1. [QS]ಇದು ಯೆಹೋವನ ಸಂದೇಶ: [QE][QS]“ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ [QE][QS2]ನನ್ನಲ್ಲಿಗೆ ಹಿಂತಿರುಗಿ ಬಾ. [QE][QS]ನಿನ್ನ ವಿಗ್ರಹಗಳನ್ನು ಎಸೆದುಬಿಡು. [QE][QS2]ನನ್ನಿಂದ ದೂರಸರಿದು ಅಲೆದಾಡಬೇಡ. [QE]
2. [QS]ನೀನು ಹೀಗೆ ಮಾಡಿದರೆ [QE][QS2]ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. [QE][QS]‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. [QE][QS2]ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. [QE][QS]ನೀನು ಹೀಗೆ ಮಾಡಿದರೆ, [QE][QS2]ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. [QE][QS]ಆತನ ಕಾರ್ಯಗಳಿಗಾಗಿ [QE][QS2]ಆತನಿಗೆ ಸ್ತೋತ್ರ ಮಾಡುತ್ತವೆ.” [QE][PBR]
3. [PS]ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: [PE][PBR] [QS]“ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, [QE][QS2]ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. [QE][QS2]ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ. [QE]
4. [QS]ಯೆಹೋವನ ಮನುಷ್ಯರಾಗಿರಿ, [QE][QS2]ನಿಮ್ಮ ಹೃದಯ ಪರಿವರ್ತನೆ[* ಹೃದಯ ಪರಿವರ್ತನೆ ಅಕ್ಷರಶಃ, ನಿಮ್ಮ ಹೃದಯದ ಮುಂದೊಗಲನ್ನು ಕತ್ತರಿಸಿ ಹಾಕಿರಿ. ] ಮಾಡಿಕೊಳ್ಳಿರಿ. [QE][QS]ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ [QE][QS2]ನನಗೆ ವಿಪರೀತ ಕೋಪ ಬರುವುದು. [QE][QS]ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. [QE][QS2]ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. [QE][QS]ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. [QE][QS2]ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.” [QE]
5. {#1ಉತ್ತರ ದಿಕ್ಕಿನಿಂದ ವಿಪತ್ತು } [PS]“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: [PE][PBR] [QS]ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ [QE][QS2]‘ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ’ ಎಂದು ಹೇಳಿರಿ. [QE][QS]ದೊಡ್ಡ ಧ್ವನಿಯಲ್ಲಿ [QE][QS2]‘ಒಂದು ಕಡೆ ಸೇರೋಣ ಬನ್ನಿ, [QE][QS2]ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ. [QE]
6. [QS]ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. [QE][QS2]ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. [QE][QS]ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. [QE][QS2]ನಾನು ಭಯಂಕರವಾದ ವಿನಾಶವನ್ನುಟು ಮಾಡಲಿದ್ದೇನೆ.” [QE]
7. [QS]ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. [QE][QS2]ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. [QE][QS]ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. [QE][QS]ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. [QE][QS2]ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು. [QE]
8. [QS]ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. [QE][QS2]ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ. [QE]
9. [QS]ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ [QE][QS2]ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. [QE][QS]ಯಾಜಕರು ಭಯಪಡುವರು; [QE][QS2]ಪ್ರವಾದಿಗಳು ಬೆರಗಾಗುವರು.” [QE][PBR]
10. [PS]ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು. [PE][PBR]
11. [QS]ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ [QE][QS2]ಒಂದು ಸಂದೇಶವನ್ನು ಕೊಡಲಾಗುವುದು. [QE][QS]“ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. [QE][QS2]ಅದು ಮರಳುಗಾಡಿನಿಂದ ಬೀಸುವುದು. [QE][QS]ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು [QE][QS2]ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ. [QE]
12. [QS]ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. [QE][QS2]ಅದು ನನ್ನಿಂದ ಬರುತ್ತದೆ. [QE][QS]ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.” [QE]
13. [QS]ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. [QE][QS2]ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. [QE][QS2]ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. [QE][QS]ಇದು ನಮಗೆ ತುಂಬ ಅಪಾಯಕಾರಿಯಾಗಿದೆ; [QE][QS2]ನಾವು ಹಾಳಾಗಿಹೋದೆವು. [QE][PBR]
14. [QS]ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. [QE][QS]ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. [QE][QS2]ದುರಾಲೋಚನೆಗಳನ್ನು ಮುಂದುವರಿಸಬೇಡಿರಿ. [QE]
15. [QS]ಕೇಳಿರಿ, ದಾನ್ ಪ್ರದೇಶದಿಂದ [QE][QS2]ದೂತನ ಸ್ವರವು ಕೇಳಿಬರುತ್ತಿದೆ. [QE][QS]ಎಫ್ರಾಯೀಮ್ ಬೆಟ್ಟಪ್ರದೇಶದಿಂದ [QE][QS2]ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ. [QE]
16. [QS]“ಇದನ್ನು ಈ ಜನಾಂಗಕ್ಕೆ ತಿಳಿಸಿರಿ. [QE][QS2]ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. [QE][QS]ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. [QE][QS]ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ [QE][QS2]ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ. [QE]
17. [QS]ಹೊಲವನ್ನು ಕಾಯುವ ಜನರಂತೆ [QE][QS2]ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. [QE][QS]ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, [QE][QS2]ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” [QE][QS]ಎಂದು ಯೆಹೋವನು ಹೇಳುವನು. [QE][PBR]
18. [QS]“ನಿನ್ನ ನಡತೆಯೂ ನಿನ್ನ ಕೃತ್ಯಗಳೂ [QE][QS2]ನಿನಗೆ ಈ ಕಷ್ಟವನ್ನು ತಂದವು. [QE][QS]ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. [QE][QS]ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ [QE][QS2]ಆಳವಾದ ನೋವನ್ನು ಉಂಟುಮಾಡಿದೆ.” [QE]
19. {#1ಯೆರೆಮೀಯನ ಗೋಳಾಟ } [QS]ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. [QE][QS2]ನೋವಿನಿಂದ ನಾನು ಬಾಗಿಹೋಗಿದ್ದೇನೆ. [QE][QS]ನಾನು ತುಂಬ ಹೆದರಿಕೊಂಡಿದ್ದೇನೆ. [QE][QS2]ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. [QE][QS]ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. [QE][QS2]ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ. [QE]
20. [QS]ವಿನಾಶನದ ಮೇಲೆ ವಿನಾಶವು ಬಂದು [QE][QS2]ಇಡೀ ದೇಶವೇ ಹಾಳಾಗಿದೆ. [QE][QS]ಫಕ್ಕನೆ ನನ್ನ ಗುಡಾರಗಳು ಹಾಳಾದವು. [QE][QS2]ನನ್ನ ಪರದೆಗಳು ಹರಿದುಹೋದವು. [QE]
21. [QS]ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? [QE][QS2]ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಬ್ಧವನ್ನು ಕೇಳಬೇಕು? [QE][PBR]
22. [QS]ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. [QE][QS2]ಅವರು ನನ್ನನ್ನು ಅರಿಯದವರಾಗಿದ್ದಾರೆ. [QE][QS]ಅವರು ಮೂಢ ಮಕ್ಕಳಾಗಿದ್ದಾರೆ. [QE][QS2]ಅವರು ಅವಿವೇಕಿಗಳಾಗಿದ್ದಾರೆ. [QE][QS]ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. [QE][QS2]ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು. [QE]
23. {#1ವಿಪತ್ತಿನ ಆಗಮನ } [QS]ನಾನು ಭೂಮಿಯ ಕಡೆಗೆ ನೋಡಿದೆ, [QE][QS2]ಭೂಮಿಯು ಬರಿದಾಗಿತ್ತು. [QE][QS2]ಭೂಮಿಯ ಮೇಲೇನೂ ಇರಲಿಲ್ಲ. [QE][QS]ನಾನು ಆಕಾಶದ ಕಡೆಗೆ ನೋಡಿದೆ, [QE][QS2]ಅದರ ಬೆಳಕು ಹೋಗಿಬಿಟ್ಟಿತ್ತು. [QE]
24. [QS]ನಾನು ಪರ್ವತಗಳ ಕಡೆಗೆ ನೋಡಿದೆ, [QE][QS2]ಅವುಗಳು ನಡುಗುತ್ತಿದ್ದವು. [QE][QS2]ಎಲ್ಲಾ ಬೆಟ್ಟಗಳು ಅದರುತ್ತಿದ್ದವು. [QE]
25. [QS]ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. [QE][QS2]ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು. [QE]
26. [QS]ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. [QE][QS2]ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನ್ನು ಮಾಡಿದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು. [QE][PBR]
27. [QS]ಯೆಹೋವನು ಹೀಗೆ ಹೇಳುತ್ತಾನೆ: [QE][QS]“ಇಡೀ ದೇಶವು ಹಾಳಾಗುವುದು. [QE][QS2]ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ. [QE]
28. [QS]ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. [QE][QS2]ಆಕಾಶವು ಕಪ್ಪಾಗುವುದು. [QE][QS]ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. [QE][QS2]ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.” [QE][PBR]
29. [QS]ಯೆಹೂದದ ಜನರು ಕುದುರೆಗಳ, ಸವಾರರ, [QE][QS2]ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. [QE][QS]ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. [QE][QS2]ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. [QE][QS2]ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. [QE][QS]ಯೆಹೂದದ ಎಲ್ಲಾ ನಗರಗಳು ಬರಿದಾಗುವವು. [QE][QS2]ಅಲ್ಲಿ ಒಬ್ಬರೂ ಇರುವದಿಲ್ಲ. [QE][PBR]
30. [QS]ಹಾಳಾಗಿಹೋದ ಯೆಹೂದವೇ, [QE][QS2]ನೀನು ಮಾಡುತ್ತಿರುವುದೇನು? [QE][QS]ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? [QE][QS]ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? [QE][QS]ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? [QE][QS]ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. [QE][QS]ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. [QE][QS2]ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ. [QE]
31. [QS]ಮೊದಲನೆ ಹೆರಿಗೆಯ ಸಮಯದಲ್ಲಿ [QE][QS2]ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, [QE][QS2]ಇದು ಚೀಯೋನ್ ನಗರಿಯ ಮಗಳ ಕೂಗಾಟ. [QE][QS]ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, [QE][QS2]“ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, [QE][QS2]ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ. [QE][PBR]