1. {#1ದೇವ ಜನರ ದೇವದ್ರೋಹವು } [PS]ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು:
2. “ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: [PE][PBR] [QS]“ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; [QE][QS2]ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. [QE][QS]ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ [QE][QS2]ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ. [QE]
3. [QS]ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. [QE][QS2]ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. [QE][QS]ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. [QE][QS2]ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’ ” [QE][QS]ಇದು ಯೆಹೋವನ ಸಂದೇಶ. [QE][PBR]
4. [QS]ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. [QE][QS2]ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ. [QE][PBR]
5. [QS]ಯೆಹೋವನು ಹೀಗೆನ್ನುತ್ತಾನೆ: [QE][QS]“ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? [QE][QS2]ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? [QE][QS]ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ [QE][QS2]ತಾವು ಸಹ ನಿಷ್ಪ್ರಯೋಜಕರಾದರು. [QE]
6. [QS]‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? [QE][QS2]ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? [QE][QS]ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? [QE][QS2]ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. [QE][QS]ಯೆಹೋವನು ನಮ್ಮನ್ನು ಅಂಧಕಾರಮಯವಾದ [QE][QS2]ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. [QE][QS]ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. [QE][QS2]ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. [QE][QS]ಈಗ ಆ ಯೆಹೋವನು ಎಲ್ಲಿದ್ದಾನೆ?’ ” [QE][QS2]ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ. [QE][PBR]
7. [QS]“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ [QE][QS2]ಫಲವತ್ತಾದ ಭೂಮಿಗೆ ಕರೆದುತಂದೆ. [QE][QS]ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. [QE][QS2]ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. [QE][QS]ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, [QE][QS2]ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ. [QE][PBR]
8. [QS]“ ‘ಯೆಹೋವನು ಎಲ್ಲಿ?’ [QE][QS2]ಎಂದು ಯಾಜಕರು ಕೇಳಲಿಲ್ಲ. [QE][QS]ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. [QE][QS2]ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. [QE][QS]ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. [QE][QS2]ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.” [QE][PBR]
9. [QS]“ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. [QE][QS2]ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು. [QE]
10. [QS]ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. [QE][QS2]ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. [QE][QS]ಯಾರಾದರೂ ಎಂದಾದರೂ [QE][QS2]ಇಂಥ ಕೆಲಸ ಮಾಡಿರುವರೇ, ನೋಡಿರಿ. [QE]
11. [QS]ಯಾವ ಜನಾಂಗವಾದರೂ ಎಂದಾದರೂ [QE][QS2]ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? [QE][QS]ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) [QE][QS]ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು [QE][QS2]ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ. [QE][PBR]
12. [QS]“ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! [QE][QS2]ಭಯದಿಂದ ನಡುಗು!” [QE][QS]ಎಂದು ಯೆಹೋವನು ನುಡಿಯುತ್ತಾನೆ. [QE]
13. [QS]“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. [QE][QS2]ಅವರು ನನ್ನಿಂದ ಮುಖ ತಿರುವಿದ್ದಾರೆ. [QE][QS]ನಾನು ಜೀವಜಲದ ಬುಗ್ಗೆಯಾಗಿದ್ದೇನೆ. [QE][QS2]ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. [QE][QS]ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. [QE][QS2]ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ. [QE][PBR]
14. [QS]“ಇಸ್ರೇಲಿನ ಜನರು ಗುಲಾಮರಾಗಿರುವರೇ? [QE][QS2]ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? [QE][QS2]ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು? [QE]
15. [QS]ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. [QE][QS2]ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. [QE][QS]ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; [QE][QS2]ಅವುಗಳು ನಿರ್ಜನವಾಗಿವೆ. [QE]
16. [QS]ಮೆಂಫೀಸ್ ಮತ್ತು ತಹಪನೇಸ್ ನಗರಗಳ ಜನರು [QE][QS2]ನಿನ್ನ ತಲೆಬುರುಡೆಯನ್ನು ಒಡೆದುಬಿಟ್ಟಿದ್ದಾರೆ. [QE]
17. [QS]ತೊಂದರೆಯು ನಿನ್ನ ತಪ್ಪಿನ ಫಲ. [QE][QS2]ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ [QE][QS2]ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ. [QE]
18. [QS]ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. [QE][QS2]ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ?[* ನೈಲ್ … ಹೋಗುವುದೇಕೆ? ಅಥವಾ “ಈಜಿಪ್ಟ್ ಮತ್ತು ಅಸ್ಸೀರಿಯಾಗಳಿಂದ ನೀನು ಸಹಾಯ ಬೇಡುವುದೇಕೆ?” ] [QE][QS2]ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ? [QE]
19. [QS]ನೀವು ಕೆಟ್ಟದ್ದನ್ನು ಮಾಡಿದರೆ [QE][QS2]ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. [QE][QS]ನಿಮಗೆ ವಿಪತ್ತು ಬರುತ್ತದೆ. [QE][QS2]ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. [QE][QS]ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. [QE][QS2]ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” [QE][QS]ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು. [QE]
20. [QS]“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. [QE][QS2]ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. [QE][QS2]‘ನಾನು ನಿನ್ನನ್ನು ಸೇವಿಸುವದಿಲ್ಲ’ವೆಂದು ನನಗೆ ಹೇಳಿಬಿಟ್ಟೆ. [QE][QS]ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ [QE][QS2]ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.[† ಎತ್ತರ … ವರ್ತಿಸಿದೆ ಈ ಸ್ಥಳಗಳಲ್ಲಿ ಜನರು ತಮ್ಮ ಸುಳ್ಳುದೇವರುಗಳನ್ನು ಪೂಜಿಸಿದರು ಎಂದರ್ಥ. ] [QE]
21. [QS]ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. [QE][QS2]ನೀನು ಒಳ್ಳೆಯ ಬೀಜದಂತಿದ್ದಿ. [QE][QS]ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ? [QE]
22. [QS]ನೀನು ಚೌಳನಿಂದ ತೊಳೆದುಕೊಂಡರೂ [QE][QS2]ಹೆಚ್ಚು ಸೋಪನ್ನು ಉಪಯೋಗಿಸಿದರೂ [QE][QS2]ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು. [QE]
23. [QS]“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ [QE][QS2]ನೀನು ನನಗೆ ಹೇಗೆ ಹೇಳುವೆ? [QE][QS]ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. [QE][QS2]ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. [QE][QS]ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ [QE][QS2]ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ. [QE]
24. [QS]ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. [QE][QS2]ಅದು ಬೆದೆಯ ಕಾಲದಲ್ಲಿ ಗಾಳಿಯನ್ನು ಮೂಸಿ ನೋಡುತ್ತದೆ. [QE][QS2]ಅದಕ್ಕೆ ಬೆದೆ ಏರಿದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. [QE][QS]ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. [QE][QS2]ಆಗ ಅದನ್ನು ಪಡೆಯುವುದು ಬಹಳ ಸುಲಭ. [QE]
25. [QS]ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! [QE][QS2]ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. [QE][QS]ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. [QE][QS2]ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. [QE][QS2]ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ. [QE][PBR]
26. [QS]“ಜನರ ಕೈಗೆ ಸಿಕ್ಕಿಬಿದ್ದಾಗ [QE][QS2]ಕಳ್ಳನಿಗೆ ನಾಚಿಕೆಯಾಗುತ್ತದೆ. [QE][QS]ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. [QE][QS2]ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು. [QE]
27. [QS]ಅವರು ಮರದ ತುಂಡುಗಳೊಡನೆ ಮಾತನಾಡಿ, [QE][QS2]‘ನೀನು ನಮ್ಮ ತಂದೆ’ ಎಂದು ಹೇಳುವರು. [QE][QS]ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, [QE][QS2]‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. [QE][QS]ಆ ಜನರೆಲ್ಲರು ನಾಚಿಕೆಪಡುವರು. [QE][QS]ಅವರು ನನ್ನ ಕಡೆಗೆ ನೋಡುವದಿಲ್ಲ. [QE][QS2]ಅವರು ನನಗೆ ವಿಮುಖರಾಗಿದ್ದಾರೆ. [QE][QS]ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, [QE][QS2]‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ. [QE]
28. [QS]ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? [QE][QS2]ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. [QE][QS]ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ. [QE][PBR]
29. [QS]“ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, [QE][QS2]ನೀವೆಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” [QE][QS]ಎನ್ನುತ್ತಾನೆ ಯೆಹೋವನು. [QE]
30. [QS]“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, [QE][QS2]ಆದರೆ ಅದರಿಂದ ಪ್ರಯೋಜನವಾಗಲಿಲ್ಲ. [QE][QS]ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. [QE][QS]ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. [QE][QS2]ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.” [QE]
31. [QS]ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, [QE][PBR] [QS]“ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? [QE][QS2]ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? [QE][QS]ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. [QE][QS2]ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. [QE][QS]ಅವರು ಹಾಗೆ ಏಕೆ ಹೇಳುತ್ತಾರೆ? [QE]
32. [QS]ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. [QE][QS2]ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. [QE][QS]ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ. [QE][PBR]
33. [QS]“ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. [QE][QS2]ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ. [QE]
34. [QS]ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. [QE][QS2]ಅದು ನಿರ್ದೋಷಿಗಳಾದ ಬಡವರ ರಕ್ತ. [QE][QS]ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. [QE][QS2]ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ. [QE]
35. [QS]ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. [QE][QS2]ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. [QE][QS]ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. [QE][QS2]ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ. [QE]
36. [QS]ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. [QE][QS2]ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. [QE][QS]ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, [QE][QS2]ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ. [QE]
37. [QS]ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ [QE][QS2]ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. [QE][QS]ನೀನು ಆ ದೇಶಗಳನ್ನು ನಂಬಿರುವೆ, [QE][QS2]ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.” [QE][PBR]