పవిత్ర బైబిల్

ఈజీ టు రీడ్ వెర్షన్ (ERV) - తెలుగు
ఎఫెసీయులకు
1. {#1ಮಕ್ಕಳು ಮತ್ತು ತಂದೆತಾಯಿಗಳು } [PS]ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ.
2. ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.”[✡ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5:16. ] ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ.
3. ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”[✡ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5:16. ] [PE]
4.
5. [PS]ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ. [PE]{#1ಸೇವಕರು ಮತ್ತು ಯಜಮಾನರು } [PS]ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.
6. ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು.
7. ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ.
8. ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು. [PE]
9.
10. [PS]ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು. [PE]{#1ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ } [PS]ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.
11. ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.
12. ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.
13. ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು. [PE]
14. [PS]ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು
15. ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ.
16. ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು.
17. ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.
18. ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. [PE]
19. [PS]ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.
20. ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ. [PE]
21. {#1ವಂದನೆಗಳು } [PS]ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.
22. ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು. [PE]
23. [PS]ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.
24. ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ. [PE]
మొత్తం 6 అధ్యాయాలు, ఎంపిక చేయబడింది అధ్యాయము 6 / 6
1 2 3 4 5 6
1 {#1ಮಕ್ಕಳು ಮತ್ತು ತಂದೆತಾಯಿಗಳು } ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ. 2 ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.”[✡ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5: 16. ] ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ. 3 ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”[✡ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5: 16. ] 4 5 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ. {#1ಸೇವಕರು ಮತ್ತು ಯಜಮಾನರು } ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ. 6 ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು. 7 ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ. 8 ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು. 9 10 ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು. {#1ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ } ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ. 11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು. 12 ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ. 13 ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು. 14 ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು 15 ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ. 16 ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು. 17 ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ. 18 ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. 19 ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ. 20 ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ. 21 {#1ವಂದನೆಗಳು } ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು. 22 ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು. 23 ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ. 24 ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.
మొత్తం 6 అధ్యాయాలు, ఎంపిక చేయబడింది అధ్యాయము 6 / 6
1 2 3 4 5 6
×

Alert

×

Telugu Letters Keypad References