1. {#1ಜನಾಂಗಗಳ ಬೆಳವಣಿಗೆ ಮತ್ತು ವಿಸ್ತರಣೆ }
2. [PS]ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು: [PE]{#1ಯೆಫೆತನ ಸಂತತಿಯವರು } [LS] ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್. [LE]
3. [LS] ಗೋಮೆರನ ಗಂಡುಮಕ್ಕಳು: ಅಷ್ಕೆನಸ್, ರೀಫತ್ ಮತ್ತು ತೋಗರ್ಮ. [LE]
4. [LS] ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್. [LE][PBR]
5.
6. [PS]ತೀರ ಪ್ರದೇಶದ[* ತೀರ ಪ್ರದೇಶ ಮೆಡಿಟೇರಿಯನ್ ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳು. ] ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು. [PE]{#1ಹಾಮನ ಸಂತತಿಯವರು } [LS] ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್. [LE]
7. [LS] ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. [LE][LS]ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್. [LE][PBR]
8. [PS]ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
9. ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು. [PE]
10. [PS]ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.
11. (11-12)ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ. [PE][PBR]
12.
13. (13-14) [LS] ಮಿಚ್ರಯಿಮನು ಲೂದ್, ಅನಾಮ್, ಲೆಹಾಬ್, ನಪ್ತಹ್, ಪತ್ರುಸ್, ಕಸ್ಲುಹ್ಯ ಮತ್ತು ಕಪ್ತೋರ್ಯ ಎಂಬವರ ತಂದೆ. ಕಸ್ಲುಹ್ಯರು ಫಿಲಿಷ್ಟಿಯರ ಪಿತೃಗಳು. [LE]
14.
15. [LS] ಕಾನಾನನು ಸೀದೋನನ ತಂದೆ. ಕಾನಾನನ ಮೊದಲನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲಪಿತೃ.
16. (16-18)ಕಾನಾನನು ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ, ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಮೂಲಪುರುಷನು. [LE][PBR] [PS]ಕಾನಾನನ ಕುಟುಂಬಗಳು ಪ್ರಪಂಚದ ನಾನಾ ಭಾಗಗಳಲ್ಲಿ ಹರಡಿಕೊಂಡಿದ್ದವು.
17.
18.
19. ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು. [PE]
20.
21. [PS]ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು. [PE]{#1ಶೇಮನ ಸಂತತಿಯವರು } [PS]ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ. [PE][PBR]
22. [LS] ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್. [LE]
23. [LS] ಅರಾಮನ ಗಂಡುಮಕ್ಕಳು: ಊಸ್, ಹೂಲ್, ಗೆತೆರ್ ಮತ್ತು ಮಷ್. [LE]
24. [LS] ಅರ್ಪಕ್ಷದನು ಶೆಲಹನ ತಂದೆ, [LE][LS]ಶೆಲಹನು ಎಬರನ ತಂದೆ. [LE]
25. [LS] ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್. [LE]
26. [LS] ಯೊಕ್ತಾನನ ಗಂಡುಮಕ್ಕಳು: ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್ ಮತ್ತು ಯೆರಹ,
27. ಹದೋರಾಮ್, ಊಜಾಲ್, ದಿಕ್ಲಾ.
28. ಓಬಾಲ್, ಅಬೀಮಯೇಲ್, ಶೆಬಾ,
29. ಓಫೀರ್, ಹವೀಲ ಮತ್ತು ಯೋಬಾಬ್.
30. ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು. [LE][PBR]
31.
32. [PS]ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು. [PE][PS]ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ. [PE]