1. {#1ಇಸ್ರೇಲಿನ ಶಿಕ್ಷೆಯು ಅಂತ್ಯವಾಗುವದು } [QS]ನಿನ್ನ ದೇವರು ಹೇಳುವುದೇನೆಂದರೆ: [QE][QS]“ನನ್ನ ಜನರನ್ನು ಸಂತೈಸು, ಸಂತೈಸು. [QE]
2. [QS]ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, [QE][QS2]‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. [QE][QS2]ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ [QE][QS]ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.” [QE][PBR]
3. [QS]ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: [QE][QS]“ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! [QE][QS2]ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ! [QE]
4. [QS]ತಗ್ಗುಗಳನ್ನು ಸಮತಟ್ಟು ಮಾಡಿರಿ. [QE][QS2]ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. [QE][QS]ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. [QE][QS2]ಏರುತಗ್ಗು ನೆಲವನ್ನು ಸಮಗೊಳಿಸಿರಿ. [QE]
5. [QS]ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. [QE][QS2]ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. [QE][QS]ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.” [QE][PBR]
6. [QS]ಒಂದು ಸ್ವರವು “ಮಾತನಾಡು” ಎಂದಿತು. [QE][QS2]ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. [QE][QS]ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. [QE][QS2]ಅವರ ಒಳ್ಳೆಯತನವು ಕಾಡುಹೂವಿನಂತಿದೆ. [QE]
7. [QS]ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. [QE][QS2]ಆ ಹುಲ್ಲು ಒಣಗಿಹೋಯಿತು. [QE][QS2]ಕಾಡಿನ ಪುಷ್ಪವು ಬಾಡಿಹೋಯಿತು. [QE]
8. [QS]ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. [QE][QS2]ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು. [QE]
9. {#1ದೇವರ ಸುವಾರ್ತೆ-ರಕ್ಷಣೆ } [QS]ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. [QE][QS2]ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! [QE][QS]ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. [QE][QS2]ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. [QE][QS]ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: [QE][QS2]“ಇಗೋ! ನಿನ್ನ ದೇವರು ಇಲ್ಲಿದ್ದಾನೆ.” [QE]
10. [QS]ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. [QE][QS2]ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. [QE][QS]ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. [QE][QS2]ಅವರ ಸಂಬಳವು ಆತನ ಕೈಯಲ್ಲಿದೆ. [QE]
11. [QS]ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. [QE][QS2]ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. [QE][QS2]ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು. [QE]
12. {#1ಪ್ರಪಂಚವನ್ನು ಸೃಷ್ಟಿಸಿದವನು ದೇವರೇ } [QS]ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? [QE][QS2]ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? [QE][QS]ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? [QE][QS2]ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು? [QE]
13. [QS]ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. [QE][QS2]ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ. [QE]
14. [QS]ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? [QE][QS2]ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? [QE][QS2]ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? [QE][QS2]ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ? [QE]
15. [QS]ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. [QE][QS]ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ [QE][QS2]ಅವು ಧೂಳಿನ ಕಣದಂತಿವೆ. [QE]
16. [QS]ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, [QE][QS2]ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು. [QE]
17. [QS]ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. [QE][QS2]ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ. [QE]
18. {#1ದೇವರ ರೂಪವು ಜನರಿಗೆ ತಿಳಿಯದು } [QS]ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? [QE][QS2]ದೇವರ ಚಿತ್ತವನ್ನು ಬರೆಯಬಹುದೇ? [QE]
19. [QS]ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. [QE][QS2]ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. [QE][QS]ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. [QE][QS2]ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ. [QE]
20. [QS]ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. [QE][QS2]ಈ ಬಗೆಯ ಮರವು ಕೊಳೆತುಹೋಗುವದಿಲ್ಲ. [QE][QS]ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. [QE][QS2]ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು. [QE]
21. [QS]ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? [QE][QS2]ಇದರ ವಿಚಾರವಾಗಿ ನೀವು ಕೇಳಿರುವಿರಿ. [QE][QS2]ಎಷ್ಟೋ ವರ್ಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. [QE][QS2]ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ. [QE]
22. [QS]ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. [QE][QS2]ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. [QE][QS]ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. [QE][QS2]ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು. [QE]
23. [QS]ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. [QE][QS2]ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು. [QE]
24. [QS]ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. [QE][QS2]ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ [QE][QS]ದೇವರ ಉಸಿರಿಗೆ ಅವು ಬಾಡಿ ಸಾಯುವವು; [QE][QS2]ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು. [QE]
25. [QS]ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? [QE][QS2]ನನಗೆ ಸಮಾನರು ಯಾರೂ ಇಲ್ಲ.” [QE][PBR]
26. [QS]ಆಕಾಶಮಂಡಲದ ಕಡೆಗೆ ನೋಡಿರಿ! [QE][QS2]ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? [QE][QS2]ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? [QE][QS2]ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? [QE][QS]ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. [QE][QS2]ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ. [QE][PBR]
27. [QS]ಯಾಕೋಬೇ, ಇದು ಸತ್ಯ! [QE][QS2]ಇಸ್ರೇಲೇ, ನೀನದನ್ನು ನಂಬಬೇಕು. [QE][QS]ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. [QE][QS2]ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ. [QE][PBR]
28. [QS]ದೇವರಾದ ಯೆಹೋವನು ಜ್ಞಾನಿಯೆಂಬುದನ್ನು [QE][QS2]ನೀನು ಖಂಡಿತವಾಗಿಯೂ ಕೇಳಿರುವೆ. [QE][QS]ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. [QE][QS2]ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. [QE][QS]ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. [QE][QS2]ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ. [QE]
29. [QS]ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. [QE][QS2]ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ. [QE]
30. [QS]ಯೌವನಸ್ಥರು ಆಯಾಸಗೊಳ್ಳುವರು. [QE][QS2]ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು. [QE]
31. [QS]ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. [QE][QS2]ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. [QE][QS2]ನಡೆದಾಡಿದರೂ ಬಳಲಿಹೋಗುವುದಿಲ್ಲ. [QE]