1. [PS]ಎಲೀಹು ಮಾತನ್ನು ಮುಂದುವರಿಸಿ, [PE][PBR]
2. [QS]“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ [QE][QS2]ನೀನು ಹೇಳುವುದು ನ್ಯಾಯವಲ್ಲ. [QE]
3. [QS]ಅಲ್ಲದೆ ನೀನು ದೇವರಿಗೆ, [QE][QS2]‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? [QE][QS2]ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು. [QE][PBR]
4. [QS]“ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ. [QE]
5. [QS]ಕಣ್ಣೆತ್ತಿ ಆಕಾಶವನ್ನು ನೋಡು. [QE][QS2]ಮೋಡಗಳನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ. [QE]
6. [QS]ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. [QE][QS2]ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವರಿಗೇನೂ ಆಗುವುದಿಲ್ಲ. [QE]
7. [QS]ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. [QE][QS2]ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ. [QE]
8. [QS]ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; [QE][QS2]ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು. [QE][PBR]
9. [QS]“ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು [QE][QS2]ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು. [QE]
10. [QS]ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. [QE][QS2]ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. [QE][QS2]‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ. [QE]
11. [QS]‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ [QE][QS2]ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ. [QE][PBR]
12. [QS]“ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. [QE][QS2]ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ. [QE]
13. [QS]ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; [QE][QS2]ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ. [QE]
14. [QS]ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ [QE][QS2]ಆತನು ನಿನಗೆ ಕಿವಿಗೊಡುವುದಿಲ್ಲ. [QE][QS]ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ [QE][QS2]ನೀನು ಆತನಿಗಾಗಿ ಕಾದುಕೊಂಡಿರಬೇಕು. [QE][PBR]
15. [QS]“ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; [QE][QS2]ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ. [QE]
16. [QS]ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; [QE][QS2]ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.” [QE][PBR]