పవిత్ర బైబిల్

ఈజీ టు రీడ్ వెర్షన్ (ERV) - తెలుగు
గలతీయులకు
1. [PS]ನಾನು ಮತ್ತೆ ಹೇಳುವುದೇನೆಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು.
2. ಏಕೆಂದರೆ ಅವನಿನ್ನೂ ಬಾಲಕನಾಗಿರುವಾಗ ಪರಿಪಾಲಕರಿಗೆ ಮತ್ತು ನಿರ್ವಾಹಕರಿಗೆ ವಿಧೇಯನಾಗಿರಬೇಕು. ಆದರೆ ತನ್ನ ತಂದೆಯು ಗೊತ್ತುಪಡಿಸಿದ ವಯಸ್ಸನ್ನು ತಲುಪಿದಾಗ ಆ ಬಾಲಕನು ಸ್ವತಂತ್ರನಾಗುವನು.
3. ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು.
4. ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.
5. ಧರ್ಮಶಾಸ್ತ್ರದ ಅಧೀನದಲ್ಲಿದ್ದ ನಮ್ಮನ್ನು ಬಿಡಿಸಿ ತನ್ನ ಮಕ್ಕಳನ್ನಾಗಿ ಮಾಡಿಕೊಳ್ಳಬೇಕೆಂಬುದೇ ದೇವರ ಉದ್ದೇಶವಾಗಿತ್ತು. [PE]
6. [PS]ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, [US]ಅಪ್ಪಾ[UE] ತಂದೆಯೇ” ಎಂದು ಆತ್ಮನು ಕೂಗುತ್ತಾನೆ.
7. ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ. [PE]
8. {#1ಗಲಾತ್ಯ ಕ್ರೈಸ್ತರ ಮೇಲೆ ಪೌಲನ ಪ್ರೀತಿ } [PS]ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.
9. ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?
10. ವಿಶೇಷವಾದ ದಿನಗಳ, ಮಾಸಗಳ, ಕಾಲಮಾನಗಳ ಮತ್ತು ವರ್ಷಗಳ ಕುರಿತು ಧರ್ಮಶಾಸ್ತ್ರವು ಹೇಳುವ ಉಪದೇಶವನ್ನು ಇನ್ನೂ ಅನುಸರಿಸುತ್ತಿದ್ದೀರಿ.
11. ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ. [PE]
12. [PS]ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ.
13. ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ.
14. ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.
15. ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.
16. ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ? [PE]
17. [PS]ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.
18. ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ.
19. ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ.
20. ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು. [PE]
21. {#1ಹಾಗರಳ ಮತ್ತು ಸಾರಳ ಉದಾಹರಣೆ } [PS]ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.
22. ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು.
23. ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು. [PE]
24. [PS]ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.
25. ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.
26. ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.
27. ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: [PE][PBR] [QS]“ಮಕ್ಕಳನ್ನು ಹೆತ್ತಿಲ್ಲದ ಬಂಜೆಯೇ, [QE][QS2]ಸಂತೋಷಪಡು. [QE][QS]ಪ್ರಸವವೇದನೆಯಿಲ್ಲದವಳೇ, [QE][QS2]ಸ್ವರವೆತ್ತಿ ಕೂಗು. [QE][QS]ಗಂಡನುಳ್ಳವಳಿಗಿಂತ ಗಂಡ [QE][QS2]ಬಿಟ್ಟವಳಿಗೆ ಮಕ್ಕಳು ಹೆಚ್ಚು.” --ಯೆಶಾಯ 54:1-- [QE][PBR]
28. [PS](28-29)ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ.
29.
30. ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”[✡ ಉಲ್ಲೇಖನ: ಆದಿಕಾಂಡ 21:10. ]
31. ಆದ್ದರಿಂದ, ನನ್ನ ಸಹೋದರ ಸಹೋದರಿಯರೇ, ನಾವು ದಾಸಿಯ ಮಕ್ಕಳಲ್ಲ. ನಾವು ಸ್ವತಂತ್ರಳಾದ ಸ್ತ್ರೀಯ ಮಕ್ಕಳಾಗಿದ್ದೇವೆ. [PE]
మొత్తం 6 అధ్యాయాలు, ఎంపిక చేయబడింది అధ్యాయము 4 / 6
1 2 3 4 5 6
1 ನಾನು ಮತ್ತೆ ಹೇಳುವುದೇನೆಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು. 2 ಏಕೆಂದರೆ ಅವನಿನ್ನೂ ಬಾಲಕನಾಗಿರುವಾಗ ಪರಿಪಾಲಕರಿಗೆ ಮತ್ತು ನಿರ್ವಾಹಕರಿಗೆ ವಿಧೇಯನಾಗಿರಬೇಕು. ಆದರೆ ತನ್ನ ತಂದೆಯು ಗೊತ್ತುಪಡಿಸಿದ ವಯಸ್ಸನ್ನು ತಲುಪಿದಾಗ ಆ ಬಾಲಕನು ಸ್ವತಂತ್ರನಾಗುವನು. 3 ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು. 4 ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು. 5 ಧರ್ಮಶಾಸ್ತ್ರದ ಅಧೀನದಲ್ಲಿದ್ದ ನಮ್ಮನ್ನು ಬಿಡಿಸಿ ತನ್ನ ಮಕ್ಕಳನ್ನಾಗಿ ಮಾಡಿಕೊಳ್ಳಬೇಕೆಂಬುದೇ ದೇವರ ಉದ್ದೇಶವಾಗಿತ್ತು. 6 ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ. 7 ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ. 8 {#1ಗಲಾತ್ಯ ಕ್ರೈಸ್ತರ ಮೇಲೆ ಪೌಲನ ಪ್ರೀತಿ } ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ. 9 ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ? 10 ವಿಶೇಷವಾದ ದಿನಗಳ, ಮಾಸಗಳ, ಕಾಲಮಾನಗಳ ಮತ್ತು ವರ್ಷಗಳ ಕುರಿತು ಧರ್ಮಶಾಸ್ತ್ರವು ಹೇಳುವ ಉಪದೇಶವನ್ನು ಇನ್ನೂ ಅನುಸರಿಸುತ್ತಿದ್ದೀರಿ. 11 ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ. 12 ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ. 13 ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ. 14 ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ. 15 ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ. 16 ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ? 17 ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು. 18 ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ. 19 ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ. 20 ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು. 21 {#1ಹಾಗರಳ ಮತ್ತು ಸಾರಳ ಉದಾಹರಣೆ } ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ. 22 ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು. 23 ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು. 24 ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು. 25 ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ. 26 ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ. 27 ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಮಕ್ಕಳನ್ನು ಹೆತ್ತಿಲ್ಲದ ಬಂಜೆಯೇ, ಸಂತೋಷಪಡು. ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು. ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು.” --ಯೆಶಾಯ 54:1-- 28 (28-29)ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ. 29 30 ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”[✡ ಉಲ್ಲೇಖನ: ಆದಿಕಾಂಡ 21: 10. ] 31 ಆದ್ದರಿಂದ, ನನ್ನ ಸಹೋದರ ಸಹೋದರಿಯರೇ, ನಾವು ದಾಸಿಯ ಮಕ್ಕಳಲ್ಲ. ನಾವು ಸ್ವತಂತ್ರಳಾದ ಸ್ತ್ರೀಯ ಮಕ್ಕಳಾಗಿದ್ದೇವೆ.
మొత్తం 6 అధ్యాయాలు, ఎంపిక చేయబడింది అధ్యాయము 4 / 6
1 2 3 4 5 6
×

Alert

×

Telugu Letters Keypad References