1. {#1ರೋಮಿಗೆ ಪೌಲನ ನೌಕಾಯಾನ } [PS]ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.
2. ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಆ ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು. [PE]
3. [PS]ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.
4. ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.
5. ಸಿಲಿಸಿಯಾಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ನಾವು ದಾಟಿದೆವು. ಬಳಿಕ ನಾವು ಲುಸಿಯ ಪ್ರಾಂತ್ಯದಲ್ಲಿರುವ “ಮುರ” ಎಂಬ ಊರಿಗೆ ಬಂದೆವು.
6. ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು “ಮುರ”ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು. [PE]
7. [PS]ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.
8. ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು “ಸುರಕ್ಷಿತ ರೇವು” ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು. [PE]
9. [PS]ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ[* ಉಪವಾಸ ದಿನ ಯೆಹೂದ್ಯರ ಈ ಪವಿತ್ರದಿನ ಬಂದ ಮೇಲೆ ಚಳಿಗಾಲ ಆರಂಭವಾಗುತ್ತದೆ. ಸಮುದ್ರದ ಮೇಲೆ ಚಂಡಮಾರುತಗಳು ಬರುವ ಕಾಲವದು. ] ಆಗಲೇ ಕಳೆದಿತ್ತು.
10. ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.
11. ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.
12. ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು. [PE]
13. {#1ಬಿರುಗಾಳಿ } [PS]ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು[† ಲಂಗರು ಹಡಗಿನ ಪಕ್ಕದಲ್ಲಿ ಇಳಿಬಿಡುವ ಭಾರವಾದ ಕಬ್ಬಿಣದ ಸಲಕರಣೆ. ] ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.
14. ಆದರೆ “ಈಶಾನ್ಯ ಮಾರುತ”[‡ ಈಶಾನ್ಯ ಮಾರುತ ಉತ್ತರ ಮತ್ತು ಪೂರ್ವ ದಿಕ್ಕುಗಳ ನಡುವಿನ ಭಾಗ. ] ಎಂಬ ಬಿರುಗಾಳಿಯು ದ್ವೀಪದಲ್ಲಿ ಬೀಸತೊಡಗಿ
15. ಹಡಗನ್ನು ಬಡಿದುಕೊಂಡು ಹೋಯಿತು. ಹಡಗು ಅದಕ್ಕೆ ಎದುರಾಗಿ ಚಲಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗಾಳಿಯು ಬೀಸುವ ಕಡೆಗೆ ಹೋಗತೊಡಗಿದೆವು. [PE]
16. [PS]ನಾವು “ಕಾವ್ದ” ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು.
17. ಬಳಿಕ ಹಡಗು ಒಡೆದುಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ “ಸರ್ತಿಸ್” ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದ್ದರಿಂದ ಅವರು ಹಾಯಿಯನ್ನು[§ ಹಾಯಿ ಹಡಗಿಗೆ ಕಟ್ಟುವ ಬಟ್ಟೆ. ] ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು. [PE]
18. [PS]ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು.
19. ಒಂದು ದಿನವಾದ ನಂತರ ಹಡಗಿನ ಉಪಕರಣಗಳನ್ನು ತಮ್ಮ ಕೈಯಾರೆ ಎಸೆದು ಬಿಟ್ಟರು.
20. ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು. [PE]
21. [PS]ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.
22. ಈಗಲಾದರೋ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು.
23. ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.
24. ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.
25. ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.
26. ಆದರೆ ನಾವು ಒಂದು ದ್ವೀಪದ ದಡವನ್ನು ತಲುಪಬೇಕಾಗಿದೆ” ಎಂದು ಹೇಳಿದನು. [PE]
27. [PS]ಹದಿನಾಲ್ಕನೆಯ ರಾತ್ರಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡುತ್ತಾ ಪ್ರಯಾಣವನ್ನು ಮುಂದುವರಿಸಿದೆವು. ನಾವು ಭೂಮಿಗೆ ಸಮೀಪವಾಗಿದ್ದೇವೆಂದು ನಾವಿಕರು ಆಲೋಚಿಸಿಕೊಂಡರು.
28. ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.
29. ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು.
30. ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.
31. ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.
32. ಆದ್ದರಿಂದ ಸೈನಿಕರು ಹಗ್ಗಗಳನ್ನು ಕತ್ತರಿಸಿ ದೋಣಿಯನ್ನು ನೀರುಪಾಲು ಮಾಡಿದರು. [PE]
33. [PS]ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ.
34. ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
35. ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.
36. (36-37)ಆಗ ಜನರೆಲ್ಲರೂ ಪ್ರೋತ್ಸಾಹಗೊಂಡು ತಿನ್ನತೊಡಗಿದರು. ಆ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದರು.
37.
38. ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು. [PE]
39. {#1ನೌಕೆಯ ನಾಶ } [PS]ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.
40. ಆದ್ದರಿಂದ ಅವರು ಚುಕ್ಕಾಣಿಗಳನ್ನು[** ಚುಕ್ಕಾಣಿ ಹಡಗು ದಿಕ್ಕು ಬದಲಾಯಿಸಲು ಸಹಾಯ ಮಾಡುವ ಒಂದು ಸಾಧನ. ] ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.
41. ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು. [PE]
42. [PS]ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.
43. ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.
44. ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ. [PE]