పవిత్ర బైబిల్

ఈజీ టు రీడ్ వెర్షన్ (ERV) - తెలుగు
ఆమోసు
1. {#1ಇಸ್ರೇಲಿಗಾಗಿ ದುಃಖದ ಗೀತೆ } [PS]ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ. [PE][PBR]
2. [QS]ಇಸ್ರೇಲ್ ಕುಮಾರಿಯು ಬಿದ್ದಳು. [QE][QS2]ಇನ್ನೆಂದಿಗೂ ಆಕೆ ಏಳುವದಿಲ್ಲ. [QE][QS]ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. [QE][QS2]ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ. [QE][PBR]
3. [PS]ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. [PE][PBR] [QS]“ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ [QE][QS2]ನೂರು ಮಂದಿಯೊಂದಿಗೆ ಹಿಂದಿರುಗುವರು. [QE][QS]ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ [QE][QS2]ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.” [QE]
4. {#1ಇಸ್ರೇಲರು ಮರಳಿ ಬರುವಂತೆ ಯೆಹೋವನ ಆಗ್ರಹ } [QS]ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: [QE][QS]“ನನ್ನನ್ನು ಹುಡುಕುತ್ತಾ ಬಂದು ಬದುಕವವನಾಗು. [QE]
[QS2]5. ಆದರೆ ಬೇತೇಲಿನಲ್ಲಿ ಹುಡುಕಬೇಡ, [QE][QS]ಗಿಲ್ಗಾಲಿನಲ್ಲಿ ಕಾಲಿಡಬೇಡ. [QE][QS2]ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. [QE][QS]ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. [QE][QS2]ಮತ್ತು ಬೇತೇಲ್ ನಾಶಮಾಡಲ್ಪಡುವದು. [QE]
6. [QS]ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ. [QE][QS2]ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. [QE][QS2]ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು. [QE]
7. [QS](7-9)ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. [QE][QS2]ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. [QE][QS]ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. [QE][QS2]ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. [QE][QS]ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. [QE][QS2]ಆತನ ಹೆಸರು ಯೆಹೋವನು. [QE][QS]ಆತನು ಒಂದು ಬಲವಾದ ನಗರವನ್ನು ರಕ್ಷಿಸಿ [QE][QS2]ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” [QE]{#1ಇಸ್ರೇಲರು ನಡಿಸಿದ ದುಷ್ಕೃತ್ಯ } [QS]ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. [QE][QS2]ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ. [QE]
8.
9.
10. [QS]ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. [QE][QS2]ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು. [QE]
11. [QS]ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. [QE][QS2]ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. [QE][QS]ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. [QE][QS2]ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. [QE][QS]ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. [QE][QS2]ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ. [QE]
12. [QS]ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. [QE][QS2]ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. [QE][QS]ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. [QE][QS2]ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. [QE][QS2]ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ. [QE]
13. [QS]ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. [QE][QS2]ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ. [QE]
14. [QS]ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. [QE][QS2]ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. [QE][QS]ಆಗ ನೀವು ಬದುಕುವಿರಿ. [QE][QS2]ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು. [QE]
15. [QS]ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, [QE][QS2]ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. [QE][QS2]ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು [QE][QS2]ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು. [QE]
16. {#1ಮಹಾ ಶೋಕದ ದಿನಗಳು ಬರುವವು } [QS]ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, [QE][QS]“ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. [QE][QS2]ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. [QE][QS2]ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು. [QE]
17. [QS]ದ್ರಾಕ್ಷಿತೋಟಗಳಲ್ಲಿ ಜನರು ಯಾಕೆಅಳುವರು? [QE][QS2]ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” [QE][QS2]ಇದು ಯೆಹೋವನ ನುಡಿ. [QE]
18. [QS]ನಿಮ್ಮಲ್ಲಿ ಕೆಲವರಿಗೆ ಯೆಹೋವನ [QE][QS2]ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. [QE][QS]ಆ ದಿವಸವನ್ನು ಯಾಕೆ ನೀವು ನೋಡಬೇಕು? [QE][QS2]ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು. [QE]
19. [QS]ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು [QE][QS2]ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. [QE][QS]ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ [QE][QS2]ಗೋಡೆಗೆ ಒರಗಿ ನಿಂತಾಗ [QE][QS2]ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ. [QE]
20. [QS]ಯೆಹೋವನ ನ್ಯಾಯತೀರ್ಪಿನ ದಿವಸವು [QE][QS2]ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು. [QE]
21. {#1ಇಸ್ರೇಲಿನ ಆರಾಧನೆಯು ಯೆಹೋವನಿಗೆ ಬೇಕಿಲ್ಲ } [QS]“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. [QE][QS2]ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. [QE][QS2]ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ. [QE]
22. [QS]ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ [QE][QS2]ನಾನು ಅದನ್ನು ಸ್ವೀಕರಿಸುವುದಿಲ್ಲ. [QE][QS]ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ [QE][QS2]ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ. [QE]
23. [QS]ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. [QE][QS2]ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ. [QE]
24. [QS]ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. [QE][QS2]ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ. [QE]
25. [QS]ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ [QE][QS2]ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ. [QE]
26. [QS]ಆದರೂ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. [QE][QS2]ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ. [QE]
27. [QS]ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.” [QE][QS2]ಇದು ಯೆಹೋವನ ನುಡಿ. [QE][PBR]
మొత్తం 9 అధ్యాయాలు, ఎంపిక చేయబడింది అధ్యాయము 5 / 9
1 2 3 4 5 6 7 8 9
1 {#1ಇಸ್ರೇಲಿಗಾಗಿ ದುಃಖದ ಗೀತೆ } ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ. 2 ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ. 3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.” 4 {#1ಇಸ್ರೇಲರು ಮರಳಿ ಬರುವಂತೆ ಯೆಹೋವನ ಆಗ್ರಹ } ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕವವನಾಗು. 5 ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು. 6 ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು. 7 (7-9)ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” {#1ಇಸ್ರೇಲರು ನಡಿಸಿದ ದುಷ್ಕೃತ್ಯ } ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ. 8 9 10 ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು. 11 ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ. 12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ. 13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ. 14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು. 15 ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು. 16 {#1ಮಹಾ ಶೋಕದ ದಿನಗಳು ಬರುವವು } ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು. 17 ದ್ರಾಕ್ಷಿತೋಟಗಳಲ್ಲಿ ಜನರು ಯಾಕೆಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ. 18 ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು. 19 ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ. 20 ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು. 21 {#1ಇಸ್ರೇಲಿನ ಆರಾಧನೆಯು ಯೆಹೋವನಿಗೆ ಬೇಕಿಲ್ಲ } “ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ. 22 ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ. 23 ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ. 24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ. 25 ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ. 26 ಆದರೂ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ. 27 ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.” ಇದು ಯೆಹೋವನ ನುಡಿ.
మొత్తం 9 అధ్యాయాలు, ఎంపిక చేయబడింది అధ్యాయము 5 / 9
1 2 3 4 5 6 7 8 9
×

Alert

×

Telugu Letters Keypad References