పవిత్ర బైబిల్

ఈజీ టు రీడ్ వెర్షన్ (ERV) - తెలుగు
యెషయా గ్రంథము
1. {#1ದುಷ್ಟರು ತಮ್ಮ ಜೀವಿತವನ್ನು ಬದಲಾಯಿಸಬೇಕು } [PS]ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.
2. ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.
3. ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.
4. ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.
5. ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. [PE][PS]ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು.
6. ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. [PE][PS]ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.
7. ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.
8. ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು. [PE]
9. {#1ಇಸ್ರೇಲರ ಪಾಪವೇ ಸಂಕಟಕ್ಕೆ ಕಾರಣ } [QS]ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. [QE][QS]ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ [QE][QS2]ನಾವು ಬೆಳಕಿಗಾಗಿ ಕಾಯಬೇಕಾಗಿದೆ. [QE][QS]ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ [QE][QS2]ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ. [QE]
10. [QS]ನಾವು ಕಣ್ಣಿಲ್ಲದವರಂತಿದ್ದೇವೆ. [QE][QS2]ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. [QE][QS]ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. [QE][QS2]ಹಗಲಿನಲ್ಲಿಯೂ ನಮಗೆ ಕಾಣದು. [QE][QS2]ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ. [QE]
11. [QS]ನಾವೆಲ್ಲಾ ಗುಣುಗುಟ್ಟುತ್ತೇವೆ. [QE][QS2]ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. [QE][QS]ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. [QE][QS2]ಆದರೆ ಧರ್ಮವೇ ಇಲ್ಲ. [QE][QS]ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. [QE][QS2]ಆದರೆ ರಕ್ಷಣೆಯು ಬಹುದೂರವಿದೆ. [QE]
12. [QS]ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. [QE][QS2]ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. [QE][QS]ಹೌದು, ನಾವು ಈ ಕಾರ್ಯಗಳನ್ನು [QE][QS2]ಮಾಡಿ ದೋಷಿಗಳಾಗಿದ್ದೇವೆ. [QE]
13. [QS]ನಾವು ಪಾಪಮಾಡಿ [QE][QS2]ಯೆಹೋವನಿಂದ ದೂರ ಹೋಗಿದ್ದೇವೆ. [QE][QS]ಆತನಿಂದ ದೂರವಾಗಿ [QE][QS2]ಆತನನ್ನು ತೊರೆದುಬಿಟ್ಟಿದ್ದೇವೆ. [QE][QS]ನಾವು ದುಷ್ಟತನವನ್ನೂ [QE][QS2]ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. [QE][QS]ನಮ್ಮ ಹೃದಯಗಳಲ್ಲಿ [QE][QS2]ದುಷ್ಟಯೋಜನೆಗಳನ್ನು ಹಾಕಿರುತ್ತೇವೆ. [QE]
14. [QS]ನ್ಯಾಯವು ನಮ್ಮಿಂದ ತೊಲಗಿಹೋಗಿದೆ. [QE][QS]ಸತ್ಯವು ಬೀದಿ ಪಾಲಾಗಿದೆ. [QE][QS2]ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು. [QE]
15. [QS]ಸತ್ಯವು ಹೊರಟುಹೋಯಿತು. [QE][QS2]ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. [QE][PBR] [QS]ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು [QE][QS2]ಯೆಹೋವನು ಬೇಸರಗೊಂಡಿದ್ದಾನೆ. [QE]
16. [QS]ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು [QE][QS2]ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. [QE][QS]ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ [QE][QS2]ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು. [QE]
17. [QS]ಯೆಹೋವನು ಯುದ್ಧ ಸನ್ನದ್ಧನಾದನು. [QE][QS2]ಆತನು ಒಳ್ಳೆಯತನವೆಂಬ ಕವಚ, [QE][QS2]ರಕ್ಷಣೆಯೆಂಬ ಶಿರಸ್ತ್ರಾಣ, [QE][QS2]ಶಿಕ್ಷೆಯೆಂಬ ಬಟ್ಟೆ ಮತ್ತು [QE][QS2]ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ. [QE]
18. [QS]ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. [QE][QS2]ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು. [QE]
19. [QS]ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. [QE][QS2]ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. [QE][QS]ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ [QE][QS2]ಯೆಹೋವನು ಬೇಗನೆ ಬರುವನು. [QE]
20. [QS]ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. [QE][QS2]ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು. [QE][PBR]
21. [PS]ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು. [PE]
మొత్తం 66 అధ్యాయాలు, ఎంపిక చేయబడింది అధ్యాయము 59 / 66
1 {#1ದುಷ್ಟರು ತಮ್ಮ ಜೀವಿತವನ್ನು ಬದಲಾಯಿಸಬೇಕು } ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು. 2 ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ. 3 ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ. 4 ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ. 5 ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು. 6 ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು. 7 ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ. 8 ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು. 9 {#1ಇಸ್ರೇಲರ ಪಾಪವೇ ಸಂಕಟಕ್ಕೆ ಕಾರಣ } ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ. 10 ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ. 11 ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ. 12 ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ. 13 ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ. 14 ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು. 15 ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ. 16 ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು. 17 ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ. 18 ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು. 19 ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು. 20 ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು. 21 ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.
మొత్తం 66 అధ్యాయాలు, ఎంపిక చేయబడింది అధ్యాయము 59 / 66
×

Alert

×

Telugu Letters Keypad References