುವೆ. [QE]
28. [QS]ನೀನು ದೀನರನ್ನು ಮೇಲಕ್ಕೆತ್ತುವೆ; [QE][QS2]ಗರ್ವಿಷ್ಠರನ್ನಾದರೋ ತುಳಿದುಬಿಡುವೆ. [QE]
29. [QS]ಯೆಹೋವನೇ, ನನ್ನ ದೀಪವು ನೀನೇ. [QE][QS2]ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು. [QE]
30. [QS]ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. [QE][QS2]ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು. [QE][PBR]
31. [QS]ದೇವರ ಶಕ್ತಿಯು ಪರಿಪೂರ್ಣವಾದದ್ದು. [QE][QS2]ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; [QE][QS2]ಆತನು ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸುತ್ತಾನೆ. [QE]
32. [QS]ಯೆಹೋವನ ಹೊರತು ಬೇರೆ ದೇವರಿಲ್ಲ. [QE][QS2]ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ. [QE]
33. [QS]ದೇವರು ನನ್ನ ಬಲವೂ ಕೋಟೆಯೂ ಆಗಿದ್ದಾನೆ. [QE][QS2]ಆತನು ನನ್ನ ಮಾರ್ಗವನ್ನು ದೋಷವಿಲ್ಲದ್ದಾಗಿ ಮಾಡುತ್ತಾನೆ. [QE]
34. [QS]ನಾನು ಉನ್ನತ ಪ್ರದೇಶಗಳಲ್ಲಿ ನಿಲ್ಲುವಂತೆ [QE][QS2]ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳಂತೆ ಮಾಡುತ್ತಾನೆ. [QE]
35. [QS]ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. [QE][QS2]ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು. [QE][PBR]
36. [QS]ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. [QE][QS2]ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ. [QE]
37. [QS]ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; [QE][QS2]ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು. [QE]
38. [QS]ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! [QE][QS2]ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ. [QE]
39. [QS]ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! [QE][QS2]ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. [QE][QS]ಅವರು ಮತ್ತೆ ಮೇಲೇಳುವುದಿಲ್ಲ. [QE][QS2]ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. [QE][PBR]
40. [QS]ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. [QE][QS2]ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ. [QE]
41. [QS]ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. [QE][QS2]ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು. [QE]
42. [QS]ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. [QE][QS2]ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. [QE][QS]ಅವರು ಯೆಹೋವನ ಕಡೆಗೂ ನೋಡಿದರು; [QE][QS2]ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ. [QE]
43. [QS]ನಾನು ನನ್ನ ಶತ್ರುಗಳನ್ನು [QE][QS2]ತುಂಡುತುಂಡಾಗಿ ಕತ್ತರಿಸಿಹಾಕಿದೆ. [QE][QS]ಅವರು ನೆಲದ ಮೇಲಿನ ಧೂಳಿನಂತಾದರು. [QE][QS2]ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು. [QE][PBR]
44. [QS]ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. [QE][QS2]ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. [QE][QS2]ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ! [QE]
45. [QS]ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! [QE][QS2]ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು. [QE]
46. [QS]ಅನ್ಯದೇಶದ ಜನರು ಭಯಗೊಳ್ಳುವರು; [QE][QS2]ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು. [QE][PBR]
47. [QS]ಯೆಹೋವನು ಜೀವಸ್ವರೂಪನಾಗಿದ್ದಾನೆ. [QE][QS2]ನನ್ನ ಬಂಡೆಗೆ ಸ್ತೋತ್ರವಾಗಲಿ. [QE][QS2]ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ. [QE]
48. [QS]ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. [QE][QS2]ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು. [QE]
49. [QS]ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. [QE][PBR] [QS]ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. [QE][QS2]ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ. [QE]
50. [QS]ಯೆಹೋವನೇ, ಈ ಕಾರಣದಿಂದಲೇ ನಾನು ಅನ್ಯ ಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. [QE][QS2]ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು. [QE][PBR]
51. [QS]ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. [QE][QS2]ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. [QE][QS]ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. [QE][QS2]ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ. [QE][PBR]