1. [QS]ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, [QE][QS2]ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, [QE][QS2]ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ. [QE][PBR]
2. [QS]ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, [QE][QS2]ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, [QE][QS]ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, [QE][QS2]ಅವರಿಂದ ದೂರ ಹೋಗಬಹುದಾಗಿತ್ತು. [QE][QS]ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, [QE][QS2]ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. [QE][PBR]
3. [QS]“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. [QE][QS2]ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. [QE][QS]ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. [QE][QS]ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. [QE][QS2]ಅವರು ನನ್ನನ್ನು ಅರಿತಿಲ್ಲ.” [QE][QS]ಯೆಹೋವನು ಈ ಮಾತನ್ನು ಹೇಳಿದನು. [QE][PBR]
4. [QS]“ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; [QE][QS2]ನಿಮ್ಮ ಸ್ವಂತ ಸಹೋದರನನ್ನೂ ನಂಬಬೇಡಿ. [QE][QS]ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. [QE][QS2]ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ. [QE]
5. [QS]ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. [QE][QS2]ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. [QE][QS]ಯೆಹೂದದ ಜನರು ತಮ್ಮ ನಾಲಿಗೆಗಳಿಗೆ [QE][QS2]ಸುಳ್ಳು ಹೇಳುವದನ್ನು ಕಲಿಸಿದ್ದಾರೆ. [QE][QS]ಅವರು ಹಿಂತಿರುಗಿ ಬರಲು [QE][QS2]ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ. [QE]
6. [QS]ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. [QE][QS2]ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. [QE][QS2]ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” [QE][QS]ಯೆಹೋವನು ಆ ಮಾತುಗಳನ್ನು ಹೇಳಿದನು. [QE][PBR]
7. [QS]ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: [QE][QS]“ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ [QE][QS]ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. [QE][QS2]ನನಗೆ ಬೇರೆ ಮಾರ್ಗವೇ ಇಲ್ಲ. [QE][QS2]ನನ್ನ ಜನರು ಪಾಪವನ್ನು ಮಾಡಿದ್ದಾರೆ. [QE]
8. [QS]ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. [QE][QS2]ಅವರ ಬಾಯಿಗಳು ಸುಳ್ಳಾಡುತ್ತವೆ. [QE][QS]ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. [QE][QS2]ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ. [QE]
9. [QS]ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?” [QE][QS]ಇದು ದೇವರಿಂದ ಬಂದ ಮಾತು. [QE][QS]“ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. [QE][QS2]ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.” [QE][PBR]
10. [QS]ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; [QE][QS2]ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. [QE][QS2]ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. [QE][QS]ಯಾರೂ ಅಲ್ಲಿ ತಿರುಗಾಡುವದಿಲ್ಲ. [QE][QS2]ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. [QE][QS]ಪಕ್ಷಿಗಳು ಹಾರಿಹೋಗಿವೆ; [QE][QS2]ಪ್ರಾಣಿಗಳು ಓಡಿಹೋಗಿವೆ. [QE][PBR]
11. [QS]“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. [QE][QS2]ಅದು ನರಿಗಳ ನಿವಾಸವಾಗುವದು. [QE][QS]ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. [QE][QS2]ಅಲ್ಲಿ ಒಬ್ಬರೂ ವಾಸಮಾಡಲಾರರು.” [QE][PBR]
12. [QS]ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? [QE][QS2]ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? [QE][QS]ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? [QE][QS2]ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? [QE][QS2]ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ? [QE][PBR]
13. [QS]ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು: [QE][QS]“ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. [QE][QS]ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ [QE][QS2]ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. [QE][QS2]ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ. [QE]
14. [QS]ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. [QE][QS2]ಅವರು ಹಟಮಾರಿಗಳಾಗಿದ್ದರು. [QE][QS]ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. [QE][QS2]ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.” [QE][PBR]
15. [QS]ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: [QE][QS]“ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; [QE][QS2]ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು. [QE]
16. [QS]ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. [QE][QS]ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ [QE][QS2]ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. [QE][QS]ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. [QE][QS2]ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.” [QE][PBR]
17. [QS]ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: [QE][QS]“ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, [QE][QS2]ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ. [QE]
18. [QS]‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. [QE][QS]ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; [QE][QS2]ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು. [QE][PBR]
19. [QS]“ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ: [QE][QS2]‘ನಿಜವಾಗಿಯೂ ನಾವು ಹಾಳಾಗಿಹೋದೆವು. [QE][QS2]ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. [QE][QS]ನಾವು ನಮ್ಮ ನಾಡನ್ನು ಬಿಡಬೇಕು, [QE][QS2]ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’ ” [QE][PBR]
20. [QS]ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. [QE][QS2]ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. [QE][QS]ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. [QE][QS2]ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು. [QE]
21. [QS]ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. [QE][QS2]ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. [QE][QS]ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. [QE][QS2]ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.” [QE][PBR]
22. [QS]ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: [QE][QS]“ ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. [QE][QS2]ಆ ಶವಗಳು ಹೊಲ ಕೊಯ್ಯುವವನ ಹಿಂದೆ [QE][QS2]ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’ ” [QE][PBR]
23. [QS]ಯೆಹೋವನು ಹೇಳುತ್ತಾನೆ, [QE][QS]“ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ [QE][QS2]ಜಂಬಕೊಚ್ಚಿಕೊಳ್ಳಬಾರದು. [QE][QS]ಬಲಶಾಲಿಗಳು ತಮ್ಮ ಬಲದ ಬಗ್ಗೆ [QE][QS2]ಬಡಾಯಿಕೊಚ್ಚಿಕೊಳ್ಳಬಾರದು. [QE][QS]ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ [QE][QS2]ಜಂಬಕೊಚ್ಚಿಕೊಳ್ಳಬಾರದು. [QE]
24. [QS]ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ [QE][QS2]ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. [QE][QS]ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. [QE][QS2]ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, [QE][QS2]ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. [QE][QS2]ಆಗ ನನಗೆ ಸಂತೋಷವಾಗುವುದು.” [QE][QS]ಇದು ಯೆಹೋವನ ನುಡಿ. [QE][PBR]
25. [PS]“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.
26. ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ. [PE]