పవిత్ర బైబిల్

ఈజీ టు రీడ్ వెర్షన్ (ERV) - తెలుగు
యెషయా గ్రంథము
1. {#1ಇಸ್ರೇಲ್ ರಕ್ಷಿಸಲ್ಪಡುವದು } [QS]ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! [QE][QS2]ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. [QE][QS]ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. [QE][QS2]ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು. [QE]
2. [QS]ನಿನ್ನ ಧೂಳನ್ನು ಝಾಡಿಸು. [QE][QS]ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. [QE][QS2]ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. [QE][QS2]ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ. [QE]
3. [QS]ಯೆಹೋವನು ಹೇಳುವುದೇನೆಂದರೆ: [QE][QS2]“ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; [QE][QS2]ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.” [QE][PBR]
4. [PS]ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು.
5. ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.” [PE]
6.
7. [PS]ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.” [PE][PS]ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ. [PE][PBR]
8. [QS]ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. [QE][QS2]ಒಟ್ಟಾಗಿ ಸಂತಸಪಡುತ್ತಿದ್ದಾರೆ. [QE][QS]ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು. [QE][PBR]
9. [QS]ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. [QE][QS]ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. [QE][QS2]ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು. [QE]
10. [QS]ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. [QE][QS2]ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು. [QE][PBR]
11. [QS]ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; [QE][QS2]ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. [QE][QS]ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. [QE][QS2]ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; [QE][QS2]ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. [QE]
12. [QS]ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. [QE][QS2]ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. [QE][QS2]ನೀವು ಹೊರಗೆ ನಡೆಯುವಿರಿ. [QE][QS]ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. [QE][QS2]ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು. [QE]
13. {#1ದೇವಸೇವಕನ ಸಂಕಟ } [PS]ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.
14. ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.
15. ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.” [PE]
మొత్తం 66 అధ్యాయాలు, ఎంపిక చేయబడింది అధ్యాయము 52 / 66
1 {#1ಇಸ್ರೇಲ್ ರಕ್ಷಿಸಲ್ಪಡುವದು } ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು. 2 ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ. 3 ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.” 4 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು. 5 ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.” 6 7 ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.” ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ. 8 ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು. 9 ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು. 10 ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು. 11 ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. 12 ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು. 13 {#1ದೇವಸೇವಕನ ಸಂಕಟ } ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು. 14 ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು. 15 ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”
మొత్తం 66 అధ్యాయాలు, ఎంపిక చేయబడింది అధ్యాయము 52 / 66
×

Alert

×

Telugu Letters Keypad References