పవిత్ర బైబిల్

ఈజీ టు రీడ్ వెర్షన్ (ERV) - తెలుగు
ద్వితీయోపదేశకాండమ
1. {#1ಯೆಹೋವನನ್ನು ಆರಾಧಿಸುವ ಸ್ಥಳ } [PS]“ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.
2. ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.
3. ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು. [PE]
4. [PS]“ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು.
5. ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
6. ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.
7. ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ. [PE]
8. [PS](8-9)“ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.
9.
10. ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.
11. ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
12. ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.
13. ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ನೀವು ಬಲಿಯನ್ನು ಅರ್ಪಿಸಬೇಡಿ.
14. ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ. [PE]
15. [PS]“ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು.
16. ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು. [PE]
17. [PS]“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.
18. ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
19. ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ. [PE]
20. [PS](20-21)“ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.
21.
22. ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು.
23. ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.
24. ರಕ್ತವನ್ನು ನೀರಿನಂತೆ ನೆಲದಲ್ಲಿ ಚೆಲ್ಲಿಬಿಡಬೇಕು.
25. ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. [PE]
26. [PS]“ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.
27. ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.
28. ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. [PE]
29. [PS]“ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.
30. ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!
31. ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ. [PE]
32. [PS]“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು. [PE]
మొత్తం 34 అధ్యాయాలు, ఎంపిక చేయబడింది అధ్యాయము 12 / 34
1 {#1ಯೆಹೋವನನ್ನು ಆರಾಧಿಸುವ ಸ್ಥಳ } “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. 2 ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ. 3 ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು. 4 “ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು. 5 ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು. 6 ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು. 7 ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ. 8 (8-9)“ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ. 9 10 ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ. 11 ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು. 12 ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು. 13 ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ನೀವು ಬಲಿಯನ್ನು ಅರ್ಪಿಸಬೇಡಿ. 14 ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ. 15 “ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು. 16 ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು. 17 “ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು. 18 ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ. 19 ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ. 20 (20-21)“ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ. 21 22 ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು. 23 ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ. 24 ರಕ್ತವನ್ನು ನೀರಿನಂತೆ ನೆಲದಲ್ಲಿ ಚೆಲ್ಲಿಬಿಡಬೇಕು. 25 ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. 26 “ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು. 27 ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು. 28 ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. 29 “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ. 30 ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ! 31 ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ. 32 “ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.
మొత్తం 34 అధ్యాయాలు, ఎంపిక చేయబడింది అధ్యాయము 12 / 34
×

Alert

×

Telugu Letters Keypad References