1. [PS]ಎಲೀಹು ಮಾತನ್ನು ಮುಂದುವರಿಸಿ ಹೀಗೆಂದನು: [PE][PBR]
2. [QS]“ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. [QE][QS2]ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ. [QE]
3. [QS]ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. [QE][QS2]ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ. [QE]
4. [QS]ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. [QE][QS2]ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. [QE][PBR]
5. [QS]“ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. [QE][QS2]ದೇವರು ಮಹಾ ಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು! [QE]
6. [QS]ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. [QE][QS2]ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು. [QE]
7. [QS]ನೀತಿವಂತರನ್ನು ದೇವರು ಪರಿಪಾಲಿಸುವನು; [QE][QS2]ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; [QE][QS2]ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು. [QE]
8. [QS]ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು [QE][QS2]ಸಂಕಟಪಡುತ್ತಿದ್ದರೆ, [QE]
9. [QS]ಆತನು ಅವರ ದುಷ್ಕೃತ್ಯವನ್ನೂ ಪಾಪವನ್ನೂ ಗರ್ವವನ್ನೂ [QE][QS2]ಅವರಿಗೆ ತಿಳಿಯಪಡಿಸುವನು. [QE]
10. [QS]ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; [QE][QS2]ಪಾಪಮಾಡಕೂಡದೆಂದು ಆಜ್ಞಾಪಿಸುವನು. [QE]
11. [QS]ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, [QE][QS2]ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು. [QE]
12. [QS]ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; [QE][QS2]ಮೂಢರಂತೆ ಸಾಯುವರು. [QE][PBR]
13. [QS]“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. [QE][QS2]ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ. [QE]
14. [QS]ಅವರು ಯೌವನ ಪ್ರಾಯದಲ್ಲೇ [QE][QS2]ಪುರುಷಗಾಮಿಗಳಂತೆ ಸಾಯುವರು. [QE]
15. [QS]ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. [QE][QS2]ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು. [QE][PBR]
16. [QS]“ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ [QE][QS2]ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು [QE][QS2]ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ. [QE]
17. [QS]ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ. [QE]
18. [QS]ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; [QE][QS2]ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ. [QE]
19. [QS]ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; [QE][QS2]ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು. [QE]
20. [QS]ಜನಾಂಗಗಳು ಇದ್ದಕ್ಕಿದ್ದಂತೆ [QE][QS2]ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ. [QE]
21. [QS]ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು [QE][QS2]ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು. [QE][PBR]
22. [QS]“ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು! [QE][QS2]ಆತನು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ. [QE]
23. [QS]ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? [QE][QS2]ಆತನಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ? [QE]
24. [QS]ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. [QE][QS2]ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ. [QE]
25. [QS]ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು. [QE][QS2]ದೂರದೇಶಗಳ ಜನರು ಸಹ ಆತನು ಕಾರ್ಯವನ್ನು ನೋಡಬಲ್ಲರು. [QE]
26. [QS]ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. [QE][QS2]ಆತನು ಎಂದಿನಿಂದ ಜೀವಿಸಿರುವನೋ ನಮಗೆ ತಿಳಿಯದು. [QE][PBR]
27. [QS]“ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು [QE][QS2]ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ. [QE]
28. [QS]ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ; [QE][QS2]ಅನೇಕರ ಮೇಲೆ ಮಳೆಯು ಸುರಿಯುತ್ತದೆ. [QE]
29. [QS]ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ [QE][QS2]ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು. [QE]
30. [QS]ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿ [QE][QS2]ಸಮುದ್ರದ ಆಳವಾದ ಭಾಗಗಳನ್ನು ಬೆಳಕಿನಿಂದ ತುಂಬಿಸಿದ್ದಾನೆ. [QE]
31. [QS]ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ [QE][QS2]ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು. [QE]
32. [QS]ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು [QE][QS2]ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು. [QE]
33. [QS]ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; [QE][QS2]ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು. [QE][PBR]