1. {#1ಯೆಹೋವನು ಮತ್ತು ವಿಗ್ರಹಗಳು } [PS]ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.
2. ಯೆಹೋವನು ಹೀಗೆ ಹೇಳುತ್ತಾನೆ: [PE][PBR] [QS]“ಬೇರೆ ಜನಾಂಗಗಳಂತೆ ಜೀವಿಸಬೇಡಿ. [QE][QS2]ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. [QE][QS]ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. [QE][QS2]ಆದರೆ ನೀವು ಅವುಗಳಿಗೆ ಹೆದರಬಾರದು. [QE]
3. [QS]ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. [QE][QS]ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. [QE][QS]ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು. [QE]
4. [QS]ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. [QE][QS]ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ. [QE]
5. [QS]ಬೇರೆ ಜನಾಂಗದವರ ವಿಗ್ರಹಗಳು [QE][QS2]ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. [QE][QS]ಅವರ ವಿಗ್ರಹಗಳು ಮಾತಾಡಲಾರವು; [QE][QS2]ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. [QE][QS]ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. [QE][QS2]ಅವು ನಿಮಗೆ ಕೇಡನ್ನೂ ಮಾಡಲಾರವು; [QE][QS]ಸಹಾಯವನ್ನೂ ಮಾಡಲಾರವು.” [QE][PBR]
6. [QS]ಯೆಹೋವನೇ, ನಿನ್ನತೆ ಯಾರೂ ಇಲ್ಲ. [QE][QS2]ನೀನೇ ಮಹೋನ್ನತನು. [QE][QS]ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು. [QE]
7. [QS]ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. [QE][QS2]ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. [QE][QS]ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ [QE][QS2]ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ. [QE][PBR]
8. [QS]ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; [QE][QS]ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ. [QE]
9. [QS]ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ [QE][QS2]ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. [QE][QS]ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; [QE][QS]ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. [QE][QS2]ಅವು ಕುಶಲರ ಕೌಶಲ್ಯವಾಗಿವೆ. [QE]
10. [QS]ಯೆಹೋವನೊಬ್ಬನೇ ನಿಜವಾದ ದೇವರು. [QE][QS2]ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. [QE][QS2]ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. [QE][QS]ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. [QE][QS2]ಜನಾಂಗಗಳು ಆತನ ಕೋಪವನ್ನು ತಡೆಯಲಾರವು. [QE][PBR]
11. [QS]ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: [QE][QS]‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. [QE][QS2]ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’ ” [QE][PBR]
12. [QS]ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. [QE][QS2]ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. [QE][QS]ತನ್ನ ವಿವೇಕದಿಂದ ದೇವರು [QE][QS2]ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ. [QE]
13. [QS]ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. [QE][QS2]ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. [QE][QS]ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. [QE][QS2]ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. [QE][QS2]ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ. [QE][PBR]
14. [QS]ಜನರು ಬುದ್ಧಿಗೇಡಿಗಳಾಗಿದ್ದಾರೆ. [QE][QS2]ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. [QE][QS]ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. [QE][QS2]ಅವುಗಳಲ್ಲಿ ಜೀವವಿಲ್ಲ.[* ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು. ] [QE]
15. [QS]ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. [QE][QS2]ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. [QE][QS]ನ್ಯಾಯನಿರ್ಣಯದ ಸಮಯದಲ್ಲಿ [QE][QS2]ಆ ವಿಗ್ರಹಗಳನ್ನು ನಾಶಪಡಿಸಲಾಗುವುದು. [QE]
16. [QS]ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. [QE][QS]ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. [QE][QS2]ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. [QE][QS]“ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ. [QE]
17. {#1ವಿನಾಶವು ಬರುತ್ತಿದೆ } [QS]ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. [QE][QS]ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. [QE][QS2]ವೈರಿಯು ನಗರವನ್ನು ಮುತ್ತಿದ್ದಾನೆ. [QE]
18. [QS]ಯೆಹೋವನು ಹೇಳುತ್ತಾನೆ: [QE][QS]“ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. [QE][QS2]ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. [QE][QS2]ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.” [QE][PBR]
19. [QS]ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. [QE][QS2]ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. [QE][QS]ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” [QE][QS2]ಎಂದು ಸಮಾಧಾನ ತಂದುಕೊಂಡೆ. [QE]
20. [QS]ನನ್ನ ಗುಡಾರವು ಹಾಳಾಗಿದೆ. [QE][QS2]ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. [QE][QS]ನನ್ನ ಮಕ್ಕಳು ನನ್ನನ್ನು ಬಿಟ್ಟು [QE][QS2]ಹೊರಟುಹೋಗಿದ್ದಾರೆ. [QE][QS]ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. [QE][QS2]ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ. [QE]
21. [QS]ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. [QE][QS2]ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. [QE][QS]ಅವರು ಜ್ಞಾನಿಗಳಲ್ಲ, [QE][QS2]ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು. [QE]
22. [QS]ಕೇಳಿರಿ, ಉತ್ತರ ದಿಕ್ಕಿನಿಂದ [QE][QS2]ಬರುತ್ತಿರುವ ಮಹಾಧ್ವನಿಯನ್ನು! [QE][QS]ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. [QE][QS2]ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು. [QE][PBR]
23. [QS]ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. [QE][QS2]ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ. [QE]
24. [QS]ಯೆಹೋವನೇ, ನಮ್ಮನ್ನು ತಿದ್ದು, [QE][QS2]ಆದರೆ ಕಠೋರನಾಗಬೇಡ, [QE][QS2]ಕೋಪದಲ್ಲಿ ನಮ್ಮನ್ನು ದಂಡಿಸಬೇಡ. [QE]
25. [QS]ನಿನಗೆ ಕೋಪ ಬಂದಿದ್ದರೆ [QE][QS2]ಬೇರೆ ಜನಾಂಗಗಳನ್ನು ಶಿಕ್ಷಿಸು. [QE][QS]ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. [QE][QS2]ಅವರು ನಿನ್ನನ್ನು ಆರಾಧಿಸುವುದಿಲ್ಲ. [QE][QS]ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. [QE][QS2]ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. [QE][QS2]ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು. [QE][PBR]