పవిత్ర బైబిల్

ఈజీ టు రీడ్ వెర్షన్ (ERV) - తెలుగు
ప్రసంగి
1. {#1ಪ್ರತಿಯೊಂದಕ್ಕೂ ಸೂಕ್ತ ಸಮಯವಿದೆ } [PS]ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ. [PE][PBR]
2. [QS]ಹುಟ್ಟುವ ಸಮಯ, [QE][QS2]ಸಾಯುವ ಸಮಯ. [QE][QS]ನೆಡುವ ಸಮಯ, [QE][QS2]ಸಸಿಗಳನ್ನು ಕೀಳುವ ಸಮಯ. [QE]
3. [QS]ಕೊಲ್ಲುವ ಸಮಯ, [QE][QS2]ವಾಸಿಮಾಡುವ ಸಮಯ. [QE][QS]ನಾಶಮಾಡುವ ಸಮಯ, [QE][QS2]ಕಟ್ಟುವ ಸಮಯ. [QE]
4. [QS]ಅಳುವ ಸಮಯ, [QE][QS2]ನಗುವ ಸಮಯ. [QE][QS]ಗೋಳಾಡುವ ಸಮಯ, [QE][QS2]ಕುಣಿದಾಡುವ ಸಮಯ. [QE]
5. [QS]ಆಯುಧಗಳನ್ನು ಬಿಸಾಡುವ ಸಮಯ, [QE][QS2]ಆಯುಧಗಳನ್ನು ಎತ್ತಿಕೊಳ್ಳುವ ಸಮಯ. [QE][QS]ಅಪ್ಪಿಕೊಳ್ಳುವ ಸಮಯ, [QE][QS2]ಅಪ್ಪಿಕೊಳ್ಳದಿರುವ ಸಮಯ. [QE]
6. [QS]ಹುಡುಕುವ ಸಮಯ, [QE][QS2]ಹುಡುಕದಿರುವ ಸಮಯ. [QE][QS]ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, [QE][QS2]ವಸ್ತುಗಳನ್ನು ಬಿಸಾಡುವ ಸಮಯ. [QE]
7. [QS]ಬಟ್ಟೆಯನ್ನು ಹರಿಯುವ ಸಮಯ, [QE][QS2]ಬಟ್ಟೆಯನ್ನು ಹೊಲಿಯುವ ಸಮಯ. [QE][QS]ಮೌನವಾಗಿರುವ ಸಮಯ, [QE][QS2]ಮಾತಾಡುವ ಸಮಯ. [QE]
8. [QS]ಪ್ರೀತಿ ಮಾಡುವ ಸಮಯ, [QE][QS2]ದ್ವೇಷಿಸುವ ಸಮಯ. [QE][QS]ಯುದ್ಧಮಾಡುವ ಸಮಯ, [QE][QS2]ಶಾಂತಿಯಿಂದಿರುವ ಸಮಯ. [QE]
9. {#1ಲೋಕವು ದೇವರ ಹತೋಟಿಯಲ್ಲಿದೆ } [PS]ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?
10. ದೇವರು ಮನುಷ್ಯರಿಗೆ ಕೊಟ್ಟಿರುವ ಪ್ರಯಾಸದ ಕೆಲಸವನ್ನೆಲ್ಲಾ ನೋಡಿದ್ದೇನೆ.
11. ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು. [PE]
12. [PS]ಬದುಕಿರುವಷ್ಟು ಕಾಲ ಸಂತೋಷವಾಗಿದ್ದು ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯರಿಗೆ ಇಲ್ಲವೆಂದು ಕಲಿತುಕೊಂಡೆನು.
13. ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಕೆಲಸವನ್ನು ಸಂತೋಷದಿಂದ ಮಾಡುವುದು ದೇವರಿಗೆ ಇಷ್ಟವಾಗಿದೆ. ಅವು ದೇವರ ವರವಾಗಿವೆ. [PE]
14. [PS]ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.
15. ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆಮತ್ತೆ ಬರಮಾಡುವನು. [PE]
16. [PS]ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು.
17. ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು. [PE]
18. {#1ಮನುಷ್ಯರು ಪ್ರಾಣಿಗಳಂತಿರುವರೇ? } [PS]ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.
19. ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.
20. ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.
21. ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?” [PE]
22. [PS]ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು? [PE]

గమనికలు

No Verse Added

మొత్తం 12 అధ్యాయాలు, ఎంపిక చేయబడింది అధ్యాయము 3 / 12
1 2 3 4 5 6 7 8 9 10 11 12
ప్రసంగి 3:14
1 {#1ಪ್ರತಿಯೊಂದಕ್ಕೂ ಸೂಕ್ತ ಸಮಯವಿದೆ } ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ. PBR 2 ಹುಟ್ಟುವ ಸಮಯ, QS2 ಸಾಯುವ ಸಮಯ. ನೆಡುವ ಸಮಯ, QS2 ಸಸಿಗಳನ್ನು ಕೀಳುವ ಸಮಯ. 3 ಕೊಲ್ಲುವ ಸಮಯ, QS2 ವಾಸಿಮಾಡುವ ಸಮಯ. ನಾಶಮಾಡುವ ಸಮಯ, QS2 ಕಟ್ಟುವ ಸಮಯ. 4 ಅಳುವ ಸಮಯ, QS2 ನಗುವ ಸಮಯ. ಗೋಳಾಡುವ ಸಮಯ, QS2 ಕುಣಿದಾಡುವ ಸಮಯ. 5 ಆಯುಧಗಳನ್ನು ಬಿಸಾಡುವ ಸಮಯ, QS2 ಆಯುಧಗಳನ್ನು ಎತ್ತಿಕೊಳ್ಳುವ ಸಮಯ. ಅಪ್ಪಿಕೊಳ್ಳುವ ಸಮಯ, QS2 ಅಪ್ಪಿಕೊಳ್ಳದಿರುವ ಸಮಯ. 6 ಹುಡುಕುವ ಸಮಯ, QS2 ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, QS2 ವಸ್ತುಗಳನ್ನು ಬಿಸಾಡುವ ಸಮಯ. 7 ಬಟ್ಟೆಯನ್ನು ಹರಿಯುವ ಸಮಯ, QS2 ಬಟ್ಟೆಯನ್ನು ಹೊಲಿಯುವ ಸಮಯ. ಮೌನವಾಗಿರುವ ಸಮಯ, QS2 ಮಾತಾಡುವ ಸಮಯ. 8 ಪ್ರೀತಿ ಮಾಡುವ ಸಮಯ, QS2 ದ್ವೇಷಿಸುವ ಸಮಯ. ಯುದ್ಧಮಾಡುವ ಸಮಯ, QS2 ಶಾಂತಿಯಿಂದಿರುವ ಸಮಯ. 9 {#1ಲೋಕವು ದೇವರ ಹತೋಟಿಯಲ್ಲಿದೆ } ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು? 10 ದೇವರು ಮನುಷ್ಯರಿಗೆ ಕೊಟ್ಟಿರುವ ಪ್ರಯಾಸದ ಕೆಲಸವನ್ನೆಲ್ಲಾ ನೋಡಿದ್ದೇನೆ. 11 ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು. 12 ಬದುಕಿರುವಷ್ಟು ಕಾಲ ಸಂತೋಷವಾಗಿದ್ದು ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯರಿಗೆ ಇಲ್ಲವೆಂದು ಕಲಿತುಕೊಂಡೆನು. 13 ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಕೆಲಸವನ್ನು ಸಂತೋಷದಿಂದ ಮಾಡುವುದು ದೇವರಿಗೆ ಇಷ್ಟವಾಗಿದೆ. ಅವು ದೇವರ ವರವಾಗಿವೆ. 14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ. 15 ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆಮತ್ತೆ ಬರಮಾಡುವನು. 16 ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು. 17 ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು. 18 {#1ಮನುಷ್ಯರು ಪ್ರಾಣಿಗಳಂತಿರುವರೇ? } ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ. 19 ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ. 20 ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ. 21 ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?” 22 ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?
మొత్తం 12 అధ్యాయాలు, ఎంపిక చేయబడింది అధ్యాయము 3 / 12
1 2 3 4 5 6 7 8 9 10 11 12
Common Bible Languages
West Indian Languages
×

Alert

×

telugu Letters Keypad References