పవిత్ర బైబిల్

ఈజీ టు రీడ్ వెర్షన్ (ERV) - తెలుగు
దానియేలు
1. {#1ದಾನಿಯೇಲನು ಮತ್ತು ಸಿಂಹಗಳು } [PS]ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.
2. ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.
3. ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.
4. ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ. [PE]
5.
6. [PS]ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು. [PE][PS]ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು.
7. ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.
8. ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”
9. ರಾಜನಾದ ದಾರ್ಯಾವೆಷನು ಆ ನಿಬಂಧನೆಯನ್ನು ಶಾಸನವನ್ನಾಗಿ ಮಾಡಿ ರುಜು ಹಾಕಿದನು. [PE]
10.
11. [PS]ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು. [PE][PS]ಆಗ ಆ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು.
12. ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೆಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವಿಯಲ್ಲವೆ?” ಎಂದು ಕೇಳಿದರು. [PE]
13. [PS]ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರಕೊಟ್ಟನು. [PE]
14. [PS]ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು. [PE][PS]ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು.
15. ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು. [PE]
16. [PS]ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.
17. ಕೂಡಲೆ ಒಂದು ದೊಡ್ಡ ಕಲ್ಲುಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲುಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲುಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.
18. ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ. [PE]
19. [PS]ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೆಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು.
20. ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು. [PE]
21. [PS]ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು.
22. ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು. [PE]
23.
24. [PS]ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ. [PE]
25. [PS]ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು. [PE][PS]ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: [PE][PBR] [MIS]ಶುಭಾಶಯಗಳು. [MIE]
26. [PIS] ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. [PIE][PBR] [QS]ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. [QE][QS2]ಆತನು ನಿರಂತರವೂ ಇರುವಾತನಾಗಿದ್ದಾನೆ. [QE][QS]ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. [QE][QS2]ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ. [QE]
27. [PS]ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. [PE][QS2]ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. [QE][QS2]ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು. [QE][PBR]
28. [PS]ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು. [PE]

గమనికలు

No Verse Added

మొత్తం 12 అధ్యాయాలు, ఎంపిక చేయబడింది అధ్యాయము 6 / 12
1 2 3 4 5 6 7 8 9 10 11 12
దానియేలు 6:13
1 {#1ದಾನಿಯೇಲನು ಮತ್ತು ಸಿಂಹಗಳು } ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು. 2 ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು. 3 ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು. 4 ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ. 5 6 ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು. ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು. 7 ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು. 8 ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.” 9 ರಾಜನಾದ ದಾರ್ಯಾವೆಷನು ಆ ನಿಬಂಧನೆಯನ್ನು ಶಾಸನವನ್ನಾಗಿ ಮಾಡಿ ರುಜು ಹಾಕಿದನು. 10 11 ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು. ಆಗ ಆ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು. 12 ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೆಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವಿಯಲ್ಲವೆ?” ಎಂದು ಕೇಳಿದರು. 13 ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರಕೊಟ್ಟನು. 14 ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು. ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು. 15 ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು. 16 ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು. 17 ಕೂಡಲೆ ಒಂದು ದೊಡ್ಡ ಕಲ್ಲುಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲುಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲುಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು. 18 ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ. 19 ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೆಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು. 20 ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು. 21 ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು. 22 ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು. 23 24 ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ. 25 ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು. ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: PBR MIS ಶುಭಾಶಯಗಳು. MIE PIS 26 ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. PIE BR ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. QS2 ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. QS2 ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ. 27 ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. QS2 ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. QS2 ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು. PBR 28 ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.
మొత్తం 12 అధ్యాయాలు, ఎంపిక చేయబడింది అధ్యాయము 6 / 12
1 2 3 4 5 6 7 8 9 10 11 12
Common Bible Languages
West Indian Languages
×

Alert

×

telugu Letters Keypad References