1. [QS]“ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು [QE][QS2]ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ. [QE]
2. [QS]ಸರ್ವಶಕ್ತನಾದ ದೇವರು ಜನರಿಗೆ ಏನು ಮಾಡುವನು? [QE][QS2]ದೇವರು ತನ್ನ ಉನ್ನತವಾದ ಪರಲೋಕದಿಂದ ಜನರಿಗೆ ಹೇಗೆ ಪ್ರತಿಫಲವನ್ನು ಕೊಡುವನು? [QE]
3. [QS]ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ [QE][QS2]ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು. [QE]
4. [QS]ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು [QE][QS2]ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು. [QE][PBR]
5. [QS]“ನಾನು ಸುಳ್ಳು ಹೇಳಲಿಲ್ಲ; [QE][QS2]ಜನರಿಗೆ ಮೋಸಮಾಡಲು ಪ್ರಯತ್ನಿಸಲೂ ಇಲ್ಲ. [QE]
6. [QS]ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, [QE][QS2]ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು. [QE]
7. [QS]ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, [QE][QS2]ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, [QE][QS2]ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ, [QE]
8. [QS]ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; [QE][QS2]ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ. [QE][PBR]
9. [QS]“ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, [QE][QS2]ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ, [QE]
10. [QS]ನನ್ನ ಹೆಂಡತಿಯು ಬೇರೊಬ್ಬನಿಗೆ ಸೇವಕಿಯಾಗಲಿ; [QE][QS2]ಬೇರೆಯವರು ಆಕೆಯೊಂದಿಗೆ ಮಲಗಿಕೊಳ್ಳಲಿ. [QE]
11. [QS]ಯಾಕೆಂದರೆ ವ್ಯಭಿಚಾರ ಅವಮಾನಕರ. [QE][QS2]ಆ ಪಾಪಕ್ಕೆ ದಂಡನೆಯಾಗಲೇಬೇಕು. [QE]
12. [QS]ವ್ಯಭಿಚಾರವು ಸುಟ್ಟು ನಾಶಮಾಡುವ ಬೆಂಕಿಯಂತಿದೆ. [QE][QS2]ನಾನು ಹೊಂದಿರುವ ಪ್ರತಿಯೊಂದನ್ನು ಅದು ನಾಶಮಾಡಿಬಿಡುತ್ತಿತ್ತು. [QE][PBR]
13. [QS]“ನನ್ನ ಸೇವಕಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ [QE][QS2]ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ [QE]
14. [QS]ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? [QE][QS2]ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ? [QE]
15. [QS]ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. [QE][QS2]ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. [QE][QS2]ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು. [QE][PBR]
16. [QS]“ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; [QE][QS2]ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು. [QE]
17. [QS]ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. [QE][QS2]ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶ ಕೊಟ್ಟಿಲ್ಲ. [QE]
18. [QS]ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; [QE][QS2]ವಿಧವೆಯರನ್ನು ಪರಿಪಾಲಿಸಿದೆನು. [QE]
19. [QS]ಬಟ್ಟೆಯಿಲ್ಲದೆ ಸಂಕಟಪಡುತ್ತಿರುವವರನ್ನೂ [QE][QS2]ಮೇಲಂಗಿಯಿಲ್ಲದ ಬಡವರನ್ನೂ ನಾನು ಕಂಡಾಗಲೆಲ್ಲಾ [QE]
20. [QS]ಅವರಿಗೆ ಬಟ್ಟೆಗಳನ್ನು ಕೊಟ್ಟೆನು. [QE][QS2]ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. [QE][QS2]ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು. [QE]
21. [QS]ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ [QE][QS2]ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ. [QE]
22. [QS]ನಾನು ಹಾಗೆ ಮಾಡಿದ್ದರೆ, [QE][QS2]ನನ್ನ ತೋಳು ಕೀಲುತಪ್ಪಿ ಭುಜದಿಂದ ಮುರಿದುಬೀಳಲಿ. [QE]
23. [QS]ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. [QE][QS2]ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. [QE][QS2]ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ. [QE][PBR]
24. [QS]“ನಾನು ನನ್ನ ಐಶ್ವರ್ಯಗಳಲ್ಲಿ ಎಂದೂ ಭರವಸವಿಡಲಿಲ್ಲ. [QE][QS2]ನಾನು ಬಂಗಾರಕ್ಕೆ ‘ನೀನೇ ನನ್ನ ನಿರೀಕ್ಷೆ’ ಎಂದು ಹೇಳಲೇ ಇಲ್ಲ. [QE]
25. [QS]ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. [QE][QS2]ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ. [QE]
26. [QS]ಪ್ರಕಾಶಮಾನವಾದ ಸೂರ್ಯನನ್ನಾಗಲಿ [QE][QS2]ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ. [QE]
27. [QS]ನಾನು ಮರುಳುಗೊಂಡು [QE][QS2]ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ. [QE]
28. [QS]ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. [QE][QS2]ಯಾಕೆಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು. [QE][PBR]
29. [QS]“ನನ್ನ ವೈರಿಗಳು ನಾಶವಾದಾಗ [QE][QS2]ನಾನೆಂದೂ ಸಂತೋಷಪಡಲಿಲ್ಲ. [QE][QS]ನನ್ನ ವೈರಿಗಳಿಗೆ ಕೇಡಾದಾಗ [QE][QS2]ನಾನೆಂದೂ ನಗಲಿಲ್ಲ. [QE]
30. [QS]ನನ್ನ ವೈರಿಗಳನ್ನು ಶಪಿಸಿ, ಅವರಿಗೆ ಸಾವನ್ನು ಕೋರಲು [QE][QS2]ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ. [QE]
31. [QS]ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು [QE][QS2]ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ. [QE]
32. [QS]ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. [QE][QS2]ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ. [QE]
33. [QS]ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. [QE][QS2]ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ. [QE]
34. [QS]ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. [QE][QS2]ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ. [QE][PBR]
35. [QS]“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! [QE][QS2]ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! [QE][QS]ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. [QE][QS2]ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ! [QE]
36. [QS]ಖಂಡಿತವಾಗಿಯೂ ನಾನು ಆ ಪತ್ರವನ್ನು ನನ್ನ ಹೆಗಲ ಮೇಲೆ ಇಟ್ಟುಕೊಳ್ಳುವೆನು. [QE][QS2]ಅದನ್ನು ಕಿರೀಟವನ್ನಾಗಿ ಧರಿಸಿಕೊಳ್ಳುವೆನು. [QE]
37. [QS]ನಾನು ಮಾಡಿರುವ ಪ್ರತಿಯೊಂದನ್ನು ದೇವರಿಗೆ ವಿವರಿಸುವೆನು. [QE][QS2]ನಾನು ಅಧಿಪತಿಯಂತೆ ತಲೆಯೆತ್ತಿಕೊಂಡು ಆತನ ಸಮೀಪಕ್ಕೆ ಬರುವೆನು. [QE][PBR]
38. [QS]“ನನ್ನ ಹೊಲವನ್ನು ಬೇರೆಯವರಿಂದ ಕಿತ್ತುಕೊಳ್ಳಲಿಲ್ಲ; [QE][QS2]ಈ ವಿಷಯದಲ್ಲಿ ಯಾರೂ ನನ್ನ ಮೇಲೆ ಅಪವಾದ ಹೊರಿಸಲಾರರು. [QE]
39. [QS]ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; [QE][QS2]ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ. [QE]
40. [QS]ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, [QE][QS2]ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” [QE][PBR] [PS]ಹೀಗೆ ಯೋಬನ ಮಾತುಗಳು ಮುಗಿದವು. [PE]