1. [QS]“ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. [QE][QS2]ನನ್ನ ಮಾತುಗಳಿಗೆ ಗಮನ ಕೊಡು. [QE]
2. [QS]ಈಗ ನಾನು ನನ್ನ ಬಾಯಿ ತೆರೆಯುವೆನು; ನಾನು ಮಾತಾಡಲು ಸಿದ್ಧನಾಗಿದ್ದೇನೆ. [QE]
3. [QS]ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, [QE][QS2]ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು. [QE]
4. [QS]ದೇವರಾತ್ಮನು ನನ್ನನ್ನು ನಿರ್ಮಿಸಿದನು. [QE][QS2]ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು. [QE]
5. [QS]ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. [QE][QS2]ನಿನ್ನ ವಾದವನ್ನು ಸಿದ್ಧಪಡಿಸಿಕೊ; ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು! [QE]
6. [QS]ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. [QE][QS2]ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು. [QE]
7. [QS]ಯೋಬನೇ, ನನಗೆ ಭಯಪಡಬೇಡ. [QE][QS2]ನಾನು ನಿನ್ನನ್ನು ಸೋಲಿಸುವುದಿಲ್ಲ. [QE][PBR]
8. [QS]“ಆದರೆ ಯೋಬನೇ, [QE][QS2]ನೀನು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: [QE]
9. [QS]‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; [QE][QS2]ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ! [QE]
10. [QS]ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. [QE][QS2]ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ; [QE]
11. [QS]ದೇವರು ನನ್ನ ಕಾಲುಗಳನ್ನು ಸರಪಣಿಯಿಂದ ಕಟ್ಟಿದ್ದಾನೆ; [QE][QS2]ನಾನು ಮಾಡುವ ಪ್ರತಿಯೊಂದನ್ನೂ ದೇವರು ಗಮನಿಸುತ್ತಿದ್ದಾನೆ.’ [QE][PBR]
12. [QS]“ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ನಾನು ಅದನ್ನು ನಿರೂಪಿಸುವೆ. [QE][QS2]ದೇವರು ಮನುಷ್ಯನಿಗಿಂತ ದೊಡ್ಡವನು. [QE]
13. [QS]ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? [QE][QS2]ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ? [QE]
14. [QS]ಒಂದುವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. [QE][QS2]ಒಂದುವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು. [QE]
15. [QS]ಜನರು ಗಾಢನಿದ್ರೆಯಲ್ಲಿರುವಾಗ [QE][QS2]ದೇವರು ಕನಸಿನ ಮೂಲಕವಾಗಲಿ ದರ್ಶನದ ಮೂಲಕವಾಗಲಿ ಮಾತಾಡಬಹುದು. [QE]
16. [QS]ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. [QE][QS2]ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು. [QE]
17. [QS]ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ [QE][QS2]ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ. [QE]
18. [QS]ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. [QE][QS2]ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ. [QE][PBR]
19. [QS]“ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. [QE][QS2]ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ. [QE]
20. [QS]ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. [QE][QS2]ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು. [QE]
21. [QS]ಅವನು ಆಸ್ತಿಪಂಜರದಂತೆ ಕ್ಷೀಣವಾಗುವನು. [QE][QS2]ಕಾಣದಿದ್ದ ಅವನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡು ಅವು ಹೊರತೋರುತ್ತವೆ. [QE]
22. [QS]ಅವನಿಗೆ ಸಾವು ಸಮೀಪವಾಗಿದೆ; [QE][QS2]ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ. [QE]
23. [QS]ಒಂದುವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು [QE][QS2]ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ, [QE]
24. [QS]‘ಇವನನ್ನು ಪಾತಾಳದಿಂದ ರಕ್ಷಿಸು! [QE][QS2]ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ [QE]
25. [QS]ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; [QE][QS2]ಯೌವನಪ್ರಾಯದಂತೆ ದೃಢಕಾಯವಾಗುವುದು. [QE]
26. [QS]ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. [QE][QS2]ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; [QE][QS2]ಆತನ ಮುಂದೆ ನೀತಿವಂತನಾಗಿ ಜೀವಿಸುವನು. [QE]
27. [QS]ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; [QE][QS2]ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. [QE][QS2]ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ! [QE]
28. [QS]ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. [QE][QS2]ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು. [QE][PBR]
29. [QS](29-30)“ಅವನನ್ನು ಎಚ್ಚರಿಸಿ ಅವನ ಆತ್ಮವನ್ನು ಪಾತಾಳದಿಂದ ರಕ್ಷಿಸಬೇಕೆಂದೂ ಜೀವನದ ಸುಖವನ್ನು ಅವನು ಮತ್ತೆ ಅನುಭವಿಸಲೆಂದೂ [QE][QS2]ದೇವರು ಈ ಕಾರ್ಯಗಳನ್ನು ಪದೇಪದೇ ಮಾಡುವನು. [QE][PBR]
30.
31. [QS]“ಯೋಬನೇ, ನನ್ನ ಮಾತುಗಳಿಗೆ ಗಮನಕೊಟ್ಟು ಕೇಳು, ಮೌನವಾಗಿರು. [QE][QS2]ನಾನು ಮಾತಾಡುವೆನು. [QE]
32. [QS]ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. [QE][QS2]ಮುನ್ನಡೆದು ಮಾತಾಡು, [QE][QS2]ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ. [QE]
33. [QS]ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. [QE][QS2]ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” [QE][PBR]