1. {#1ವಿಪತ್ತಿನ ದಿನ } [PS]ನನಗೆ ಯೆಹೋವನಿಂದ ಈ ಸಂದೇಶ ಬಂದಿತು:
2. “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಬಾರದು. ನೀನು ಇಲ್ಲಿ ಮಕ್ಕಳನ್ನು ಹೊಂದಬಾರದು.” [PE]
3. [PS]ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.
4. “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.” [PE]
5.
6. [PS]ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ. [PE][PS]“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.
7. ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ. [PE]
8. [PS]“ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಬೇಡ.
9. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’ [PE]
10. [PS]“ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
11. ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.
12. ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಬಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಬಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ.
13. ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’ ” [PE]
14. [PS]ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.
15. ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.” [PE]
16. [PS]ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು[* ಆ ಮೀನುಗಾರರು … ಬೇಟೆಗಾರರು ಅಂದರೆ ಬಾಬಿಲೋನಿನ ಶತ್ರುಸೈನಿಕರು. ] ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.
17. ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.
18. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.” [PE][PBR]
19. [QS]ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. [QE][QS2]ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. [QE][QS]ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. [QE][QS2]ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. [QE][QS]ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. [QE][QS2]ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು. [QE]
20. [QS]ಜನರು ನಿಜವಾದ ದೇವರುಗಳನ್ನು ಮಾಡಬಲ್ಲರೇ? [QE][QS]ಇಲ್ಲ, ಅವರು ವಿಗ್ರಹಗಳನ್ನು ಮಾಡಬಹುದು. ಆದರೆ ಆ ವಿಗ್ರಹಗಳು ನಿಜವಾದ ದೇವರುಗಳಲ್ಲ. [QE][PBR]
21. [QS]“ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. [QE][QS2]ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. [QE][QS]ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. [QE][QS2]ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು. [QE][PBR]