పవిత్ర బైబిల్

ఈజీ టు రీడ్ వెర్షన్ (ERV) - తెలుగు
యిర్మీయా
1. {#1ಹೃದಯದ ಮೇಲೆ ಬರೆದ ಅಪರಾಧ } [QS]“ಯೆಹೂದದ ಜನರ ಅಪರಾಧ [QE][QS2]ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. [QE][QS]ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. [QE][QS2]ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. [QE][QS2]ಅವರ ಹೃದಯವೇ ಆ ಕಲ್ಲು, [QE][QS]ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ. [QE]
2. [QS]ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ [QE][QS2]ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. [QE][QS]ಅವರು ಅಶೇರಳಿಗೆ ಅರ್ಪಿಸಿದ [QE][QS2]ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. [QE][QS]ಅವರು ಸೊಂಪಾಗಿ ಬೆಳೆದ ಮರದ ಕೆಳಗೆ [QE][QS2]ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು. [QE]
3. [QS]ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ [QE][QS2]ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. [QE][QS]ಯೆಹೂದದ ಜನರಲ್ಲಿ ಭಂಡಾರಗಳಿವೆ. [QE][QS2]ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. [QE][QS]ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. [QE][QS]ಆ ಸ್ಥಳಗಳಲ್ಲಿ ಪೂಜೆಮಾಡಿ [QE][QS2]ನೀವು ಪಾಪಕ್ಕೆ ಗುರಿಯಾಗಿರುವಿರಿ. [QE]
4. [QS]ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. [QE][QS2]ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. [QE][QS]ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. [QE][QS2]ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.” [QE]
5. {#1ಜನರಲ್ಲಿ ನಂಬಿಕೆ, ದೇವರಲ್ಲಿ ನಂಬಿಕೆ } [QS]ಯೆಹೋವನು ಹೀಗೆ ಹೇಳಿದನು: [QE][QS]“ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. [QE][QS2]ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. [QE][QS]ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ. [QE]
6. [QS]ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, [QE][QS2]ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, [QE][QS]ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ [QE][QS2]ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ. [QE]
7. [QS]ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. [QE][QS2]ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು. [QE]
8. [QS]ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, [QE][QS2]ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, [QE][QS]ಉಷ್ಣಕ್ಕೆ ಹೆದರದ, ಯಾವಾಗಲೂ [QE][QS2]ಹಸಿರೆಲೆಗಳಿಂದ ಸೊಂಪಾದ, [QE][QS]ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, [QE][QS2]ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು. [QE][PBR]
9. [QS]“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. [QE][QS2]ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, [QE][QS2]ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ. [QE]
10. [QS]ನಾನೇ ಯೆಹೋವನು, [QE][QS2]ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, [QE][QS]ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. [QE][QS2]ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು. [QE]
11. [QS]ಕೆಲವು ಸಲ ಪಕ್ಷಿಯು [QE][QS2]ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. [QE][QS]ಹಣಕ್ಕಾಗಿ ಮೋಸಮಾಡುವ ಮನುಷ್ಯನು [QE][QS2]ಆ ಪಕ್ಷಿಯಂತಿರುವನು, [QE][QS]ಅವನು ತನ್ನ ಮಧ್ಯಪ್ರಾಯದಲ್ಲಿ [QE][QS2]ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. [QE][QS]ಅವನು ತನ್ನ ಅಂತ್ಯಕಾಲದಲ್ಲಿ [QE][QS2]ಮೂರ್ಖನಾಗಿ ಕಂಡುಬರುವನು.” [QE][PBR]
12. [QS]ಆದಿಯಿಂದ ನಮ್ಮ ಪವಿತ್ರಾಲಯವು[* ಪವಿತ್ರಾಲಯ ಜೆರುಸಲೇಮಿನಲ್ಲಿದ್ದ ಪವಿತ್ರಾಲಯ. ] [QE][QS2]ಯೆಹೋವನ ಮಹತ್ವದ ಸಿಂಹಾಸವಾಗಿದೆ. [QE][QS2]ಅದೊಂದು ಬಹಳ ಪ್ರಮುಖವಾದ ಸ್ಥಳವಾಗಿದೆ. [QE]
13. [QS]ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, [QE][QS2]ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, [QE][QS]ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ [QE][QS2]ಅವರ ಜೀವನ ಬಹಳ ಮೊಟಕಾಗುತ್ತದೆ. [QE]
14. {#1ಯೆರೆಮೀಯನ ಮೂರನೆ ದೂರು } [QS]ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ [QE][QS2]ನಿಜವಾಗಿಯೂ ನಾನು ಗುಣಹೊಂದುತ್ತೇನೆ. [QE][QS]ನನ್ನನ್ನು ರಕ್ಷಿಸು, [QE][QS2]ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. [QE][QS]ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ. [QE]
15. [QS]ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. [QE][QS2]“ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? [QE][QS2]ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ. [QE][PBR]
16. [QS]ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, [QE][QS2]ನಾನು ನಿನ್ನನ್ನು ಅನುಸರಿಸಿದೆನು. [QE][QS2]ನೀನು ಹೇಳಿದಂತೆ ನಾನು ಕುರುಬನಾದೆ.[† ಕುರುಬ ದೇವರ ಜನರನ್ನು ಕೆಲವು ಸಲ ಕುರಿಗಳೆಂದು, ಅವರನ್ನು ನೋಡಿಕೊಳ್ಳುವವರನ್ನು ಕುರುಬರೆಂದು ಹೇಳಲಾಗಿದೆ. ] [QE][QS]ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. [‡ ಆ … ಬಯಸಲಿಲ್ಲ ಯೆರೆಮೀಯನು ಬರಲಿದ್ದ ವಿಪತ್ತುಗಳ ಬಗ್ಗೆ ಮತ್ತು ಇಕ್ಕಟ್ಟುಗಳ ಬಗ್ಗೆ ಪ್ರವಾದಿಸಿದನು, ಆದರೆ ಅವುಗಳು ನೆರವೇರುವುದು ಅವನಿಗೆ ಇಷ್ಟವಿರಲಿಲ್ಲ. ] [QE][QS2]ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. [QE][QS2]ಈಗ ನಡೆಯುತ್ತಿರುವುದನ್ನೇಲ್ಲ ನೀನು ನೋಡುತ್ತಿರುವೆ. [QE]
17. [QS]ಯೆಹೋವನೇ, ನನ್ನನ್ನು ಹಾಳುಮಾಡಬೇಡ. [QE][QS2]ಕಷ್ಟ ಕಾಲದಲ್ಲಿ ನಾನು ನಿನ್ನನ್ನೇ ಅವಲಂಭಿಸಿರುತ್ತೇನೆ. [QE]
18. [QS]ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. [QE][QS]ಆ ಜನರು ಲಜ್ಜೆಪಡುವಂತೆ ಮಾಡು. [QE][QS2]ನನ್ನನ್ನು ನಿರಾಶೆಗೊಳಿಸಬೇಡ. [QE][QS]ಆ ಜನರಿಗೆ ಭೀತಿಯುಂಟಾಗಲಿ, [QE][QS2]ಆದರೆ ನನಗೆ ಭಯವಾಗುವಂತೆ ಮಾಡಬೇಡ. [QE][QS]ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. [QE][QS2]ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. [QE]
19. {ಸಬ್ಬತ್‌ದಿನವನ್ನು ಪವಿತ್ರವಾಗಿಡಬೇಕು }
20. [PS]ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ[§ ಜನರ ದಾಬರ ಇದು ಜೆರುಸಲೇಮಿಗೆ ಹೋಗುವ ದಾಬರಗಳಲ್ಲಿ ಒಂದಾಗಿರಬಹುದು, ಅಥವಾ ಯಾಜಕರಲ್ಲದವರು ದೇವಾಲಯಕ್ಕೆ ಹೋಗುತ್ತಿದ್ದ ದಕ್ಷಿಣದ ದಾಬರಗಳಲ್ಲಿ ಒಂದಾಗಿರಬಹುದು. ] ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು. [PE][PS]“ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!
21. ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.
22. ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.
23. ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.
24. ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’ ” ಇದು ಯೆಹೋವನ ನುಡಿ. “ ‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು. [PE]
25. [PS]“ ‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.
26. ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು. [PE]
27. [PS]“ ‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’ ” [PE]
మొత్తం 52 అధ్యాయాలు, ఎంపిక చేయబడింది అధ్యాయము 17 / 52
1 {#1ಹೃದಯದ ಮೇಲೆ ಬರೆದ ಅಪರಾಧ } “ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ. 2 ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು. 3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ. 4 ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.” 5 {#1ಜನರಲ್ಲಿ ನಂಬಿಕೆ, ದೇವರಲ್ಲಿ ನಂಬಿಕೆ } ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ. 6 ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ. 7 ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು. 8 ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು. 9 “ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ. 10 ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು. 11 ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.” 12 ಆದಿಯಿಂದ ನಮ್ಮ ಪವಿತ್ರಾಲಯವು[* ಪವಿತ್ರಾಲಯ ಜೆರುಸಲೇಮಿನಲ್ಲಿದ್ದ ಪವಿತ್ರಾಲಯ. ] ಯೆಹೋವನ ಮಹತ್ವದ ಸಿಂಹಾಸವಾಗಿದೆ. ಅದೊಂದು ಬಹಳ ಪ್ರಮುಖವಾದ ಸ್ಥಳವಾಗಿದೆ. 13 ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ. 14 {#1ಯೆರೆಮೀಯನ ಮೂರನೆ ದೂರು } ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು, ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ. 15 ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ. 16 ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ.[† ಕುರುಬ ದೇವರ ಜನರನ್ನು ಕೆಲವು ಸಲ ಕುರಿಗಳೆಂದು, ಅವರನ್ನು ನೋಡಿಕೊಳ್ಳುವವರನ್ನು ಕುರುಬರೆಂದು ಹೇಳಲಾಗಿದೆ. ] ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. [‡ ಆ … ಬಯಸಲಿಲ್ಲ ಯೆರೆಮೀಯನು ಬರಲಿದ್ದ ವಿಪತ್ತುಗಳ ಬಗ್ಗೆ ಮತ್ತು ಇಕ್ಕಟ್ಟುಗಳ ಬಗ್ಗೆ ಪ್ರವಾದಿಸಿದನು, ಆದರೆ ಅವುಗಳು ನೆರವೇರುವುದು ಅವನಿಗೆ ಇಷ್ಟವಿರಲಿಲ್ಲ. ] ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೇಲ್ಲ ನೀನು ನೋಡುತ್ತಿರುವೆ. 17 ಯೆಹೋವನೇ, ನನ್ನನ್ನು ಹಾಳುಮಾಡಬೇಡ. ಕಷ್ಟ ಕಾಲದಲ್ಲಿ ನಾನು ನಿನ್ನನ್ನೇ ಅವಲಂಭಿಸಿರುತ್ತೇನೆ. 18 ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. 19 {ಸಬ್ಬತ್‌ದಿನವನ್ನು ಪವಿತ್ರವಾಗಿಡಬೇಕು } 20 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ[§ ಜನರ ದಾಬರ ಇದು ಜೆರುಸಲೇಮಿಗೆ ಹೋಗುವ ದಾಬರಗಳಲ್ಲಿ ಒಂದಾಗಿರಬಹುದು, ಅಥವಾ ಯಾಜಕರಲ್ಲದವರು ದೇವಾಲಯಕ್ಕೆ ಹೋಗುತ್ತಿದ್ದ ದಕ್ಷಿಣದ ದಾಬರಗಳಲ್ಲಿ ಒಂದಾಗಿರಬಹುದು. ] ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು. “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ! 21 ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ. 22 ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ. 23 ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ. 24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’ ” ಇದು ಯೆಹೋವನ ನುಡಿ. “ ‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು. 25 “ ‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು. 26 ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು. 27 “ ‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’ ”
మొత్తం 52 అధ్యాయాలు, ఎంపిక చేయబడింది అధ్యాయము 17 / 52
×

Alert

×

Telugu Letters Keypad References