1. [PS]ಯೋಬನು ಹೇಳಿದನು: [PE][PBR] [QS]“ಇಗೋ, ಇವುಗಳನ್ನೆಲ್ಲ ನನ್ನ ಕಣ್ಣುಗಳು ಕಂಡಿವೆ; [QE][QS2]ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ. [QE]
2. [QS]ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. [QE][QS2]ನಾನು ನಿಮಗಿಂತ ಕಡಿಮೆಯಲ್ಲ. [QE]
3. [QS]ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ [QE][QS2]ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; [QE][QS2]ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು. [QE]
4. [QS]ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. [QE][QS2]ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ. [QE]
5. [QS]ನೀವು ಬಾಯಿಮುಚ್ಚಿಕೊಂಡು ಸುಮ್ಮನಿದ್ದರೆ ಎಷ್ಟೋ ಒಳ್ಳೆಯದು. [QE][QS2]ನೀವು ಮಾಡಬಹುದಾದ ಜ್ಞಾನದ ಕಾರ್ಯ ಅದೊಂದೇ. [QE][PBR]
6. [QS]“ಈಗ ನನ್ನ ವಾದಕ್ಕೆ ಕಿವಿಗೊಡಿ. [QE][QS2]ನಾನು ಹೇಳುವುದನ್ನು ಕೇಳಿ. [QE]
7. [QS]ನೀವು ದೇವರಿಗಾಗಿ ಸುಳ್ಳಾಡುವಿರಾ? [QE][QS2]ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ? [QE]
8. [QS]ನೀವು ದೇವರಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? [QE][QS2]ನ್ಯಾಯಾಲಯದಲ್ಲಿ ಆತನಿಗಾಗಿ ವಾದಿಸಲು ಹೋಗುವಿರಾ? [QE]
9. [QS]ದೇವರು ನಿಮ್ಮನ್ನು ಸೂಕ್ಷ್ಮವಾಗಿ ಪರಿಶೋಧಿಸಿದರೆ [QE][QS2]ನೀವು ನೀತಿವಂತರಾಗಿ ಕಂಡುಬರುವಿರಾ? [QE][QS]ಜನರಿಗೆ ಮೋಸ ಮಾಡುವಂತೆ [QE][QS2]ದೇವರಿಗೂ ಮೋಸ ಮಾಡಬಹುದೆಂದು ಯೋಚಿಸಿಕೊಂಡಿದ್ದೀರಾ? [QE]
10. [QS]ನೀವು ನ್ಯಾಯಾಲಯದಲ್ಲಿ ರಹಸ್ಯವಾಗಿ ಪಕ್ಷಪಾತ ಮಾಡಿದರೆ [QE][QS2]ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು. [QE]
11. [QS]ಆತನ ಪ್ರಕಾಶಮಾನವಾದ ಮಹಿಮೆಯು ನಿಮ್ಮನ್ನು ಹೆದರಿಸುವುದಿಲ್ಲವೇ? [QE][QS2]ನೀವು ಆತನಿಗೆ ಭಯಪಡುವುದಿಲ್ಲವೇ? [QE]
12. [QS]ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. [QE][QS2]ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ. [QE][PBR]
13. [QS]“ಸುಮ್ಮನಿರಿ, ಮಾತಾಡಲು ನನಗೆ ಅವಕಾಶ ಕೊಡಿ! [QE][QS2]ನನಗೆ ಏನಾಗಬೇಕೋ ಆಗಲಿ. [QE]
14. [QS]ನಾನು ನನ್ನನ್ನು ಅಪಾಯಕ್ಕೊಡ್ಡುವೆನು; [QE][QS2]ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. [QE]
15. [QS]ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. [QE][QS2]ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು. [QE]
16. [QS]ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. [QE][QS2]ಯಾಕೆಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ. [QE]
17. [QS]ನಾನು ಹೇಳುವುದನ್ನು ಗಮನವಿಟ್ಟು ಕೇಳಿ. [QE][QS2]ನನ್ನ ವಿವರಣೆಯನ್ನು ನಿಮ್ಮ ಕಿವಿಗಳು ಕೇಳಲಿ. [QE]
18. [QS]ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. [QE][QS2]ನಾನು ನಿರಪರಾಧಿಯೆಂದು ನನಗೆ ಗೊತ್ತದೆ. [QE]
19. [QS]ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. [QE][QS2]ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು. [QE][PBR]
20. [QS]“ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡಬೇಡ, [QE][QS2]ಆಗ ನನ್ನನ್ನು ನಿನಗೆ ಮರೆಮಾಡಿಕೊಳ್ಳುವುದಿಲ್ಲ. [QE]
21. [QS]ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, [QE][QS2]ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ. [QE]
22. [QS]ಆಗ ನೀನು ಕರೆದರೆ, ನಾನು ಉತ್ತರಕೊಡುವೆನು. [QE][QS2]ಇಲ್ಲವೇ ನಾನು ಕರೆಯುವೆ, ನೀನು ಉತ್ತರಕೊಡು. [QE]
23. [QS]ನಾನು ಎಷ್ಟು ಪಾಪಗಳನ್ನು ಮಾಡಿರುವೆ? [QE][QS2]ನಾನೇನು ತಪ್ಪು ಮಾಡಿರುವೆ? [QE][QS2]ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು. [QE]
24. [QS]ದೇವರೇ, ನೀನೇಕೆ ನನಗೆ ಮರೆಯಾಗಿರುವೆ? [QE][QS2]ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ? [QE]
25. [QS]ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? [QE][QS2]ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ? [QE]
26. [QS]ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. [QE][QS2]ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ. [QE]
27. [QS]ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. [QE][QS2]ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ [QE][QS2]ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ. [QE]
28. [QS]ಆದ್ದರಿಂದ ನಾನು ಕೊಳೆತುಹೋದ ಪದಾರ್ಥದಂತೆಯೂ [QE][QS2]ನುಸಿಹಿಡಿದ ಬಟ್ಟೆಯ ಚೂರಿನಂತೆಯೂ [QE][QS2]ಕ್ಷಯಿಸಿಹೋಗುತ್ತಿದ್ದೇನೆ.” [QE][PBR]