1. {#1ಬಾಬಿಲೋನಿನ ಬಗ್ಗೆ ದೈವೋಕ್ತಿ } [PS]ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು. [PE][PBR]
2. [QS]“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, [QE][QS2]ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. [QE][QS]‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. [QE][QS2]ಬೇಲ್ ದೇವತೆ ನಾಚಿಕೆಪಡುವುದು. [QE][QS2]ಮೆರೋದಾಕ್ ದೇವತೆಯು ಭಯಪಡುವುದು. [QE][QS]ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. [QE][QS2]ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’ [QE]
3. [QS]ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. [QE][QS2]ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. [QE][QS]ಅಲ್ಲಿ ಯಾರೂ ವಾಸಮಾಡಲಾರರು. [QE][QS2]ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.” [QE]
4. [QS]ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ [QE][QS2]ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. [QE][QS]ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; [QE][QS2]ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು. [QE]
5. [QS]ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. [QE][QS2]ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. [QE][QS]‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. [QE][QS2]ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ [QE][QS2]ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು. [QE][PBR]
6. [QS]“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. [QE][QS2]ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. [QE][QS]ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. [QE][QS2]ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ. [QE]
7. [QS]ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. [QE][QS2]ಆ ಶತ್ರುಗಳು, [QE][QS]‘ನಾವು ಮಾಡಿದ್ದು ತಪ್ಪಲ್ಲ. [QE][QS2]ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. [QE][QS]ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. [QE][QS2]ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು. [QE][PBR]
8. [QS]“ಬಾಬಿಲೋನಿನಿಂದ ಓಡಿಹೋಗಿರಿ. [QE][QS2]ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. [QE][QS2]ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ. [QE]
9. [QS]ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. [QE][QS]ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. [QE][QS]ಬಾಬಿಲೋನ್ ಅವರಿಗೆ ವಶವಾಗುವುದು. [QE][QS]ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. [QE][QS2]ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು. [QE]
10. [QS]ಕಸ್ದೀಯ ಸಂಪತ್ತನ್ನೆಲ್ಲ ಶತ್ರು ಕೊಳ್ಳೆಹೊಡೆಯುವನು. [QE][QS2]ಶತ್ರು ಸೈನಿಕರು ತಮಗೆ ಬೇಕಾದದ್ದೆಲ್ಲವನ್ನು ತೆಗೆದುಕೊಳ್ಳುವರು” [QE][QS]ಇದು ಯೆಹೋವನ ನುಡಿ. [QE][PBR]
11. [QS]“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. [QE][QS2]ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. [QE][QS]ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. [QE][QS2]ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ. [QE]
12. [QS]ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. [QE][QS2]ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. [QE][QS]ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. [QE][QS2]ಅದು ಬರಿದಾದ ಮರುಭೂಮಿಯಂತಾಗುವುದು. [QE]
13. [QS]ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು [QE][QS2]ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. [QE][QS2]ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. [QE][QS]ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. [QE][QS2]ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು. [QE][PBR]
14. [QS]“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. [QE][QS2]ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. [QE][QS2]ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. [QE][QS]ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ. [QE]
15. [QS]ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, [QE][QS2]ಜಯಘೋಷಮಾಡಿರಿ. [QE][QS]ಈಗ ಬಾಬಿಲೋನ್ ಶರಣಾಗತವಾಗಿದೆ. [QE][QS2]ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. [QE][QS]ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. [QE][QS2]ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು. [QE]
16. [QS]ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. [QE][QS2]ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. [QE][QS]ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. [QE][QS]ಈಗ ಶತ್ರು ಸೈನಿಕರು ಬಂದುದರಿಂದ [QE][QS2]ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, [QE][QS]ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ. [QE][PBR]
17. [QS]“ಇಸ್ರೇಲು ದೇಶಗಳಲ್ಲೆಲ್ಲಾ [QE][QS2]ಚದರಿಹೋದ ಕುರಿಹಿಂಡಿನಂತಾಗಿದೆ. [QE][QS]ಸಿಂಹಗಳಿಗೆ ಹೆದರಿ ಓಡಿಹೋದ [QE][QS2]ಕುರಿಗಳಂತಾಗಿದೆ ಇಸ್ರೇಲು. [QE][QS]ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ [QE][QS2]ಅಶ್ಶೂರದ ರಾಜನು. [QE][QS]ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ [QE][QS2]ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. [QE]
18. [QS]ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: [QE][QS]‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. [QE][QS2]ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು. [QE][PBR]
19. [QS]“ ‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. [QE][QS2]ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. [QE][QS2]ಅದು ತಿಂದು ತೇಗುವದು. [QE][QS2]ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’ ” [QE]
20. [QS]ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. [QE][QS2]ಆದರೆ ಯಾವ ದೋಷಗಳೂ ಇರುವದಿಲ್ಲ. [QE][QS]ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. [QE][QS2]ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. [QE][QS]ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. [QE][QS]ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.” [QE][PBR]
21. [QS]ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. [QE][QS2]ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. [QE][QS2]ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. [QE][QS2]ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ. [QE][PBR]
22. [QS]“ಯುದ್ಧದ ಆರ್ಭಟವು ದೇಶದಲ್ಲೆಲ್ಲ ಕೇಳಿಬರುತ್ತಿದೆ. [QE][QS2]ಅದು ಮಹಾವಿನಾಶದ ಧ್ವನಿಯಾಗಿದೆ. [QE]
23. [QS]ಬಾಬಿಲೋನು ಇಡೀ ಭೂಮಂಡಲಕ್ಕೆ [QE][QS2]‘ಸುತ್ತಿಗೆ’ಯಂತಿದೆ. [QE][QS]ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. [QE][QS2]ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ. [QE]
24. [QS]ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. [QE][QS2]ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. [QE][QS]ನೀನು ಯೆಹೋವನ ವಿರುದ್ಧ ಹೋರಾಡಿದೆ. [QE][QS2]ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು. [QE]
25. [QS]ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. [QE][QS2]ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. [QE][QS]ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. [QE][QS2]ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ. [QE][PBR]
26. [QS]“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. [QE][QS2]ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. [QE][QS]ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; [QE][QS2]ಯಾರನ್ನೂ ಜೀವಂತ ಉಳಿಸಬೇಡಿ. [QE][QS]ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ. [QE]
27. [QS]ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. [QE][QS2]ಅವರನ್ನು ಕತ್ತರಿಸಿಬಿಡಿ. [QE][QS]ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. [QE][QS2]ಇದು ಅವರನ್ನು ದಂಡಿಸುವ ಸಮಯ. [QE]
28. [QS]ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. [QE][QS2]ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. [QE][QS]ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. [QE][QS2]ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. [QE][QS2]ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ. [QE][PBR]
29. [QS]“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು [QE][QS2]ಬಿಲ್ಲುಗಾರರಿಗೆ ಹೇಳಿರಿ. [QE][QS]ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. [QE][QS2]ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. [QE][QS]ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. [QE][QS2]ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. [QE][QS]ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. [QE][QS2]ಪರಿಶುದ್ಧನಿಗೆ ಅವಮಾನ ಮಾಡಿದೆ. [QE][QS2]ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು. [QE]
30. [QS]ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. [QE][QS2]ಅದರ ಎಲ್ಲಾ ಸೈನಿಕರು ಅಂದು ಸಾಯುವರು.” [QE][QS]ಯೆಹೋವನು ಹೀಗೆನ್ನುತ್ತಾನೆ: [QE][PBR]
31. [QS]“ಬಾಬಿಲೋನೇ, ನೀನು ತುಂಬಾ ದುರಹಂಕಾರಿ. [QE][QS2]ನಾನು ನಿನಗೆ ವಿರುದ್ಧವಾಗಿದ್ದೇನೆ.” [QE][QS2]ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. [QE][QS]“ನಾನು ನಿನಗೆ ವಿರುದ್ಧವಾಗಿದ್ದೇನೆ. [QE][QS2]ನಿನ್ನನ್ನು ದಂಡಿಸುವ ಸಮಯ ಬಂದಿದೆ. [QE]
32. [QS]ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. [QE][QS2]ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. [QE][QS]ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. [QE][QS2]ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.” [QE][PBR]
33. [QS]ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: [QE][QS2]“ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. [QE][QS]ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. [QE][QS2]ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ. [QE]
34. [QS]ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. [QE][QS2]ಆತನ ಹೆಸರು ಸರ್ವಶಕ್ತನಾದ ಯೆಹೋವನು. [QE][QS]ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. [QE][QS2]ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. [QE][QS2]ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.” [QE][PBR]
35. [QS]ಯೆಹೋವನು ಹೀಗೆನ್ನುತ್ತಾನೆ: [QE][QS]“ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! [QE][QS2]ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, [QE][QS2]ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು! [QE]
36. [QS]ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! [QE][QS2]ಅವರು ಮೂರ್ಖರಂತಾಗುವರು. [QE][QS]ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, [QE][QS2]ಆ ಸೈನಿಕರು ಭಯಭೀತರಾಗಿರುವರು. [QE]
37. [QS]ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! [QE][QS2]ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! [QE][QS2]ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. [QE][QS]ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! [QE][QS2]ಆ ಐಶಬರ್ಯವು ಸೂರೆಗೊಳ್ಳುವುದು. [QE]
38. [QS]ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. [QE][QS2]ಆ ನೀರು ಬತ್ತಿಹೋಗುವದು. [QE][QS]ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. [QE][QS2]ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. [QE][QS2]ಆ ಜನರಿಗೆ ದುರ್ಗತಿ ಬರುತ್ತದೆ. [QE]
39. [QS]ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. [QE][QS2]ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. [QE][QS2]ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ. [QE]
40. [QS]ದೇವರು ಸೊದೋಮ್ ಗೊಮೋರ ನಗರಗಳನ್ನೂ [QE][QS2]ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. [QE][QS2]ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. [QE][QS]ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. [QE][QS2]ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.” [QE][PBR]
41. [QS]“ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. [QE][QS2]ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. [QE][QS2]ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ. [QE]
42. [QS]ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. [QE][QS2]ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. [QE][QS]ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. [QE][QS2]ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. [QE][QS]ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. [QE][QS2]ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ. [QE]
43. [QS]ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ [QE][QS2]ಕೇಳಿ ಬಹಳ ಗಾಬರಿಗೊಂಡನು; [QE][QS]ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. [QE][QS2]ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.” [QE][PBR]
44. [QS]ಯೆಹೋವನು ಹೀಗೆನ್ನುತ್ತಾನೆ: [QE][QS]“ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ [QE][QS2]ಒಮ್ಮೆ ಒಂದು ಸಿಂಹವು ಬರುವುದು. [QE][QS]ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. [QE][QS2]ಆ ಪ್ರಾಣಿಗಳೆಲ್ಲ ಓಡಿಹೋಗುವವು. [QE][QS]ನಾನು ಆ ಸಿಂಹದಂತಾಗುವೆನು. [QE][QS2]ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. [QE][QS]ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? [QE][QS2]ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. [QE][QS2]ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. [QE][QS]ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. [QE][QS2]ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.” [QE][PBR]
45. [QS]ಯೆಹೋವನು ಬಾಬಿಲೋನಿನ ವಿರುದ್ಧ [QE][QS2]ಮಾಡಬೇಕೆಂದಿರುವುದನ್ನು ಕೇಳಿರಿ. [QE][QS]“ಬಾಬಿಲೋನಿನ ಜನರ ವಿರುದ್ಧ [QE][QS2]ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. [QE][QS]ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. [QE][QS2]ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು. [QE]
46. [QS]ಬಾಬಿಲೋನ್ ಪತನವಾಗುವುದು. [QE][QS2]ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. [QE][QS]ಎಲ್ಲಾ ಜನಾಂಗಗಳ ಜನರು [QE][QS2]ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.” [QE][PBR]