1. {#1ಇಸ್ರೇಲರು ದೇವರನ್ನು ಅನುಸರಿಸುವದಿಲ್ಲ } [QS]ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. [QE][QS]ಸದ್ಭಕ್ತರು ಗತಿಸಿಹೋಗುವರು; [QE][QS2]ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. [QE][PBR] [QS]ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು [QE][QS2]ಎಂದು ಯಾರೂ ಯೋಚಿಸರು. [QE]
2. [QS]ಆದರೆ ಶಾಂತಿಸಮಾಧಾನಗಳು ಬರುತ್ತವೆ. [QE][QS2]ಆಗ ಜನರು ತಮ್ಮ ಸ್ವಂತ ಹಾಸಿಗೆಗಳ ಮೇಲೆ ವಿಶ್ರಮಿಸಿಕೊಳ್ಳುವರು; ದೇವರು ಅಪೇಕ್ಷಿಸುವ ರೀತಿಯಲ್ಲಿ ಜೀವಿಸುವರು. [QE][PBR]
3. [QS]“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. [QE][QS2]ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. [QE][QS2]ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ. [QE]
4. [QS]ನೀವು ಸುಳ್ಳುಹೇಳುವ ದುಷ್ಟಮಕ್ಕಳು. [QE][QS2]ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. [QE][QS]ನನ್ನನ್ನು ಹಿಯಾಳಿಸುತ್ತೀರಿ; [QE][QS2]ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ. [QE]
5. [QS]ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ [QE][QS2]ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, [QE][QS]ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು [QE][QS2]ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ. [QE]
6. [QS]ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. [QE][QS2]ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. [QE][QS]ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. [QE][QS2]ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ. [QE]
7. [QS]ಪ್ರತಿಯೊಂದು ಬೆಟ್ಟ ಮತ್ತು [QE][QS2]ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. [QE][QS]ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ. [QE]
8. [QS]ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ [QE][QS2]ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. [QE][QS]ನೀವು ಆ ದೇವರುಗಳನ್ನು ಪ್ರೀತಿಸುತ್ತೀರಿ. [QE][QS2]ಅವುಗಳ ಬೆತ್ತಲೆ ಶರೀರಗಳನ್ನು ನೋಡುವದರಲ್ಲಿ ಸಂತೋಷಿಸುವಿರಿ. [QE][QS]ನೀವು ನನ್ನೊಂದಿಗೆ ಇದ್ದಿರಿ. [QE][QS2]ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. [QE][QS]ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. [QE][QS2]ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. [QE][QS2]ಅನಂತರ ನೀವು ಹೋಗಿ ಆ ಸುಳ್ಳುದೇವರೊಂದಿಗೆ ಒಪ್ಪಂದ ಮಾಡುತ್ತೀರಿ. [QE]
9. [QS]ಮೋಲೆಕನಿಗೆ ಅಂದವಾಗಿ ತೋರುವಂತೆ [QE][QS2]ನೀವು ನಿಮಗೆ ಎಣ್ಣೆ, ಸುಗಂಧದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. [QE][QS]ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. [QE][QS2]ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು. [QE]
10. [QS]ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ. [QE][QS2]ಯಾಕೆಂದರೆ ಇವುಗಳನ್ನು ಮಾಡುವುದರಲ್ಲೇ ನಿಮಗೆ ಸಂತೋಷ. [QE]
11. [QS]ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. [QE][QS2]ನನ್ನನ್ನು ಗಮನಕ್ಕೇ ತರಲಿಲ್ಲ. [QE][QS]ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? [QE][QS2]ನೀವು ಯಾರಿಗೆ ಭಯಪಡುತ್ತಿದ್ದಿರಿ? [QE][QS2]ನೀವು ಸುಳ್ಳಾಡಿದ್ದು ಯಾಕೆ? [QE][QS]ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. [QE][QS2]ಆದರೆ ನೀವು ನನ್ನನ್ನು ಗೌರವಿಸಲಿಲ್ಲ. [QE]
12. [QS]ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ [QE][QS2]ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು. [QE]
13. [QS]ನಿಮಗೆ ಸಹಾಯದ ಅವಶ್ಯಕತೆ ಬಂದಾಗ [QE][QS2]ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. [QE][QS2]ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. [QE][QS]ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. [QE][QS2]ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. [QE][QS]ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. [QE][QS2]ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.” [QE]
14. {#1ಯೆಹೋವನು ತನ್ನ ಜನರನ್ನು ಕಾಪಾಡುವನು } [QS]ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! [QE][QS2]ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ. [QE][PBR]
15. [QS]ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. [QE][QS2]ಆತನು ಸದಾಕಾಲ ಜೀವಿಸುತ್ತಾನೆ. [QE][QS2]ಆತನ ಹೆಸರು ಪರಿಶುದ್ಧವಾದದ್ದು. [QE][QS]ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. [QE][QS2]ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. [QE][QS]ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. [QE][QS2]ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ. [QE]
16. [QS]ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. [QE][QS2]ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. [QE][QS]ನಾನು ಹಾಗೆ ಮಾಡುವವನಾದರೆ [QE][QS2]ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು. [QE]
17. [QS]ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. [QE][QS2]ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. [QE][QS]ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. [QE][QS2]ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ[* ತನಗಿಷ್ಟವಾದ ಸ್ಥಳಕ್ಕೆ ಅಕ್ಷರಶಃ, “ದಂಗೆಕೋರತನದ ರೀತಿಯಲ್ಲಿ ತನಗಿಷ್ಟಬಂದಂತೆ ಮಾಡಿದನು.” ] ಹೋದನು. [QE]
18. [QS]ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. [QE][QS2]ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ. [QE]
19. [QS]ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. [QE][QS2]ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. [QE][QS]ನಾನು ಅವರನ್ನು ಗುಣಪಡಿಸುವೆನು.” [QE][QS]ಇದು ಯೆಹೋವನ ನುಡಿ. [QE][PBR]
20. [QS]ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, [QE][QS2]ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. [QE][QS]ಅವರು ಸಿಟ್ಟುಗೊಂಡು ಸಾಗರದಂತೆ [QE][QS2]ಕೆಸರನ್ನು ಕದಡಿಸುವರು. [QE]
21. [QS]ನನ್ನ ದೇವರು ಹೇಳುವುದೇನೆಂದರೆ: [QE][QS2]“ದುಷ್ಟ ಜನರಿಗೆ ಸಮಾಧಾನವಿಲ್ಲ.” [QE]