1. {#1ಶತ್ರುಗಳು ಜೆರುಸಲೇಮ್ ನಗರವನ್ನು ಮುತ್ತಿದರು } [QS]ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; [QE][QS2]ಜೆರುಸಲೇಮ್ ನಗರದಿಂದ ಓಡಿಹೋಗಿರಿ. [QE][QS]ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; [QE][QS2]ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. [QE][QS]ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. [QE][QS]ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ. [QE]
2. [QS]ಚೀಯೋನ್ ಕುಮಾರಿಯೇ,[* ಚೀಯೋನ್ ಕುಮಾರಿಯೇ ಜೆರುಸಲೇಮ್ ಪಟ್ಟಣವೇ. ] ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ. [QE]
3. [QS]ಕುರುಬರು ಜೆರುಸಲೇಮಿಗೆ ಬರುತ್ತಾರೆ. [QE][QS2]ಮತ್ತು ಕುರಿಮಂದೆಗಳನ್ನು ತರುತ್ತಾರೆ. [QE][QS]ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. [QE][QS2]ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ. [QE][PBR]
4. [QS]“ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. [QE][QS2]ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. [QE][QS]ಆದರೆ ಈಗಾಗಲೇ ಹೊತ್ತಾಗಿದೆ. [QE][QS2]ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ. [QE]
5. [QS]ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. [QE][QS2]ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.” [QE][PBR]
6. [QS]ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: [QE][QS2]“ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; [QE][QS2]ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. [QE][QS]ನಗರವನ್ನು ದಂಡಿಸಬೇಕು. [QE][QS2]ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ. [QE]
7. [QS]ಬಾವಿಯಲ್ಲಿ ಹೊಸ ನೀರು ಬರುವಂತೆ [QE][QS2]ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. [QE][QS]ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. [QE][QS2]ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ. [QE]
8. [QS]ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. [QE][QS2]ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. [QE][QS]ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. [QE][QS2]ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.” [QE][PBR]
9. [QS]ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: [QE][QS]“ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು [QE][QS2]ಒಟ್ಟಾಗಿ ಸೇರಿಸಿರಿ. [QE][QS]ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ [QE][QS2]ಅವರನ್ನು ಒಟ್ಟಾಗಿ ಸೇರಿಸಿ. [QE][QS]ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ [QE][QS2]ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.” [QE]
10. [QS]ನಾನು ಯಾರೊಂದಿಗೆ ಮಾತನಾಡಲಿ? [QE][QS2]ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? [QE][QS2]ನನ್ನ ಮಾತನ್ನು ಯಾರು ಕೇಳುತ್ತಾರೆ? [QE][QS]ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. [QE][QS2]ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. [QE][QS]ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. [QE][QS2]ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ. [QE]
11. [QS]ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, [QE][QS2]ತಡೆದುತಡೆದು ನನಗೆ ಸಾಕಾಗಿದೆ. [QE][QS]“ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. [QE][QS2]ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. [QE][QS]ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು. [QE]
12. [QS]ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. [QE][QS2]ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. [QE][QS]ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” [QE][QS]ಇದು ಯೆಹೋವನ ಸಂದೇಶ. [QE][PBR]
13. [QS]“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. [QE][QS2]ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. [QE][QS2]ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ. [QE]
14. [QS]ಪ್ರವಾದಿಗಳು ಮತ್ತು ಯಾಜಕರು [QE][QS2]ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. [QE][QS2]ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ. [QE]
15. [QS]ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. [QE][QS2]ಆದರೆ ಅವರು ನಾಚಿಕೆಪಡುವದೇ ಇಲ್ಲ. [QE][QS]ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. [QE][QS2]ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. [QE][QS2]ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” [QE][QS]ಎಂದು ಯೆಹೋವನು ಅನ್ನುತ್ತಾನೆ. [QE][PBR]
16. [QS]ಯೆಹೋವನು ಹೀಗೆ ಹೇಳುತ್ತಾನೆ: [QE][QS]“ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. [QE][QS2]‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. [QE][QS2]ಆ ರಸ್ತೆಯನ್ನು ಹಿಡಿದು ನಡೆಯಿರಿ. [QE][QS]ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. [QE][QS]ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ. [QE]
17. [QS]ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. [QE][QS2]ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. [QE][QS2]ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು. [QE]
18. [QS]ಆದಕಾರಣ ಸರ್ವಜನಾಂಗಗಳೇ ಕೇಳಿರಿ, [QE][QS2]ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನ್ನು ಕೇಳಿರಿ. [QE]
19. [QS]ಭೂಲೋಕದ ಜನರೇ, ಕೇಳಿರಿ, [QE][QS2]ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. [QE][QS2]ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, [QE][QS2]ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.” [QE][PBR]
20. [QS]ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? [QE][QS2]ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? [QE][QS]ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. [QE][QS2]ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.” [QE][PBR]
21. [QS]“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. [QE][QS2]ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. [QE][QS]ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. [QE][QS2]ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು. [QE][PBR]
22. [QS]ಯೆಹೋವನು ಹೇಳುವುದೇನೆಂದರೆ: [QE][QS]“ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. [QE][QS2]ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ. [QE]
23. [QS]ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. [QE][QS2]ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. [QE][QS]ಅವರು ಬಲಶಾಲಿಗಳಾಗಿದ್ದಾರೆ. [QE][QS2]ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. [QE][QS]ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. [QE][QS2]ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.” [QE]
24. [QS]ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. [QE][QS2]ಭಯದಿಂದ ನಾವು ಅಸಹಾಯಕರಾಗಿದ್ದೇವೆ. [QE][QS]ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. [QE][QS2]ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ. [QE]
25. [QS]ಊರ ಹೊರಗೆ ಹೋಗಬೇಡಿರಿ. [QE][QS2]ರಸ್ತೆಗಳ ಮೇಲೆ ಹೋಗಬೇಡಿರಿ. [QE][QS]ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. [QE][QS2]ಎಲ್ಲಾ ಕಡೆಗೂ ಅಪಾಯವಿದೆ. [QE]
26. [QS]ಅಯ್ಯೋ ನನ್ನ ಜನರೇ, [QE][QS2]ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. [QE][QS]ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. [QE][QS2]ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. [QE][QS]ವಿನಾಶಕನು ತಕ್ಷಣ ನಮ್ಮ ಮೇಲೆರಗುವನು. [QE][PBR]
27. [QS]“ಯೆರೆಮೀಯನೇ, ನಾನು ನಿನ್ನನ್ನು [QE][QS2]ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. [QE][QS]ನೀನು ನನ್ನ ಜನರನ್ನು ಪರೀಕ್ಷಿಸು. [QE][QS2]ಅವರ ವ್ಯವಹಾರವನ್ನು ಅವಲೋಕಿಸು. [QE]
28. [QS]ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; [QE][QS2]ಅವರು ಬಹಳ ಹಟಮಾರಿಗಳಾಗಿದ್ದಾರೆ. [QE][QS]ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. [QE][QS2]ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ. [QE]
29. [QS][+ ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು.] ತಿದಿಗಳು[† ತಿದಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ. ] ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. [QE][QS2]ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. [QE][QS]ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. [QE][QS2]ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ. [QE]
30. [QS]ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ [QE][QS]ಎಂದು ಕರೆಯಲಾಗುವದು. [QE][QS2]ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.” [QE][PBR]