1. {#1ಬಾಬಿಲೋನಿಗೆ ದೇವರ ಸಂದೇಶ } [QS]“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ [QE][QS2]ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. [QE][QS]ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! [QE][QS2]ಈಗ ನೀನು ಯಜಮಾನಿಯಲ್ಲ. [QE][QS]ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ. [QE]
2. [QS]ಈಗ ನೀನು ದಾಸಿಯಾಗಿ ಕೆಲಸ ಮಾಡಬೇಕು. [QE][QS2]ನಿನ್ನ ಮನೋಹರವಾದ ಉಡುಪನ್ನು ತೆಗೆದುಹಾಕು. [QE][QS]ಬೀಸುವ ಕಲ್ಲನ್ನು ತೆಗೆದುಕೊಂಡು [QE][QS2]ಧಾನ್ಯವನ್ನು ಬೀಸು. [QE][QS]ಜನರು ನಿನ್ನ ತೊಡೆಗಳನ್ನು ನೋಡುವ ತನಕ [QE][QS2]ನಿನ್ನ ಉಡುಪನ್ನು ಎತ್ತಿ ಹೊಳೆಯನ್ನು ದಾಟು. ನಿನ್ನ ದೇಶವನ್ನು ಬಿಟ್ಟುಹೋಗು. [QE]
3. [QS]ಪುರುಷರು ನಿನ್ನ ಶರೀರವನ್ನು ನೋಡಿ [QE][QS2]ನಿನ್ನೊಂದಿಗೆ ಸಂಭೋಗಿಸುವರು. [QE][QS]ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. [QE][QS2]ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ. [QE][PBR]
4. [QS]“ ‘ದೇವರು ನಮ್ಮನ್ನು ರಕ್ಷಿಸುವನು. [QE][QS2]ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ [QE][QS]ಎಂದು ನನ್ನ ಜನರು ಹೇಳುವರು.” [QE][PBR]
5. [QS]“ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. [QE][QS]ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, [QE][QS2]ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ. [QE][PBR]
6. [QS]“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. [QE][QS2]ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. [QE][QS]ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. [QE][QS2]ಅವರನ್ನು ನಿನಗೆ ಕೊಟ್ಟೆನು; [QE][QS]ನೀನು ಅವರನ್ನು ಶಿಕ್ಷಿಸಿದೆ. [QE][QS2]ಅವರ ಮೇಲೆ ಕರುಣೆ ತೋರಿಸಲಿಲ್ಲ. [QE][QS]ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ. [QE]
7. [QS]‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. [QE][QS2]ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. [QE][QS]ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. [QE][QS2]ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ. [QE]
8. [QS]ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. [QE][QS]ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, [QE][QS2]‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. [QE][QS2]ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ. [QE]
9. [QS]ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. [QE][QS2]ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. [QE][QS2]ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು. [QE]
10. [QS]ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. [QE][QS2]‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. [QE][QS2]ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. [QE][QS]‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ. [QE][PBR]
11. [QS]“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. [QE][QS2]ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. [QE][QS2]ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು. [QE]
12. [QS]ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ [QE][QS2]ನಿನ್ನ ಜೀವಮಾನವನ್ನು ಕಳೆದಿರುವೆ. [QE][QS]ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. [QE][QS2]ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. [QE][QS2]ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು. [QE]
13. [QS]ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. [QE][QS2]ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? [QE][QS]ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. [QE][QS2]ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. [QE][QS2]ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು. [QE]
14. [QS]ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. [QE][QS2]ಅವರು ಹುಲ್ಲಿನಂತೆ ಸುಟ್ಟುಹೋಗುವರು. [QE][QS2]ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು. [QE]
15. [QS]ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. [QE][QS2]ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. [QE][QS]ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. [QE][QS2]ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.” [QE]