1. [QS]“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. [QE][QS2]ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ. [QE]
2. [QS]ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ [QE][QS2]ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. [QE][QS2]ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ. [QE]
3. [QS]ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ [QE][QS2]ನನಗೆ ನೇಮಿಸಲಾಗಿದೆ. [QE]
4. [QS]ಮಲಗಿಕೊಳ್ಳುವಾಗ, [QE][QS2]‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. [QE][QS]ರಾತ್ರಿಯು ಬೆಳೆಯುತ್ತಾ ಹೋಗುವುದು; [QE][QS2]ಸೂರ್ಯೋದಯದವರೆಗೂ ಹೊರಳಾಡುವೆನು. [QE]
5. [QS]ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. [QE][QS2]ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿಹೋಗಿದೆ. [QE][PBR]
6. [QS]“ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. [QE][QS2]ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು. [QE]
7. [QS]ದೇವರೆ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೊ, [QE][QS2]ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ. [QE]
8. [QS]ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. [QE][QS2]ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು. [QE]
9. [QS]ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. [QE][QS2]ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ. [QE]
10. [QS]ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. [QE][QS2]ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ. [QE][PBR]
11. [QS]“ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! [QE][QS2]ನನ್ನ ಆತ್ಮವು ಸಂಕಟಪಡುತ್ತಿದೆ! [QE][QS2]ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು. [QE]
12. [QS]ದೇವರೇ, ನೀನು ನನ್ನನ್ನು ಕಾಯುವುದೇಕೆ? [QE][QS2]ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ? [QE]
13. [QS]ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; [QE][QS2]ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು [QE][QS2]ನಾನು ಆಲೋಚಿಸುವಾಗ, [QE]
14. [QS]ನೀನು ಕನಸುಗಳಿಂದ ನನ್ನನ್ನು ಹೆದರಿಸುವೆ; [QE][QS2]ದರ್ಶನಗಳಿಂದ ನನ್ನನ್ನು ಭಯಗೊಳಿಸುವೆ. [QE]
15. [QS]ನಾನು ಬದುಕುವುದಕ್ಕಿಂತ [QE][QS2]ಉಸಿರುಕಟ್ಟಿ ಸಾಯುವುದೇ ಮೇಲು. [QE]
16. [QS]ನನ್ನ ಜೀವಿತವು ನನಗೆ ಅಸಹ್ಯವಾಗಿದೆ. [QE][QS2]ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. [QE][QS]ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! [QE][QS2]ನನ್ನ ಜೀವಿತಕ್ಕೆ ಅರ್ಥವೇ ಇಲ್ಲ! [QE]
17. [QS]ದೇವರೇ, ಮನುಷ್ಯನು ಎಷ್ಟರವನು? [QE][QS2]ನೀನು ಅವನ ಕಡೆಗೆ ಗಮನ ಕೊಡುವುದೇಕೆ? [QE]
18. [QS]ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? [QE][QS2]ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ? [QE]
19. [QS]ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? [QE][QS2]ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ. [QE]
20. [QS]ಮನುಷ್ಯನನ್ನು ಗಮನಿಸುವವನೇ, [QE][QS2]ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? [QE][QS]ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? [QE][QS2]ನಾನು ನಿನಗೆ ಸಮಸ್ಯೆಯಾದೆನೇ? [QE]
21. [QS]ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? [QE][QS2]ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? [QE][QS]ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. [QE][QS2]ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.” [QE][PBR]