1. [PS]ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
2. ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. [PE][PBR] [QS]“ ‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. [QE][QS2]ಅವರು ಮರಣಹೊಂದುತ್ತಾರೆ. [QE][QS]ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. [QE][QS2]ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. [QE][QS]ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. [QE][QS2]ಅವರು ಹಸಿವಿನಿಂದ ಸಾಯುತ್ತಾರೆ. [QE][QS]ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. [QE][QS2]ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು. [QE]
3. [QS]ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ [QE][QS]ಇದು ಯೆಹೋವನ ನುಡಿ. [QE][QS]‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. [QE][QS]ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. [QE][QS]ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು [QE][QS2]ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ. [QE]
4. [QS]ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ [QE][QS2]ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. [QE][QS]ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ [QE][QS2]ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. [QE][QS2]ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. [QE][QS2]ಮನಸ್ಸೆಯು ಯೆಹೂದದ ರಾಜನಾಗಿದ್ದನು.’ [QE][PBR]
5. [QS]“ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. [QE][QS2]ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. [QE][QS2]ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ. [QE]
6. [QS]ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” [QE][QS]ಇದು ಯೆಹೋವನ ನುಡಿ. [QE][QS]“ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. [QE][QS2]ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. [QE][QS2]ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ. [QE]
7. [QS]ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ [QE][QS2]ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. [QE][QS]ನನ್ನ ಜನರು ಬದಲಾಗಲಿಲ್ಲ. [QE][QS2]ನಾನು ಅವರನ್ನು ನಾಶಮಾಡುತ್ತೇನೆ. [QE][QS2]ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ. [QE]
8. [QS]ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. [QE][QS2]ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. [QE][QS]ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. [QE][QS2]ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. [QE][QS]ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; [QE][QS2]ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು. [QE]
9. [QS]ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. [QE][QS2]ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. [QE][QS]ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. [QE][QS2]ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. [QE][QS]ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. [QE][QS2]ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.” [QE]
10. {#1ಯೆರೆಮೀಯನು ಪುನಃ ದೇವರಲ್ಲಿ ದೂರುತ್ತಾನೆ } [QS]ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ [QE][QS2]ನನಗೆ ದುಃಖವಾಗುತ್ತದೆ. [QE][QS]ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ [QE][QS2]ವಾದಿಸುತ್ತಾ ನಿಂದಿಸುತ್ತಾ ಇರುವೆ. [QE][QS]ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. [QE][QS2]ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ. [QE]
11. [QS]ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. [QE][QS2]ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.[* ದೇವರೇ … ಪ್ರಾರ್ಥಿಸಿದ್ದೇನೆ ಇದನ್ನು ಈ ರೀತಿಯಲ್ಲಿಯೂ ಅನುವಾದಿಸಬಹುದು: “ಪ್ರಭುವು, ಇಕ್ಕಟ್ಟಿನಲ್ಲಿಯೂ ಆಪತ್ತಿನಲ್ಲಿಯೂ ನಿನ್ನ ಶತ್ರುಗಳು ಬೇಡಿಕೊಳ್ಳುವಂತೆ ಮಾಡುವನು.” ] [QE]
12. {#1ಯೆರೆಮೀಯನಿಗೆ ದೇವರ ಉತ್ತರ } [QS]“ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು [QE][QS2]ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. [QE][QS]ಉತ್ತರದಿಂದ[† ಉತ್ತರ ಯೆಹೂದದ ಮೇಲೆ ಆಕ್ರಮಣ ಮಾಡಲು ಉತ್ತರ ದಿಕ್ಕಿನಿಂದ ಬರುವ ಬಾಬಿಲೋನಿನ ಸೈನ್ಯವನ್ನು ಇದು ಸೂಚಿಸುತ್ತದೆ. ] ಬರುವವನು ಕಬ್ಬಿಣದಂತಿದ್ದಾನೆ. [QE]
13. [QS]ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. [QE][QS2]ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. [QE][QS]ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. [QE][QS2]ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. [QE][QS2]ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ. [QE]
14. [QS]ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. [QE][QS2]ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. [QE][QS]ನನಗೆ ಅತಿಕೋಪ ಬಂದಿದೆ. [QE][QS2]ನನ್ನ ಕೋಪವು ಜ್ವಾಲೆಯಂತಿದೆ. [QE][QS2]ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.” [QE][PBR]
15. [QS]ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. [QE][QS2]ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. [QE][QS]ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. [QE][QS2]ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. [QE][QS]ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. [QE][QS2]ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. [QE][QS]ನನ್ನ ಬಗ್ಗೆ ವಿಚಾರ ಮಾಡು. [QE][QS2]ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು. [QE]
16. [QS]ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. [QE][QS2]ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. [QE][QS]ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು. [QE]
17. [QS]ತಮಾಷೆ ಮಾಡಿಕೊಂಡು ನಗುತ್ತಲಿದ್ದ [QE][QS2]ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. [QE][QS]ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. [QE][QS]ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ. [QE]
18. [QS]ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. [QE][QS2]ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. [QE][QS]ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. [QE][QS2]ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ. [QE][PBR]
19. [QS]ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ [QE][QS2]ನಾನು ನಿನ್ನನ್ನು ದಂಡಿಸುವುದಿಲ್ಲ. [QE][QS]ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ [QE][QS2]ನೀನು ನನ್ನ ಸೇವೆ ಮಾಡಬಹುದು. [QE][QS]ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ [QE][QS2]ನೀನು ನನ್ನ ಪರವಾಗಿ ಮಾತನಾಡಬಹುದು. [QE][QS]ಯೆರೆಮೀಯನೇ, ಯೆಹೂದದ ಜನರು [QE][QS2]ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. [QE][QS]ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು. [QE]
20. [QS]ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. [QE][QS]ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ [QE][QS2]ಎಂದು ಆ ಜನರು ತಿಳಿದುಕೊಳ್ಳುವರು. [QE][QS]ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. [QE][QS2]ಆದರೆ ಅವರು ನಿನ್ನನ್ನು ಸೋಲಿಸಲಾರರು. [QE][QS]ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. [QE][QS2]ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ” [QE][PBR] [QS]ಇದು ಯೆಹೋವನಿಂದ ಬಂದ ನುಡಿ. [QE]
21. [QS]“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. [QE][QS2]ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.” [QE][PBR]