1. {#1ಪಾಪದ ಪ್ರಾರಂಭ }
2. [PS]ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು. [PE][PS]ಸ್ತ್ರೀಯು ಹಾವಿಗೆ, “ಇಲ್ಲ! ದೇವರು ಹಾಗೆ ಹೇಳಲಿಲ್ಲ! ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
3. ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು. [PE]
4. [PS]ಅದಕ್ಕೆ ಹಾವು ಸ್ತ್ರೀಗೆ, “ನೀವು ಸಾಯುವುದಿಲ್ಲ.
5. ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು. [PE]
6.
7. [PS]ಸ್ತ್ರೀಗೆ ಆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು. [PE]
8. [PS]ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು. [PE][PS]ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.
9. ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು. [PE]
10.
11. [PS]ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು. [PE]
12. [PS]ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು. [PE]
13. [PS]ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು. [PE]
14. [PS]ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. [PE][PS]ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು. [PE][PS]ಆಗ ದೇವರಾದ ಯೆಹೋವನು ಹಾವಿಗೆ, [PE][PBR] [QS]“ನೀನು ಮಾಡಿದ ಈ ಕೆಟ್ಟಕಾರ್ಯದಿಂದ [QE][QS2]ನಿನಗೂ ಕೇಡುಗಳಾಗುತ್ತವೆ.[* ಕೇಡುಗಳಾಗುತ್ತವೆ ಅಕ್ಷರಶಃ, “ನೀನು ಶಾಪಗ್ರಸ್ತನಾಗಿರುವೆ.” ] [QE][QS]ಬೇರೆಲ್ಲಾ ಪ್ರಾಣಿಗಳಿಗಿಂತಲೂ [QE][QS2]ನಿನಗೆ ಹೀನಸ್ಥಿತಿ ಉಂಟಾಗುವುದು. [QE][QS]ನೀನು ಹೊಟ್ಟೆಯಿಂದಲೇ ತೆವಳಿಕೊಂಡು [QE][QS2]ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನುವೆ. [QE]
15. [QS]ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. [QE][QS2]ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು[† ಅವಳ ಮಕ್ಕಳು ಅಕ್ಷರಶಃ, ಹೀಬ್ರೂ ಭಾಷೆಯಲ್ಲಿ “ನಿನ್ನ ಬೀಜ ಮತ್ತು ಅವಳ ಬೀಜ.” ] ಒಬ್ಬರಿಗೊಬ್ಬರು ವೈರಿಗಳಾಗಿರುವರು. [QE][QS]ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. [QE][QS2]ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು. [QE][PBR]
16. [PS]ಬಳಿಕ ದೇವರಾದ ಯೆಹೋವನು ಸ್ತ್ರೀಗೆ, [PE][PBR] [QS]“ನೀನು ಗರ್ಭಿಣಿಯಾಗಿರುವಾಗ [QE][QS2]ಬಹು ಸಂಕಟಪಡುವೆ. [QE][QS]ನೀನು ಮಕ್ಕಳನ್ನು ಹೆರುವಾಗ [QE][QS2]ಬಹಳ ವೇದನೆಪಡುವೆ. [QE][QS]ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; [QE][QS2]ಆದರೆ ಅವನು ನಿನ್ನನ್ನು ಆಳುವನು” ಎಂದನು. [QE][PBR]
17. [PS]ಆಮೇಲೆ ದೇವರಾದ ಯೆಹೋವನು ಪುರುಷನಿಗೆ, [PE][PBR] [QS]“ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. [QE][QS2]ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. [QE][QS]ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. [QE][QS2]ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು. [QE]
18. [QS]ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. [QE][QS2]ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ. [QE]
19. [QS]ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ [QE][QS2]ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. [QE][QS]ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. [QE][QS2]ಆಮೇಲೆ ನೀನು ಮಣ್ಣಾಗುವೆ. [QE][QS]ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. [QE][QS2]ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು. [QE][PBR]
20.
21. [PS]ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ. [PE]
22. [PS]ದೇವರಾದ ಯೆಹೋವನು ಪ್ರಾಣಿಯ ಚರ್ಮದಿಂದ ಉಡುಪುಗಳನ್ನು ಮಾಡಿ ಆದಾಮನಿಗೆ ಮತ್ತು ಅವನ ಹೆಂಡತಿಗೆ ತೊಡಿಸಿದನು. [PE]
23. [PS]ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು. [PE][PS]ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.
24. ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು. [PE]