1. [QS]“ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. [QE][QS2]ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ. [QE]
2. [QS]ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. [QE][QS2]ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ. [QE]
3. [QS]ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. [QE][QS2]ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು. [QE]
4. [QS]ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. [QE][QS2]ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! [QE][QS]ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು! [QE]
5. [QS]ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! [QE][QS2]ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ. [QE]
6. [QS]ಆತನು ಹಿಮಕ್ಕೆ, [QE][QS2]‘ಭೂಮಿಯ ಮೇಲೆ ಬೀಳು’ ಎಂತಲೂ [QE][QS]ಮಳೆಗೆ, [QE][QS2]‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು. [QE]
7. [QS]ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು [QE][QS2]ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ.[* ಮನೆಯೊಳಗೆ ಕೂಡಿಹಾಕುತ್ತಾನೆ ಪ್ರಕೃತಿಯ ವಿಕೋಪಕ್ಕೆ ಒಳಗಾಗಿ ದೇವರಿಂದ ಮನೆಯೊಳಗೆ ಬಂಧಿತರಾದ ಜನರು, ದೇವರ ಕೈಕೆಲಸವನ್ನು ಮನವರಿಕೆಮಾಡಿಕೊಳ್ಳುವರು. ] [QE]
8. [QS]ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ. [QE]
9. [QS]ದಕ್ಷಿಣ ದಿಕ್ಕಿನಿಂದ ಬಿರುಗಾಳಿಯೂ [QE][QS2]ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ. [QE]
10. [QS]ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿ [QE][QS2]ಸಾಗರಗಳನ್ನು ಹೆಪ್ಪುಗಟ್ಟಿಸುವುದು. [QE]
11. [QS]ದೇವರು ಮೋಡಗಳಲ್ಲಿ ನೀರು ತುಂಬಿಸುವನು. [QE][QS2]ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು. [QE]
12. [QS]ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. [QE][QS2]ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ. [QE]
13. [QS]ದೇವರು ಜನರನ್ನು ದಂಡಿಸುವುದಕ್ಕಾಗಲಿ [QE][QS2]ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು. [QE][PBR]
14. [QS]“ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. [QE][QS2]ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು. [QE]
15. [QS]ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? [QE][QS2]ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ? [QE]
16. [QS]ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? [QE][QS2]ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. [QE][QS2]ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ. [QE]
17. [QS]ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. [QE][QS2]ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ. [QE]
18. [QS]ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ [QE][QS2]ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ? [QE][PBR]
19. [QS]“ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! [QE][QS]ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು. [QE]
20. [QS]ನಾನು ದೇವರಿಗೆ, ‘ನಿನ್ನೊಂದಿಗೆ ಮಾತಾಡಬೇಕಾಗಿದೆ’ ಎಂದು ಹೇಳಲಾರೆ. [QE][QS2]ಯಾಕೆಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು. [QE]
21. [QS]ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. [QE][QS2]ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು. [QE]
22. [QS]ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. [QE][QS2]ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ. [QE]
23. [QS]“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. [QE][QS2]ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ. [QE]
24. [QS]ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. [QE][QS2]ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.” [QE][PBR]