1. {#1ಅಮ್ಮೋನಿನ ಬಗ್ಗೆ ಸಂದೇಶ } [PS]ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: [PE][PBR] [QS]“ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು [QE][QS2]ನೀವು ತಿಳಿದುಕೊಂಡಿರುವಿರೇನು? [QE][QS]ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ [QE][QS2]ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? [QE][QS]ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?” [QE][PBR]
2. [QS]ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು [QE][QS2]ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. [QE][QS]ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. [QE][QS2]ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. [QE][QS]ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. [QE][QS2]ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” [QE][QS]ಯೆಹೋವನು ಹೀಗೆನ್ನುತ್ತಾನೆ: [QE][PBR]
3. [QS]“ಹೆಷ್ಬೋನಿನ ಜನರೇ, ಗೋಳಾಡಿರಿ; [QE][QS2]ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. [QE][QS]ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. [QE][QS2]ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. [QE][QS]ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. [QE][QS2]ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. [QE][QS]ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. [QE][QS2]ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು. [QE]
4. [QS]ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, [QE][QS2]ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. [QE][QS]ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. [QE][QS2]ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.” [QE]
5. [QS]ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, [QE][QS]“ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. [QE][QS]ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. [QE][QS2]ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.” [QE][PBR]
6.
7. [PS]“ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ. [PE]{#1ಎದೋಮಿನ ಬಗ್ಗೆ ಸಂದೇಶ } [PS]ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: [PE][PBR] [QS]“ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? [QE][QS2]ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? [QE][QS2]ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ? [QE]
8. [QS]ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; [QE][QS2]ಏಕೆಂದರೆ ಏಸಾವನು[* ಏಸಾವ ಯಾಕೋಬನ ಅವಳಿ ಸಹೋದರ. ಆದರೆ ಇಲ್ಲಿ ಎದೋಮ್ ಎಂದರ್ಥ. ಏಕೆಂದರೆ ಎದೋಮಿನ ಜನರು ಏಸಾವನ ವಂಶಜರು. ] ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು. [QE][PBR]
9. [QS]“ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; [QE][QS2]ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; [QE][QS]ರಾತ್ರಿಯಲ್ಲಿ ಕಳ್ಳರು ಬಂದರೆ [QE][QS2]ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ. [QE]
10. [QS]ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು. [QE][QS2]ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನ್ನು ನಾನು ಪತ್ತೆ ಹಚ್ಚುವೆನು. [QE][QS]ಅವನು ನನ್ನ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. [QE][QS2]ಅವನ ಮಕ್ಕಳು, ಬಂಧುಗಳು ಮತ್ತು ನೆರೆಹೊರೆಯವರು ಸತ್ತುಹೋಗುವರು. [QE]
11. [QS]ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. [QE][QS2]ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.” [QE][PBR]
12. [PS]ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”
13. ಯೆಹೋವನು ಹೀಗೆನ್ನುತ್ತಾನೆ, “ನನ್ನ ಸಬಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.” [PE][PBR]
14. [QS]ಯೆಹೋವನ ಒಂದು ಸಂದೇಶವನ್ನು ಕೇಳಿದೆ. [QE][QS2]ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. [QE][QS]ಆ ಸಂದೇಶ ಹೀಗಿದೆ: [QE][QS]“ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. [QE][QS2]ಯುದ್ಧಕ್ಕೆ ಸಿದ್ಧರಾಗಿರಿ. [QE][QS2]ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ. [QE]
15. [QS]ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. [QE][QS2]ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು. [QE]
16. [QS]ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. [QE][QS2]ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. [QE][QS]ಆದರೆ ಅದು ನಿನ್ನ ಮೂರ್ಖತನ. [QE][QS2]ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. [QE][QS]ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. [QE][QS2]ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. [QE][QS]ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. [QE][QS2]ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” [QE][QS]ಇದು ಯೆಹೋವನ ನುಡಿ. [QE][PBR]
17. [QS]“ಎದೋಮನ್ನು ನಾಶಮಾಡಲಾಗುವುದು. [QE][QS2]ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. [QE][QS2]ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು. [QE]
18. [QS]ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. [QE][QS2]ಅಲ್ಲಿ ಯಾರೂ ವಾಸಮಾಡಲಾರರು” [QE][QS]ಯೆಹೋವನು ಹೀಗೆನ್ನುತ್ತಾನೆ: [QE][PBR]
19. [PS]“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.” [PE][PBR]
20. [QS]ಎದೋಮ್ಯರಿಗೆ ಯೆಹೋವನು [QE][QS2]ಮಾಡಬೇಕೆಂದಿರುವುದನ್ನು ಕೇಳಿರಿ. [QE][QS]ತೇಮಾನ್ಯರ ಬಗ್ಗೆ ಯೆಹೋವನು [QE][QS2]ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. [QE][QS]ಎದೋಮಿನ ಕುರಿಮರಿಗಳನ್ನು (ಜನರನ್ನು) [QE][QS2]ಶತ್ರು ಎಳೆದುಕೊಂಡು ಹೋಗುವನು. [QE][QS]ಸಂಭವಿಸಿದ ಸಂಗತಿಯನ್ನು ನೋಡಿ [QE][QS2]ಎದೋಮಿನ ಹುಲ್ಲುಗಾವಲುಗಳು ಬೆದರುವವು. [QE]
21. [QS]ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು. [QE][QS2]ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು. [QE][PBR]
22. [QS]ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. [QE][QS2]ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. [QE][QS]ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. [QE][QS2]ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು. [QE]
23. {#1ದಮಸ್ಕದ ವಿಷಯವಾಗಿ ದೈವೋಕ್ತಿ } [PS]ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: [PE][PBR] [QS]“ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. [QE][QS2]ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. [QE][QS]ಅವುಗಳು ನಿರಾಶೆಗೊಂಡಿವೆ. [QE][QS2]ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ. [QE]
24. [QS]ದಮಸ್ಕ ನಗರವು ನಿಬರ್ಲವಾಗಿದೆ. [QE][QS2]ಜನರು ಓಡಿಹೋಗಬಯಸುತ್ತಾರೆ, [QE][QS2]ಜನರು ಗಾಬರಿಗೊಂಡಿದ್ದಾರೆ. [QE][QS]ಪ್ರಸವವೇದನೆಪಡುವ ಸ್ತ್ರೀಯಂತೆ [QE][QS2]ಸಂಕಟಪಡುತ್ತಿದ್ದಾರೆ. [QE][PBR]
25. [QS]“ದಮಸ್ಕವು ಸಂತೋಷಭರಿತವಾದ ನಗರವಾಗಿದೆ. [QE][QS2]ಜನರು ಇನ್ನೂ ಆ ‘ಮೋಜಿನ ನಗರವನ್ನು’ ಬಿಟ್ಟಿಲ್ಲ. [QE]
26. [QS]ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. [QE][QS2]ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” [QE][QS]ಇದು ಸರ್ವಶಕ್ತನಾದ ಯೆಹೋವನ ನುಡಿ. [QE]
27. [QS]“ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. [QE][QS2]ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.” [QE]
28. {#1ಕೇದಾರ ಮತ್ತು ಹಾಚೋರಿನ ಬಗ್ಗೆ ಸಂದೇಶ } [PS]ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: [PE][PBR] [QS]“ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. [QE][QS2]ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ. [QE]
29. [QS]ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. [QE][QS2]ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. [QE][QS2]ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. [QE][QS]‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ [QE][QS2]ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು. [QE]
30. [QS]ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, [QE][QS2]ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” [QE][QS]ಇದು ಯೆಹೋವನ ಸಂದೇಶ. [QE][QS]“ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. [QE][QS2]ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ. [QE][PBR]
31. [QS]“ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. [QE][QS2]ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. [QE][QS]ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. [QE][QS2]ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು. [QE]
32. [QS]“ವೈರಿಯು ಅವರ ಒಂಟೆಗಳನ್ನು ಮತ್ತು [QE][QS2]ಅವರ ದನಗಳ ಮಂದೆಗಳನ್ನು ಅಪಹರಿಸುವನು. [QE][QS2]ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. [QE][QS]ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು[† ಗಡ್ಡ … ಮೂಲೆಗಳನ್ನು ಯೆಹೂದ್ಯರು ತಮ್ಮ ಗಡ್ಡದ ಕೂದಲನ್ನು ವಿದೇಶಿಯರ ರೀತಿಯಲ್ಲಿ ಕತ್ತರಿಸಿಕೊಳ್ಳುತ್ತಿರಲಿಲ್ಲ. ನೋಡಿ ವಿಮೋಚನಕಾಂಡ 19:27. ] ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. [QE][QS2]ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” [QE][QS]ಇದು ಯೆಹೋವನ ನುಡಿ. [QE]
33. [QS]“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. [QE][QS]ಅಲ್ಲಿ ಯಾರೂ ವಾಸಮಾಡಲಾರರು. [QE][QS2]ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.” [QE]
34. {#1ಏಲಾಮಿನ ಬಗ್ಗೆ ದೈವೋಕ್ತಿ } [PS]ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು. [PE][PBR]
35. [QS]ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: [QE][QS]“ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. [QE][QS2]ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ. [QE]
36. [QS]ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು [QE][QS2]ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. [QE][QS]ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ [QE][QS2]ಏಲಾಮ್ಯರನ್ನು ಚದುರಿಸುವೆನು. [QE][QS]ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು. [QE]
37. [QS]ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ [QE][QS2]ನಾನು ಏಲಾಮನ್ನು ಚೂರುಚೂರು ಮಾಡುವೆನು. [QE][QS]ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ [QE][QS2]ನಾನು ಎಲಾಮ್ಯರನ್ನು ಮುರಿದುಬಿಡುವೆನು. [QE][QS]ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. [QE][QS2]ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” [QE][QS]ಇದು ಯೆಹೋವನ ನುಡಿ. [QE][QS]“ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. [QE][QS2]ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು. [QE]
38. [QS]ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. [QE][QS2]ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” [QE][QS]ಇದು ಯೆಹೋವನ ನುಡಿ. [QE]
39. [QS]“ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” [QE][QS]ಇದು ಯೆಹೋವನ ನುಡಿ. [QE][PBR]