1. {#1ಎಲೀಫಜನ ಉತ್ತರ } [PS]ಬಳಿಕ ತೇಮಾನ್ ಪಟ್ಟಣದ ಎಲೀಫಜನು ಉತ್ತರಕೊಟ್ಟನು: [PE][PBR]
2. [QS]“ಯಾವನೂ ದೇವರಿಗೆ ಸಹಾಯಮಾಡಲಾರನು. [QE][QS2]ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು. [QE]
3. [QS]ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. [QE][QS2]ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ? [QE]
4. [QS]ನಿನ್ನ ಆರಾಧನೆಯ ದೆಸೆಯಿಂದ [QE][QS2]ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ! [QE]
5. [QS]ನಿನ್ನ ಪಾಪವು ಅತಿಯಾಯಿತು! [QE][QS2]ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ. [QE]
6. [QS]ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. [QE][QS2]ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು. [QE]
7. [QS]ಆಯಾಸಗೊಂಡವರಿಗೆ ನೀರು ಕೊಡದೆ [QE][QS2]ಹಸಿದವರಿಗೆ ಊಟ ಕೊಡದೆಹೋಗಿರಬಹುದು. [QE]
8. [QS]ಯೋಬನೇ, ಬಲಿಷ್ಠನಾಗಿದ್ದ ನಿನ್ನಲ್ಲಿ ಬೇಸಾಯಕ್ಕೆ ಬಹಳ ಭೂಮಿಯಿದೆ. [QE][QS2]ಅಲ್ಲದೆ ಜನರು ಸಹ ನಿನ್ನನ್ನು ಗೌರವಿಸುತ್ತಿದ್ದರು. [QE]
9. [QS]ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. [QE][QS2]ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು. [QE]
10. [QS]ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; [QE][QS2]ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು. [QE]
11. [QS]ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, [QE][QS2]ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ. [QE][PBR]
12. [QS]“ದೇವರು ಅತ್ಯುನ್ನತವಾದ ಪರಲೋಕದಲ್ಲಿ ವಾಸಿಸುತ್ತಾನೆ. [QE][QS2]ಆತನು ಅತ್ಯಂತ ಎತ್ತರದಲ್ಲಿರುವ ನಕ್ಷತ್ರಗಳನ್ನು ಬಗ್ಗಿ ನೋಡುವನು. [QE][QS2]ನಕ್ಷತ್ರಗಳು ಎಷ್ಟು ಎತ್ತರದಲ್ಲಿವೆ ಎಂಬುದನ್ನು ನೀನು ನೋಡಬಲ್ಲೆ. [QE]
13. [QS]ನೀನಾದರೋ, ‘ದೇವರಿಗೆ ಗೊತ್ತಿರುವುದೇನು? [QE][QS2]ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ? [QE]
14. [QS]ದಟ್ಟವಾದ ಮೋಡಗಳು ಆತನನ್ನು ಮುಚ್ಚಿಕೊಂಡಿವೆ. [QE][QS2]ಆಕಾಶದ ಮೇಲ್ಗಡೆಯಲ್ಲಿ ನಡೆದಾಡುವ ಆತನು ನಮ್ಮನ್ನು ಕಾಣಲಾರನು’ ಎಂದು ಹೇಳುತ್ತಿರುವೆ. [QE][PBR]
15. [QS]“ಯೋಬನೇ, ದುಷ್ಟರು ನಡೆಯುವ ಹಳೆದಾರಿಯ ಮೇಲೆ [QE][QS2]ನೀನು ನಡೆಯುತ್ತಲೇ ಇರುವಿಯೋ? [QE]
16. [QS]ಆ ದುಷ್ಟರಿಗೆ ಅಕಾಲಮರಣವು ಬಂದಿತು. [QE][QS2]ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು. [QE]
17. [QS]ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; [QE][QS2]ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು. [QE]
18. [QS]ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. [QE][QS2]ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ. [QE]
19. [QS]ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. [QE][QS2]ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ, [QE]
20. [QS]‘ನಮ್ಮ ಶತ್ರುಗಳು ನಾಶವಾದರು! [QE][QS2]ಬೆಂಕಿಯು ಅವರ ಐಶ್ವರ್ಯವನ್ನು ಸುಟ್ಟುಹಾಕಿತು!’ ಎಂದು ಹೇಳುವರು. [QE][PBR]
21. [QS]“ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, [QE][QS2]ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ. [QE]
22. [QS]ಆತನ ಉಪದೇಶವನ್ನು ಸ್ವೀಕರಿಸಿಕೊ. [QE][QS2]ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ. [QE]
23. [QS]ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ [QE][QS2]ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ. [QE]
24. [QS]ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. [QE][QS2]ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು. [QE]
25. [QS]ಆಗ ಸರ್ವಶಕ್ತನಾದ ದೇವರು ನಿನ್ನ ಪಾಲಿಗೆ [QE][QS2]ಬಂಗಾರವಾಗಿಯೂ ಬೆಳ್ಳಿಯ ರಾಶಿಗಳಾಗಿಯೂ ಇರುವನು. [QE]
26. [QS]ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. [QE][QS2]ದೇವರ ಕಡೆಗೆ ಕಣ್ಣೆತ್ತಿ ನೋಡುವೆ. [QE]
27. [QS]ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; [QE][QS2]ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ. [QE]
28. [QS]ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; [QE][QS2]ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು; [QE]
29. [QS]ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, [QE][QS2]ದೀನರಿಗಾದರೋ ಸಹಾಯಮಾಡುವನು. [QE]
30. [QS]ನಿರಪರಾಧಿಗಳನ್ನು ರಕ್ಷಿಸುವನು. [QE][QS2]ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.” [QE][PBR]