1. {#1ಇಸ್ರೇಲಿನ ವಿವಿಧ ಕುಲದವರಿಗೆ ಸಾಬಸ್ತ್ಯ }
1. [PS](1-7)“ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್‌ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು. [PE]{#1ದೇಶದ ವಿಶೇಷವಾದ ಭಾಗ }
3.
4.
5.
6.
7.
8. [PS]“ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಬೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ಕುಲದವರ ಸಾಬಸ್ತ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು.
9. ಈ ಭೂಮಿಯನ್ನು ನೀವು ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಇದು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಇಪ್ಪತ್ತು ಸಾವಿರ ಮೊಳ ಅಗಲವಾಗಿರುವದು.
10. ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. [PE][PS]“ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು.
11. ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.
12. ಪವಿತ್ರ ಪ್ರಾಂತ್ಯದ ಈ ಭಾಗವು ಆ ಯಾಜಕರಿಗಾಗಿ ಮೀಸಲಾಗಿದೆ. ಇದು ಲೇವಿಯರ ಭೂಮಿಗೆ ಪಕ್ಕದಲ್ಲಿ ಇರುತ್ತದೆ. [PE]
13. [PS]“ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ.
14. ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ. [PE]
15. {#1ನಗರದ ಆಸ್ತಿಯ ಪಾಲು } [PS]“ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನ್ನೂ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವದು. ಈ ಜಾಗವು ನಗರವನ್ನು ಕಟ್ಟುವುದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನ್ನು ಕಟ್ಟುವುದಕ್ಕಾಗಿ ಇರುವದು. ಸಾಮಾನ್ಯ ಜನರು ಈ ಜಾಗವನ್ನು ಉಪಯೋಗಿಸಬಹುದು. ನಗರವು ಇದರ ಮಧ್ಯದಲ್ಲಿ ಇರುವದು.
16. ನಗರದ ಅಳತೆಯು ಈ ರೀತಿಯಾಗಿ ಇರುವದು; ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ; ದಕ್ಷಿಣದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ, ಪೂರ್ವದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಮತ್ತು ಪಶ್ಚಿಮ ದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಇರುವದು.
17. ಪಶುಗಳನ್ನು ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನ್ನೂರ ಐವತ್ತು ಮೊಳವಿರುತ್ತದೆ.
18. ವಿಶೇಷವಾದ ಪ್ರದೇಶದಲ್ಲಿ ಉಳಿದ ಸ್ಥಳದ ಪೂರ್ವಕ್ಕೆ ಹತ್ತು ಸಾವಿರ ಮೊಳ ಮತ್ತು ಪಶ್ಚಿಮಕ್ಕೆ ಹತ್ತು ಸಾವಿರ ಮೊಳ. ಈ ಸ್ಥಳವು ಭೂಪ್ರದೇಶದ ಪವಿತ್ರ ಭಾಗದ ಪಕ್ಕದಲ್ಲಿರುತ್ತದೆ. ನಗರದ ಕೆಲಸಗಾರರಿಗೆ ಬೆಳೆಗಳನ್ನು ಬೆಳೆಯಿಸುವುದಕ್ಕಾಗಿ ಈ ಸ್ಥಳವಿರುತ್ತದೆ.
19. ನಗರದ ಕೆಲಸಗಾರರು ಈ ಜಾಗವನ್ನು ಉತ್ತು ಬೆಳೆ ಬೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರಾಗಿರುತ್ತಾರೆ. [PE]
20.
21. [PS]“ವಿಶೇಷವಾದ ಈ ಭೂಪ್ರದೇಶವು ಚೌಕವಾಗಿರುವದು. ಇದರ ಉದ್ದ ಮತ್ತು ಇಪ್ಪತ್ತೈದು ಸಾವಿರ ಮೊಳ ಅಗಲ ಇಪ್ಪತ್ತೈದು ಸಾವಿರ ಮೊಳ. ಈ ಪ್ರದೇಶವನ್ನು ನೀನು ಅದರ ವಿಶೇಷವಾದ ಕಾರ್ಯಗಳಿಗಾಗಿ ಮೀಸಲಾಗಿಡಬೇಕು. ಅದರ ಒಂದು ಭಾಗವು ಯಾಜಕರಿಗಾಗಿರುತ್ತದೆ. ಇನ್ನೊಂದು ಭಾಗವು ಲೇವಿಯರಿಗಾಗಿರುತ್ತದೆ; ಮತ್ತೊಂದು ಭಾಗವು ಪಟ್ಟಣಕ್ಕಾಗಿರುತ್ತದೆ. [PE]
21. [PS](21-22)“ಈ ವಿಶೇಷ ಭೂಪ್ರದೇಶದ ಒಂದು ಭಾಗವು ದೇಶಾಧಿಪತಿಗೆ ಸೇರಿದೆ. ಈ ಭೂಪ್ರದೇಶವು ಚೌಕವಾಗಿದೆ. ಇದರ ಉದ್ದ 25,000 ಮೊಳ. ಇದರ ಅಗಲ 25,000 ಮೊಳ. ಈ ವಿಶೇಷ ಪ್ರದೇಶದಲ್ಲಿ ಒಂದು ಭಾಗವು ಯಾಜಕರಿಗೂ ಒಂದು ಭಾಗವು ಲೇವಿಯರಿಗೂ ಒಂದು ಭಾಗವು ದೇವಾಲಯಕ್ಕೂ ಸೇರಿವೆ. ಈ ವಿಶೇಷ ಪ್ರದೇಶದ ಕೇಂದ್ರದಲ್ಲಿ ದೇವಾಲಯವಿರುತ್ತದೆ. ಉಳಿದ ಭಾಗವೆಲ್ಲಾ ದೇಶಾಧಿಪತಿಗೆ ಸೇರಿದೆ. ಬೆನ್ಯಾಮೀನನ ಭಾಗಕ್ಕೂ ಯೆಹೂದದ ಭಾಗಕ್ಕೂ ನಡುವೆ ಇರುವ ಭೂಮಿಯು ಅಧಿಪತಿಗೆ ಸೇರಿದೆ. [PE]
23.
23. [PS](23-27)“ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಬೂಲೂನ್ ಮತ್ತು ಗಾದ್ ವಂಶದವರು. [PE]
25.
26.
27.
28. [PS]“ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.
29. ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ. [PE]
30. {#1ನಗರದ ಬಾಗಿಲುಗಳು } [PS]“ಇವು ನಗರದ ಬಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ. [PE][PS]“ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು.
31. ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು. [PE]
32.
33. [PS]“ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು. [PE]
34. [PS]“ನಗರದ ದಕ್ಷಿಣ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಇದಕ್ಕೆ ಮೂರು ಬಾಗಿಲುಗಳಿರುವವು. ಸಿಮೆಯೋನ್ ಬಾಗಿಲು, ಇಸ್ಸಾಕಾರ್ ಬಾಗಿಲು ಮತ್ತು ಜೆಬುಲೂನ್ ಬಾಗಿಲು. [PE]
35. [PS]“ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಬಾಗಿಲುಗಳು ಇರುವವು. ಗಾದ್ ಬಾಗಿಲು, ಆಶೇರ್ ಬಾಗಿಲು ಮತ್ತು ನಫ್ತಾಲಿ ಬಾಗಿಲು. [PE][PS]“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’ ”[* ಯೆಹೋವನು ಅಲ್ಲಿದ್ದಾನೆ ಇದು “ಜೆರುಸಲೇಮ್” ಪದದ ಶಬ್ದ ಶ್ಲೇಷ. ಹೀಬ್ರೂವಿನಲ್ಲಿ ಈ ಪದವು “ಯೆಹೊಶಾಮಾ” ಎಂದು ಉಚ್ಛರಿಸಲ್ಪಟ್ಟಂತೆ ಕೇಳಿಸುತ್ತದೆ. ] [PE]