పవిత్ర బైబిల్

ఈజీ టు రీడ్ వెర్షన్ (ERV) - తెలుగు
యెషయా గ్రంథము
1. [PS]ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು. [PE][PBR]
2. [QS]ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. [QE][QS2]ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. [QE][QS2]ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು. [QE]
3. [QS]ಅವರು, “ನಮಗೆ ಸಹಾಯ ಮಾಡಿರಿ! [QE][QS2]ನಾವು ಮಾಡಬೇಕಾದದ್ದನ್ನು ತಿಳಿಸಿರಿ! [QE][QS]ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. [QE][QS2]ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. [QE][QS]ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. [QE][QS2]ನಮ್ಮನ್ನು ಅಡಗಿಸಿಡಿರಿ, [QE][QS2]ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ. [QE]
4. [QS]ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. [QE][QS2]ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. [QE][QS2]ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. [QE][PBR] [QS]ದರೋಡೆಯು ನಿಂತುಹೋಗುವದು. [QE][QS2]ಶತ್ರುಗಳು ಸೋಲಿಸಲ್ಪಡುವರು. [QE][QS]ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು. [QE]
5. [QS]ಆಗ ಹೊಸ ಅರಸನು ಬರುವನು. [QE][QS2]ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. [QE][QS2]ಆತನು ದಾವೀದನ ವಂಶದವನಾಗಿದ್ದಾನೆ. [QE][QS]ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. [QE][QS2]ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು. [QE][PBR]
6. [QS]ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ [QE][QS2]ಜಂಬದವರೂ ಎಂದು ನಾವು ಕೇಳಿದ್ದೇವೆ. [QE][QS]ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, [QE][QS2]ಅವರ ಬಡಾಯಿ ಕೇವಲ ಮಾತುಗಳಷ್ಟೇ. [QE]
7. [QS]ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. [QE][QS]ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. [QE][QS2]ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು. [QE][PBR]
8. [QS]ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು [QE][QS2]ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. [QE][QS2]ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು. [QE]
9. [QS]ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ [QE][QS2]ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. [QE][QS]ಸುಗ್ಗಿ ಇಲ್ಲದಿರುವದಕ್ಕಾಗಿ [QE][QS2]ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. [QE][QS]ಬೇಸಿಗೆ ಕಾಲದ ಹಣ್ಣುಗಳಿರದು; [QE][QS2]ಹರ್ಷಧ್ವನಿಯೂ ಇರದು. [QE]
10. [QS]ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. [QE][QS2]ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. [QE][QS]ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. [QE][QS2]ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ. [QE]
11. [QS]ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. [QE][QS2]ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ. [QE]
12. [QS]ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. [QE][QS]ಸಂಭವಿಸುವ ಸಂಗತಿಗಳನ್ನು ನೋಡಿದಾಗ [QE][QS2]ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ. [QE][PBR]
13. [PS]ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ.
14. ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.” [PE]
మొత్తం 66 అధ్యాయాలు, ఎంపిక చేయబడింది అధ్యాయము 16 / 66
1 ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು. 2 ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು. 3 ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ. 4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು. 5 ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು. 6 ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ. 7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು. 8 ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು. 9 ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು. 10 ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ. 11 ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ. 12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ. 13 ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ. 14 ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”
మొత్తం 66 అధ్యాయాలు, ఎంపిక చేయబడింది అధ్యాయము 16 / 66
×

Alert

×

Telugu Letters Keypad References