1. {#1ಬಾಬಿಲೋನಿಗೆ ದೇವರ ಸಂದೇಶ } [PS]ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: [PE][PBR] [QS]ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ [QE][QS2]ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು. [QE]
2. [QS]ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. [QE][QS2]ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. [QE][QS2]ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. [QE][PBR] [QS]ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. [QE][QS2]ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. [QE][QS2]ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು. [QE][PBR]
3. [QS]ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. [QE][QS2]ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. [QE][QS]ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; [QE][QS2]ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ. [QE]
4. [QS]ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. [QE][QS2]ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ. [QE][PBR]
5. [QS]ಜನರಾದರೋ, “ಊಟ ಬಡಿಸಿರಿ! [QE][QS2]ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. [QE][QS]ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, [QE][QS2]ಸೇನಾಪತಿಗಳೇ ಎದ್ದೇಳಿರಿ, [QE][QS2]ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ. [QE][PBR]
6. [PS]ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
7. ಅವನು ಸಾಲಾಗಿ ಬರುತ್ತಿರುವ ಸೈನಿಕರನ್ನೋ, ಕತ್ತೆಗಳನ್ನೋ, ಒಂಟೆಗಳನ್ನೋ ನೋಡಿದರೆ ಬಹಳ ಸೂಕ್ಷ್ಮವಾಗಿ ಆಲಿಸಬೇಕು.” [PE]
8. [PS]ಒಂದು ದಿವಸ ಆ ಕಾವಲುಗಾರನು, [PE][PBR] [QS]“ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು [QE][QS2]ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ; [QE]
9. [QS]ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. [QE][PBR] [QS]ಆಗ ಒಬ್ಬ ದೂತನು, [QE][QS2]“ಬಾಬಿಲೋನಿಗೆ ಸೋಲಾಯಿತು. [QE][QS2]ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. [QE][QS]ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ [QE][QS2]ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು. [QE][PBR]
10.
11. [PS]ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ. [PE]{#1ಎದೋಮಿಗೆ ದೇವರ ಸಂದೇಶ } [PS]ದೂಮದ ಕುರಿತು ದುಃಖದ ದೈವೋಕ್ತಿ: [PE][PBR] [QS]ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, [QE][QS2]“ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? [QE][QS2]ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು. [QE][PBR]
12. [QS]ಅದಕ್ಕೆ ಕಾವಲುಗಾರ, [QE][QS2]“ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. [QE][QS]ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” [QE][QS2]ಎಂದು ಉತ್ತರಿಸಿದನು. [QE]
13. {#1ಅರೇಬಿಯಕ್ಕೆ ದೇವರ ಸಂದೇಶ } [PS]ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: [PE][PBR] [QS]ದೇದಾನಿನಿಂದ ಬಂದ ಪ್ರಯಾಣಿಕರು [QE][QS2]ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು. [QE]
14. [QS]ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. [QE][QS2]ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು. [QE]
15. [QS]ಅವರು ತಮ್ಮನ್ನು ಸಾಯಿಸಲಿಕ್ಕಿದ್ದ [QE][QS2]ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. [QE][QS]ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ [QE][QS2]ಬಾಣಗಳಿಂದ ಪಾರಾಗಿ ಬಂದವರು. [QE][QS]ಅವರು ಘೋರ ರಣರಂಗದಿಂದ ಓಡಿಬಂದವರು. [QE][PBR]
16. [PS]ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.
17. ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು. [PE]