1. {#1ತಾನು ದೇವರಂತೆ ಎಂದು ತೂರ್ ನೆನಸಿತು } [PS]ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,
2. “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: [PE][PBR] [QS]“ ‘ನೀನು ಬಹಳ ಹೆಮ್ಮೆಯುಳ್ಳವನು. [QE][QS2]“ನಾನು ದೇವರು ಎಂದು ಹೇಳುವೆ. [QE][QS]ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ [QE][QS2]ನಾನು ಕೂತಿರುತ್ತೇನೆ ಎಂದು ಅನ್ನುವೆ.” [QE][PBR] [QS]“ ‘ಆದರೆ ನೀನು ಮನುಷ್ಯನು, ದೇವರಲ್ಲ. [QE][QS2]ನೀನು ದೇವರೆಂದು ನೀನೇ ನೆನಸಿಕೊಳ್ಳುವೆ. [QE]
3. [QS]ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. [QE][QS2]ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ. [QE]
4. [QS]ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶಬರ್ಯವನ್ನು ಕೂಡಿಹಾಕಿದ್ದೀ. [QE][QS2]ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ. [QE]
5. [QS]ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶಬರ್ಯವು ಬೆಳೆಯುವಂತೆ ಮಾಡಿದ್ದೀ. [QE][QS2]ಆ ಐಶಬರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ. [QE][PBR]
6. [QS]“ ‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: [QE][QS]ತೂರ್, ನೀನು ದೇವರೆಂದು ನೆನಸಿಕೊಂಡಿಯಲ್ಲಾ? [QE]
7. [QS]ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. [QE][QS2]ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, [QE][QS]ಅವರು ತಮ್ಮ ಖಡ್ಗವನ್ನು ಎಳೆದು [QE][QS2]ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ [QE][QS2]ಅಪೂರ್ವ ವಸ್ತುಗಳನ್ನು ನಾಶಮಾಡುವರು. [QE]
8. [QS]ನಿನ್ನ ಬನತೆಯನ್ನು ಕೆಡಿಸಿಬಿಡುವರು. ಸಮಾಧಿಗೆ ನಿನ್ನನ್ನು ತರುವರು. [QE][QS2]ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು. [QE]
9. [QS]ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. [QE][QS2]ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? [QE][QS]ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. [QE][QS2]ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ. [QE]
10. [QS]ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. [QE][QS2]ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು.’ ” [QE][QS]ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. [QE][PBR]
11. [PS]ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,
12. “ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: [PE][PBR] [QS]“ ‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. [QE][QS2]ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ. [QE]
13. [QS]ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. [QE][QS2]ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ [QE][QS2]ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. [QE][QS]ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. [QE][QS2]ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು. [QE]
14. [QS]ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ. [QE][QS2]ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು. [QE][QS]ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. [QE][QS2]ನೀನು ಬೆಂಕಿಯಂತೆ ಹೊಳೆಯುವ ರತ್ನಗಳ ಮೇಲೆ ನಡೆದಾಡಿದೆ. [QE]
15. [QS]ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. [QE][QS2]ಆದರೆ ನೀನು ದುಷ್ಟನಾಗುತ್ತಾ ಬಂದೆ. [QE]
16. [QS]ನಿನ್ನ ವ್ಯಾಪಾರವು ನಿನಗೆ ಐಶಬರ್ಯವನ್ನು ತಂದಿತು. [QE][QS2]ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. [QE][QS]ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ [QE][QS2]ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. [QE][QS]ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. [QE][QS2]ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. [QE][QS]ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ [QE][QS2]ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ. [QE]
17. [QS]ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. [QE][QS2]ನಿನ್ನ ಬನತೆಯು ನಿನ್ನ ಜ್ಞಾನವನ್ನು ಕೆಡಿಸಿತು. [QE][QS]ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. [QE][QS2]ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ. [QE]
18. [QS]ನೀನು ಅನೇಕ ತಪ್ಪುಗಳನ್ನು ಮಾಡಿದೆ. [QE][QS]ನೀನು ಮೋಸಗಾರನಾದ ವ್ಯಾಪಾರಿ. [QE][QS2]ಇದರಿಂದಾಗಿ ನೀನು ಪವಿತ್ರಸ್ಥಳವನ್ನು ಹೊಲೆ ಮಾಡಿರುವಿ. [QE][QS]ಆದ್ದರಿಂದ ನಿನ್ನೊಳಗೆ ಬೆಂಕಿಯನ್ನುಟು ಮಾಡಿ [QE][QS2]ಅದು ನಿನ್ನನ್ನು ದಹಿಸುವಂತೆ ಮಾಡಿದೆನು. [QE][QS]ನೀನು ಸುಟ್ಟ ಬೂದಿಯಾದೆ. [QE][QS2]ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು. [QE][PBR]
19. [QS]“ ‘ಬೇರೆ ಜನಾಂಗಗಳ ಜನರು [QE][QS2]ನಿನಗೆ ಆದದ್ದನ್ನು ನೋಡಿ ಬೆಚ್ಚಿಬೆರಗಾದರು. [QE][QS]ನಿನಗಾದ ದುಸ್ಥಿತಿಯು ಜನರನ್ನು ಭಯಪಡಿಸಿತು. [QE][QS2]ನಿನ್ನ ಅಂತ್ಯವಾಯಿತು!’ ” [QE]
20. {#1ಚೀದೋನಿನ ವಿರುದ್ಧ ಸಂದೇಶ } [PS]ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು:
21. “ನರಪುತ್ರನೇ, ಚೀದೋನಿನ ಕಡೆಗೆ ನೋಡಿ ನನ್ನ ಪರವಾಗಿ ನೀನೇ ಅದರ ವಿರುದ್ಧವಾಗಿ ಮಾತನಾಡು.
22. ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: [PE][PBR] [QS]“ ‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. [QE][QS2]ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. [QE][QS]ನಾನು ಚೀದೋನನ್ನು ಶಿಕ್ಷಿಸಿದಾಗ [QE][QS2]ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. [QE][QS]ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು. [QE]
23. [QS]ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. [QE][QS2]ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. [QE][QS]ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, [QE][QS2]ಆಗ ಅವರು ನಾನು ಯೆಹೋವನೆಂದು ತಿಳಿಯುವರು.’ ” [QE]
24. {#1ರಾಜ್ಯಗಳು ಇಸ್ರೇಲಿಗೆ ಹಾಸ್ಯ ಮಾಡುವದನ್ನು ನಿಲ್ಲಿಸುವರು }
25. [PS]“ ‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’ ” [PE][PS]ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.
26. ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದೆಬಷೀಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” [PE]