1. [QS]“ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? [QE][QS2]ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ? [QE]
2. [QS]ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ ಎಂಬುದು ನಿನಗೆ ಗೊತ್ತಿದೆಯೋ? [QE][QS2]ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ? [QE]
3. [QS]ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; [QE][QS2]ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ. [QE]
4. [QS]ಬೆಟ್ಟದಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. [QE][QS2]ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ. [QE][PBR]
5. [QS]“ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? [QE][QS2]ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು? [QE]
6. [QS]ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. [QE][QS2]ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು. [QE]
7. [QS]ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, [QE][QS2]ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ. [QE]
8. [QS]ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. [QE][QS2]ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ. [QE][PBR]
9. [QS]“ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? [QE][QS2]ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ? [QE]
10. [QS]ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? [QE][QS2]ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? [QE]
11. [QS]ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? [QE][QS2]ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ? [QE]
12. [QS]ಅದು ನಿನ್ನ ಬೆಳೆಯನ್ನು ಕೂಡಿಸಿ, [QE][QS2]ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ? [QE][PBR]
13. [QS]“ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. [QE][QS2]ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ. [QE]
14. [QS]ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; [QE][QS2]ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ. [QE]
15. [QS]ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು [QE][QS2]ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ. [QE]
16. [QS]ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ [QE][QS2]ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; [QE][QS2]ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ. [QE]
17. [QS]ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. [QE][QS2]ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ. [QE]
18. [QS]ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. [QE][QS2]ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು. [QE][PBR]
19. [QS]“ಯೋಬನೇ, ನೀನು ಕುದುರೆಗೆ ಶಕ್ತಿಯನ್ನು ಕೊಟ್ಟೆಯಾ? [QE][QS2]ಅದರ ಕೊರಳಿನ ಮೇಲಿನ ಕೇಸರವನ್ನು ಕೊಟ್ಟೆಯಾ? [QE]
20. [QS]ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? [QE][QS2]ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ. [QE]
21. [QS]ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; [QE][QS2]ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ, ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು. [QE]
22. [QS]ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! [QE][QS2]ಅದು ಯುದ್ಧದಿಂದ ಓಡಿಹೋಗುವುದಿಲ್ಲ. [QE]
23. [QS]ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. [QE][QS2]ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ. [QE]
24. [QS]ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! [QE][QS2]ಅದು ನೆಲದ ಮೇಲೆ ವೇಗವಾಗಿ ಓಡುವುದು; ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು. [QE]
25. [QS]ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. [QE][QS2]ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. [QE][QS2]ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ. [QE][PBR]
26. [QS]“ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ? [QE]
27. [QS]ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ? [QE]
28. [QS]ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. [QE][QS2]ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ. [QE]
29. [QS]ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. [QE][QS2]ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು. [QE]
30. [QS]ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. [QE][QS2]ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.” [QE][PBR]