పవిత్ర బైబిల్

ఈజీ టు రీడ్ వెర్షన్ (ERV) - తెలుగు
దానియేలు
1. {#1ಗೋಡೆಯ ಮೇಲೆ ಅದ್ಭುತ ಲೇಖನ } [PS]ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು.
2. ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು.
3. ಆದ್ದರಿಂದ ಅವರು ಜೆರುಸಲೇಮಿನ ಆಲಯದಿಂದ ತಂದಿದ್ದ ಆ ಪಾತ್ರೆಗಳನ್ನು ತಂದರು. ರಾಜನು, ಅವನ ಅಧಿಕಾರಿಗಳು, ಅವನ ಪತ್ನಿಯರು, ಅವನ ಉಪಪತ್ನಿಯರು ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದರು.
4. ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು. [PE]
5.
6. [PS]ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು. [PE][PS]ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.
7. ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. [PE]
8. [PS]ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.
9. ಆಗ ಅರಸನಾದ ಬೇಲ್ಶಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು. [PE]
10. [PS]ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.
11. ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
12. ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು. [PE]
13. [PS]ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
14. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.
15. ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.
16. ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಡಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು. [PE]
17.
18. [PS]ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು. [PE][PS]“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.
19. ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು. [PE]
20. [PS]“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.
21. ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು. [PE]
22. [PS]“ಬೇಲ್ಶಚ್ಚರನೇ, ಇವುಗಳೆಲ್ಲ ನಿನಗೆ ತಿಳಿದೇ ಇವೆ. ನೀನು ನೆಬೂಕದ್ನೆಚ್ಚರನ ಮಗ. ಆದರೂ ನೀನು ನಮ್ರತೆಯಿಂದ ವರ್ತಿಸಲಿಲ್ಲ.
23. ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
24. ಆದ್ದರಿಂದ ದೇವರು ಗೋಡೆಯ ಮೇಲೆ ಬರೆಯಲು ಆ ಕೈಯನ್ನು ಕಳುಹಿಸಿಕೊಟ್ಟನು.
25. ಆ ಗೋಡೆಯ ಮೇಲೆ ಬರೆದ ಶಬ್ದಗಳು ಹೀಗಿವೆ: [PE][PBR] [PS]*ಮೆನೇ, ಮೆನೇ, ತೆಕೇಲ್, ಉಪರ್ಸಿನ್.* [PE][PBR]
26. [PS]“ಈ ಶಬ್ದಗಳ ಅರ್ಥ ಹೀಗಿದೆ: [PE][PBR] [PS][US]ಮೆನೇ ಎಂದರೆ [UE] [PE][QS2]ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. [QE]
27. [PS][US]ತೆಕೇಲ್ ಎಂದರೆ[UE] [PE][QS2]ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ. [QE]
28. [PS][US]ಉಪರ್ಸಿನ್ ಎಂದರೆ[UE] [PE][QS2]ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. [QE][QS2]ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು. [QE][PBR]
29. [PS]ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
30. ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.
31. ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು. [PE]

గమనికలు

No Verse Added

మొత్తం 12 అధ్యాయాలు, ఎంపిక చేయబడింది అధ్యాయము 5 / 12
1 2 3 4 5 6 7 8 9 10 11 12
దానియేలు 5:24
1 {#1ಗೋಡೆಯ ಮೇಲೆ ಅದ್ಭುತ ಲೇಖನ } ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು. 2 ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು. 3 ಆದ್ದರಿಂದ ಅವರು ಜೆರುಸಲೇಮಿನ ಆಲಯದಿಂದ ತಂದಿದ್ದ ಆ ಪಾತ್ರೆಗಳನ್ನು ತಂದರು. ರಾಜನು, ಅವನ ಅಧಿಕಾರಿಗಳು, ಅವನ ಪತ್ನಿಯರು, ಅವನ ಉಪಪತ್ನಿಯರು ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದರು. 4 ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು. 5 6 ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು. ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ. 7 ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. 8 ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ. 9 ಆಗ ಅರಸನಾದ ಬೇಲ್ಶಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು. 10 ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ. 11 ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು. 12 ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು. 13 ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ? 14 ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ. 15 ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ. 16 ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಡಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು. 17 18 ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು. “ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು. 19 ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು. 20 “ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು. 21 ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು. 22 “ಬೇಲ್ಶಚ್ಚರನೇ, ಇವುಗಳೆಲ್ಲ ನಿನಗೆ ತಿಳಿದೇ ಇವೆ. ನೀನು ನೆಬೂಕದ್ನೆಚ್ಚರನ ಮಗ. ಆದರೂ ನೀನು ನಮ್ರತೆಯಿಂದ ವರ್ತಿಸಲಿಲ್ಲ. 23 ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ. 24 ಆದ್ದರಿಂದ ದೇವರು ಗೋಡೆಯ ಮೇಲೆ ಬರೆಯಲು ಆ ಕೈಯನ್ನು ಕಳುಹಿಸಿಕೊಟ್ಟನು. 25 ಆ ಗೋಡೆಯ ಮೇಲೆ ಬರೆದ ಶಬ್ದಗಳು ಹೀಗಿವೆ: PBR *ಮೆನೇ, ಮೆನೇ, ತೆಕೇಲ್, ಉಪರ್ಸಿನ್.* PBR 26 “ಈ ಶಬ್ದಗಳ ಅರ್ಥ ಹೀಗಿದೆ: PBR US ಮೆನೇ ಎಂದರೆ UE QS2 ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. 27 US ತೆಕೇಲ್ ಎಂದರೆUE QS2 ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ. 28 US ಉಪರ್ಸಿನ್ ಎಂದರೆUE QS2 ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. QS2 ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು. PBR 29 ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು. 30 ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು. 31 ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು.
మొత్తం 12 అధ్యాయాలు, ఎంపిక చేయబడింది అధ్యాయము 5 / 12
1 2 3 4 5 6 7 8 9 10 11 12
Common Bible Languages
West Indian Languages
×

Alert

×

telugu Letters Keypad References