1. {#1ಯೆಹೋವನ ಮಹಿಮೆ ದೇವಾಲಯವನ್ನು ಬಿಟ್ಟಿದ್ದು } [PS]ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
2. ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. [PE][PS]ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.
3. ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
4. ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.
5. ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು. [PE]
6. [PS]ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನ್ನು ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
7. ಕೆರೂಬಿದೂತರಲ್ಲೊಬ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸ್ವಲ್ಪವನ್ನು ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
8. ಕೆರೂಬಿದೂತರ ರೆಕ್ಕೆಯ ಕೆಳಗೆ ಮನುಷ್ಯರ ಕೈಗಳಂತೆ ಕಾಣುತ್ತಿದ್ದ ಕೈಗಳಿದ್ದವು. [PE]
9. [PS]ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.
10. ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.
11. ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.
12. ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಬೆನ್ನಿನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
13. ಈ ಚಕ್ರಗಳಿಗೆ “ಚರಕ ಚಕ್ರ” ಎಂಬುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು. [PE]
14. [PS]ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ.
15. ಈ ಜೀವಿಗಳು ಮೊದಲು ನಾನು ಕೆಬಾರ್ ನದಿಯ ಬಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಬೇಕು ಎಂದು ಆಗ ನನಗೆ ಮನದಟ್ಟಾಯಿತು. ಬಳಿಕ ಕೆರೂಬಿಗಳು ಮೇಲಕ್ಕೆ ಏರಿದವು.
16. ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ.
17. ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನ್ನು ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು. [PE]
18. [PS]ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
19. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು. [PE]
20. [PS]ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು.
21. ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.
22. ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು. [PE]