పవిత్ర బైబిల్

ఈజీ టు రీడ్ వెర్షన్ (ERV) - తెలుగు
యెహెజ్కేలు
1. {#1ಯೆಹೋವನು ಯೆಹೆಜ್ಕೇಲನ ಸಂಗಡ ಮಾತನಾಡಿದ್ದು }
2. [PS]ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು. [PE][PS]ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು.
3. ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ.
4. ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು.
5. ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು. [PE]
6. [PS]“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.
7. ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು. [PE]
8.
9. [PS]“ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.” [PE][PS]ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು.
10. ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು. [PE]
మొత్తం 48 అధ్యాయాలు, ఎంపిక చేయబడింది అధ్యాయము 2 / 48
1 {#1ಯೆಹೋವನು ಯೆಹೆಜ್ಕೇಲನ ಸಂಗಡ ಮಾತನಾಡಿದ್ದು } 2 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು. ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು. 3 ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ. 4 ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು. 5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು. 6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು. 7 ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು. 8 9 “ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.” ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು. 10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.
మొత్తం 48 అధ్యాయాలు, ఎంపిక చేయబడింది అధ్యాయము 2 / 48
×

Alert

×

Telugu Letters Keypad References