1. {#1ಒಳ್ಳೆಯ ಮನುಷ್ಯನಾದ ಯೋಬನು } [PS]ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.
2. ಯೋಬನಿಗೆ ಏಳು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಇದ್ದರು.
3. ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ[* ಒಂದು ಸಾವಿರ ಎತ್ತುಗಳೂ ಅಕ್ಷರಶಃ, “ಐನೂರು ಜೋಡಿ ಎತ್ತುಗಳಿದ್ದವು.” ] ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು. [PE]
4. [PS]ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು.
5. ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು. [PE]
6. [PS]ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.
7. ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. [PE]
8. [PS]ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು. [PE]
9. [PS]ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು. [PE][PS]ಅದಕ್ಕೆ ಸೈತಾನನು, “ಹೌದು! ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿರುವುದಕ್ಕೆ ಒಳ್ಳೆಯ ಕಾರಣವೊಂದಿದೆ!
10. ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.
11. ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು. [PE]
12.
13. [PS]ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. [PE][PS]ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು. [PE]{#1ಯೋಬನಿಗಾದ ಸರ್ವನಾಶ } [PS]ಒಂದು ದಿನ, ಯೋಬನ ಗಂಡುಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.
14. ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು.
15. ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು. [PE]
16.
17. [PS]ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು. [PE]
18. [PS]ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು. [PE][PS]ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.
19. ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು. [PE]
20. [PS]ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ, [PE][PBR]
21. [QS]“ನಾನು ತಾಯಿಯ ಗರ್ಭದಿಂದ ಜನಿಸಿದಾಗ [QE][QS2]ಏನೂ ಇಲ್ಲದವನಾಗಿದ್ದೆನು; [QE][QS]ಈ ಲೋಕವನ್ನು ಬಿಟ್ಟು ಹೋಗುವಾಗಲೂ [QE][QS2]ಏನೂ ಇಲ್ಲದವನಾಗಿಯೇ ಹೋಗುವೆನು. [QE][QS]ಯೆಹೋವನೇ ಕೊಟ್ಟನು, [QE][QS2]ಯೆಹೋವನೇ ತೆಗೆದುಕೊಂಡನು. [QE][QS]ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು. [QE][PBR]
22. [PS]ಇಷ್ಟೆಲ್ಲಾ ಕಳೆದುಕೊಂಡರೂ ಯೋಬನು ಪಾಪ ಮಾಡಲಿಲ್ಲ; ದೇವರನ್ನೂ ದೂಷಿಸಲಿಲ್ಲ. [PE]