పవిత్ర బైబిల్

ఈజీ టు రీడ్ వెర్షన్ (ERV) - తెలుగు
హొషేయ
1. {#1ಯೆಹೋವನ ಬಳಿಗೆ ಹಿಂದಿರುಗಿರಿ } [PS]ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.
2. ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: [PE][PBR] [QS]“ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. [QE][QS2]ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. [QE][QS2]ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು. [QE]
3. [QS]ಅಶ್ಶೂರವು ನಮ್ಮನ್ನು ರಕ್ಷಿಸಲಾರದು. [QE][QS2]ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. [QE][QS]ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು [QE][QS2]‘ನಮ್ಮ ದೇವರು’ ಎಂದು ಹೇಳುವದಿಲ್ಲ. [QE][QS]ಯಾಕೆಂದರೆ ಅನಾಥರಿಗೆ [QE][QS2]ಕರುಣೆಯನ್ನು ತೋರಿಸುವವನು ನೀನೇ.” [QE]
4. {#1ಯೆಹೋವನು ಇಸ್ರೇಲನ್ನು ಕ್ಷಮಿಸುವನು } [QS]ಯೆಹೋವನು ಹೇಳುವುದೇನೆಂದರೆ, [QE][QS]“ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. [QE][QS2]ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. [QE][QS2]ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ. [QE]
5. [QS]ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. [QE][QS2]ನೆಲದಾವರೆಯಂತೆ ಇಸ್ರೇಲ್ ಅರಳುವನು. [QE][QS2]ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು. [QE]
6. [QS]ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; [QE][QS2]ಅವನು ಅಂದವಾದ ಆಲೀವ್ ಮರದಂತಿರುವನು. [QE][QS]ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ [QE][QS2]ಅವನು ಗಮಗಮಿಸುವನು. [QE]
7. [QS]ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. [QE][QS2]ಧಾನ್ಯದ ಸಸಿಗಳಂತೆ ಬೆಳೆಯುವರು, [QE][QS]ದ್ರಾಕ್ಷಾಲತೆಯಿಂದ ಚಿಗುರುವರು. [QE][QS2]ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.” [QE]
8. {#1ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ } [QS]“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. [QE][QS2]ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. [QE][QS]ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. [QE][QS2]ನಿನ್ನ ಫಲಗಳು ನನ್ನಿಂದ ಬರುವದು.” [QE]
9. {#1ಅಂತಿಮ ಸಲಹೆ } [QS]ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. [QE][QS2]ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. [QE][QS]ಯೆಹೋವನ ಮಾರ್ಗವು ಸರಿಯಾದದ್ದು. [QE][QS2]ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. [QE][QS2]ಪಾಪಿಗಳು ಅವುಗಳಿಂದ ಸಾಯುವರು. [QE]
మొత్తం 14 అధ్యాయాలు, ఎంపిక చేయబడింది అధ్యాయము 14 / 14
1 2 3 4 5 6 7 8 9 10 11 12 13 14
1 {#1ಯೆಹೋವನ ಬಳಿಗೆ ಹಿಂದಿರುಗಿರಿ } ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ. 2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು. 3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.” 4 {#1ಯೆಹೋವನು ಇಸ್ರೇಲನ್ನು ಕ್ಷಮಿಸುವನು } ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ. 5 ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು. 6 ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು. 7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.” 8 {#1ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ } “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.” 9 {#1ಅಂತಿಮ ಸಲಹೆ } ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.
మొత్తం 14 అధ్యాయాలు, ఎంపిక చేయబడింది అధ్యాయము 14 / 14
1 2 3 4 5 6 7 8 9 10 11 12 13 14
×

Alert

×

Telugu Letters Keypad References