1. {#1ಈಜಿಪ್ಟಿನಲ್ಲಿ ಯಾಕೋಬನ ಕುಟುಂಬ } [PS]ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ:
2. ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
3. ಇಸ್ಸಾಕಾರ್, ಜೆಬುಲೂನ್, ಬೆನ್ಯಾಮೀನ್,
4. ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.
5. ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.) [PE]
6. [PS]ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.
7. ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು. [PE]
8. {#1ಇಸ್ರೇಲರಿಗೆ ಹಿಂಸೆ } [PS]ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.
9. ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು.
10. ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು. [PE]
11.
12. [PS]ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು. [PE][PS]ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.
13. ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು. [PE]
14.
15. [PS]ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆಗಳನ್ನೂ ಗಾರೆಗಳನ್ನೂ ಬೇಸಾಯವನ್ನೂ ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು. [PE]{#1ದೇವರನ್ನು ಹಿಂಬಾಲಿಸಿದ ದಾದಿಯರು } [PS]ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ,
16. “ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು. [PE]
17.
18. [PS]ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು. [PE]
19. [PS]ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು. [PE][PS]ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.
20. (20-21)ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. [PE][PS]ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.
21.
22. ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು. [PE]