1. [PS]ಎಲೀಹು ತನ್ನ ಮಾತನ್ನು ಮುಂದುವರಿಸಿದನು: [PE][PBR]
2. [QS]“ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. [QE][QS2]ಜಾಣರೇ, ನನಗೆ ಗಮನಕೊಡಿರಿ. [QE]
3. [QS]ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; [QE][QS2]ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ. [QE]
4. [QS]ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ [QE][QS2]ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ. [QE]
5. [QS]ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ. [QE][QS2]ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ. [QE]
6. [QS]ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. [QE][QS2]ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’ [QE][PBR]
7. [QS]“ಯೋಬನಿಗೆ ಸಮಾನನು ಯಾರು? [QE][QS2]ಅವನು ನೀರು ಕುಡಿದಂತೆ ದೇವರನ್ನು ದೂಷಿಸುತ್ತಾನೆ. [QE]
8. [QS]ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; [QE][QS2]ಕೆಟ್ಟವರ ಸಂಗಡ ನಡೆದಾಡುವನು. [QE]
9. [QS]ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ [QE][QS2]ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ. [QE][PBR]
10. [QS]“ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. [QE][QS2]ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. [QE][QS2]ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ. [QE]
11. [QS]ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. [QE][QS2]ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು. [QE]
12. [QS]ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; [QE][QS2]ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ. [QE]
13. [QS]ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? [QE][QS2]ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು? [QE]
14. [QS]ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, [QE][QS2]ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ, [QE]
15. [QS]ಆಗ ಭೂಮಿಯ ಮೇಲಿರುವ ಎಲ್ಲಾ ಜನರು [QE][QS2]ಸತ್ತುಹೋಗಿ ಧೂಳಾಗುವರು. [QE][PBR]
16. [QS]“ನೀನು ವಿವೇಕಿಯಾಗಿದ್ದರೆ, [QE][QS2]ನನ್ನ ಮಾತುಗಳಿಗೆ ಕಿವಿಗೊಡು. [QE]
17. [QS]ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? [QE][QS2]ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು [QE][QS2]ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ? [QE]
18. [QS]‘ನೀವು ಅಯೋಗ್ಯರು!’ ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ. [QE][QS2]‘ನೀವು ಕೆಡುಕರು!’ ಎಂದು ನಾಯಕರುಗಳಿಗೆ ಹೇಳುವವನು ದೇವರೇ. [QE]
19. [QS]ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ [QE][QS2]ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. [QE][QS2]ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ. [QE]
20. [QS]ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. [QE][QS2]ಜನರು ಕಾಯಿಲೆಯಿಂದ ಸಾಯಬಹುದು. [QE][QS2]ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು. [QE][PBR]
21. [QS]“ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. [QE][QS2]ಅವನ ಪ್ರತಿಯೊಂದು ಹೆಜ್ಜೆ ಆತನಿಗೆ ಗೊತ್ತಿದೆ. [QE]
22. [QS]ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ [QE][QS2]ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ. [QE]
23. [QS]ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ; [QE][QS2]ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ. [QE]
24. [QS]ಬಲಿಷ್ಠರು ತಪ್ಪು ಮಾಡಿದಾಗ [QE][QS2]ದೇವರು ಅವರನ್ನು ವಿಚಾರಿಸದೆ ನಾಶಮಾಡಿ [QE][QS]ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು. [QE]
25. [QS]ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, [QE][QS2]ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು. [QE]
26. [QS]ದೇವರು ದುಷ್ಟರನ್ನು [QE][QS2]ಅವರ ದುಷ್ಕೃತ್ಯಗಳ ನಿಮಿತ್ತ ಬಹಿರಂಗವಾಗಿ ದಂಡಿಸುವನು. [QE]
27. [QS]ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; [QE][QS2]ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. [QE]
28. [QS]ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. [QE][QS2]ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು. [QE]
29. [QS]ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, [QE][QS2]ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? [QE][QS]ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? [QE][QS2]ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ. [QE]
30. [QS]ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ [QE][QS2]ದೇವರು ಅವನನ್ನು ಪದಚ್ಯುತಿಗೊಳಿಸುವನು. [QE][PBR]
31. [QS]“ಮನುಷ್ಯನು ದೇವರಿಗೆ, ‘ನಾನು ದೋಷಿ, [QE][QS2]ನಾನು ಇನ್ನೆಂದಿಗೂ ಪಾಪ ಮಾಡುವುದಿಲ್ಲ. [QE]
32. [QS]ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, [QE][QS2]ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು. [QE]
33. [QS]ಯೋಬನೇ, ನೀನು ಮಾರ್ಪಾಟಾಗದೆ [QE][QS2]ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? [QE][QS]ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. [QE][QS2]ನಿನ್ನ ಆಲೋಚನೆಯನ್ನು ನನಗೆ ತಿಳಿಸು. [QE]
34. [QS]ಜ್ಞಾನಿಗಳೂ ಬುದ್ಧಿವಂತರೂ [QE][QS2]ನನ್ನ ಮಾತುಗಳಿಗೆ ಕಿವಿಗೊಟ್ಟು, [QE]
35. [QS]‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. [QE][QS2]ಅವನ ಮಾತುಗಳಿಗೆ ಅರ್ಥವೇ ಇಲ್ಲ!’ [QE]
36. [QS]ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. [QE][QS2]ಯಾಕೆಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ. [QE]
37. [QS]ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; [QE][QS2]ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು. [QE][PBR]