పవిత్ర బైబిల్

ఈజీ టు రీడ్ వెర్షన్ (ERV) - తెలుగు
హెబ్రీయులకు
1. {#1ಯೇಸುವೇ ನಮ್ಮ ಪ್ರಧಾನಯಾಜಕನು } [PS]ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.
2. ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ. [PE]
3. [PS]ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.
4. ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.
5. ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು”[✡ ಉಲ್ಲೇಖನ: ವಿಮೋಚನ. 25:40. ] ಎಂದು ಹೇಳಿದ್ದು ಈ ಕಾರಣದಿಂದಲೇ.
6. ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ. [PE]
7. [PS]ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ.
8. ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: [PE][PBR] [QS]“ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ [QE][QS2]ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ. [QE]
9. [QS]ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. [QE][QS2]ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. [QE][QS]ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ [QE][QS2]ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ. [QE]
10. [QS]ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ [QE][QS2]ಹೊಸ ಒಡಂಬಡಿಕೆಯು ಇಂತಿದೆ: [QE][QS]ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; [QE][QS2]ಅವರ ಹೃದಯದ ಮೇಲೆ ಬರೆಯುವೆನು; [QE][QS]ನಾನು ಅವರ ದೇವರಾಗಿರುವೆನು; [QE][QS2]ಅವರು ನನ್ನ ಜನರಾಗಿರುವರು. [QE]
11. [QS]ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; [QE][QS]ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು. [QE]
12. [QS]ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; [QE][QS2]ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” --ಯೆರೆಮೀಯ 31:31-34-- [QE][PBR]
13. [PS]ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು. [PE]
మొత్తం 13 అధ్యాయాలు, ఎంపిక చేయబడింది అధ్యాయము 8 / 13
1 2 3 4 5 6 7 8 9 10 11 12 13
1 {#1ಯೇಸುವೇ ನಮ್ಮ ಪ್ರಧಾನಯಾಜಕನು } ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ. 2 ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ. 3 ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು. 4 ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ. 5 ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು”[✡ ಉಲ್ಲೇಖನ: ವಿಮೋಚನ. 25: 40. ] ಎಂದು ಹೇಳಿದ್ದು ಈ ಕಾರಣದಿಂದಲೇ. 6 ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ. 7 ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ. 8 ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ. 9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ. 10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು. 11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12 ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” --ಯೆರೆಮೀಯ 31:31-34-- 13 ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.
మొత్తం 13 అధ్యాయాలు, ఎంపిక చేయబడింది అధ్యాయము 8 / 13
1 2 3 4 5 6 7 8 9 10 11 12 13
×

Alert

×

Telugu Letters Keypad References