పవిత్ర బైబిల్

ఈజీ టు రీడ్ వెర్షన్ (ERV) - తెలుగు
ప్రసంగి
1. {#1ಯಾರು ಮೇಲು? ಸತ್ತವರೋ? ಬದುಕಿರುವವರೋ? } [PS]ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.
2. ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು.
3. ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ. [PE]
4. {#1ಕಷ್ಟಪಟ್ಟು ದುಡಿಯುವುದೇಕೆ? }
5. [PS]ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ. [PE][PS]ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”
6. ಇದೇನೊ ನಿಜವಿರಬಹುದು. ಆದರೆ ದುರಾಶೆಪಡುವುದಕ್ಕಿಂತ ಇರುವುದರಲ್ಲಿ ತೃಪ್ತರಾಗಿರುವುದೇ ಮೇಲು. [PE]
7. [PS]ಲೋಕದಲ್ಲಿ ಮತ್ತೊಂದು ವ್ಯರ್ಥವನ್ನು ಕಂಡೆನು.
8. ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ. [PE]
9. {#1ಒಗಟ್ಟಿನಲ್ಲಿ ಬಲವಿದೆ }
10. [PS]ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು. [PE]
11. [PS]ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಬಿದ್ದಾಗ ಒಬ್ಬಂಟಿಗನಾಗಿದ್ದರೆ ಎತ್ತಲು ಯಾರೂ ಇಲ್ಲದಿರುವುದರಿಂದ ಅವನಿಗೆ ದುರ್ಗತಿಯಾಗುವುದು. [PE]
12. [PS]ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ. [PE]
13. [PS]ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು. [PE]{#1ಜನರು, ರಾಜಕೀಯ ಮತ್ತು ಪ್ರಖ್ಯಾತಿ } [PS]ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.
14. ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.
15. ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು.
16. ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ. [PE]
మొత్తం 12 అధ్యాయాలు, ఎంపిక చేయబడింది అధ్యాయము 4 / 12
1 2 3 4 5 6 7 8 9 10 11 12
1 {#1ಯಾರು ಮೇಲು? ಸತ್ತವರೋ? ಬದುಕಿರುವವರೋ? } ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ. 2 ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು. 3 ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ. 4 {#1ಕಷ್ಟಪಟ್ಟು ದುಡಿಯುವುದೇಕೆ? } 5 ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ. ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.” 6 ಇದೇನೊ ನಿಜವಿರಬಹುದು. ಆದರೆ ದುರಾಶೆಪಡುವುದಕ್ಕಿಂತ ಇರುವುದರಲ್ಲಿ ತೃಪ್ತರಾಗಿರುವುದೇ ಮೇಲು. 7 ಲೋಕದಲ್ಲಿ ಮತ್ತೊಂದು ವ್ಯರ್ಥವನ್ನು ಕಂಡೆನು. 8 ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ. 9 {#1ಒಗಟ್ಟಿನಲ್ಲಿ ಬಲವಿದೆ } 10 ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು. 11 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಬಿದ್ದಾಗ ಒಬ್ಬಂಟಿಗನಾಗಿದ್ದರೆ ಎತ್ತಲು ಯಾರೂ ಇಲ್ಲದಿರುವುದರಿಂದ ಅವನಿಗೆ ದುರ್ಗತಿಯಾಗುವುದು. 12 ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ. 13 ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು. {#1ಜನರು, ರಾಜಕೀಯ ಮತ್ತು ಪ್ರಖ್ಯಾತಿ } ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ. 14 ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು. 15 ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು. 16 ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.
మొత్తం 12 అధ్యాయాలు, ఎంపిక చేయబడింది అధ్యాయము 4 / 12
1 2 3 4 5 6 7 8 9 10 11 12
×

Alert

×

Telugu Letters Keypad References