పవిత్ర బైబిల్

ఈజీ టు రీడ్ వెర్షన్ (ERV) - తెలుగు
యెహొషువ
1. {#1ಯೆಹೋಶುವನು ವಂದನೆಗಳನ್ನು ಹೇಳಿದನು }
2. [PS]ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು. [PE][PS]ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
3. ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.
4. ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು. [PE]
5. [PS]“ ‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.
6. ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.
7. ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. [PE][PS]“ ‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.
8. ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ. [PE]
9. [PS]“ ‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.
10. ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ. [PE]
11. [PS]“ ‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.
12. ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ. [PE]
13.
14. [PS]“ ‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’ ” [PE]
15. [PS]ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು. [PE]
16. [PS]“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು. [PE][PS]ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.
17. ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.
18. ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು. [PE]
19. [PS]ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.
20. ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು. [PE]
21.
22. [PS]ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು. [PE]
23. [PS]ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. [PE][PS]ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು. [PE]
24. [PS]ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು. [PE]
25. [PS]ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು. [PE][PS]ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.
26. ಯೆಹೋಶುವನು ಇವುಗಳನ್ನು [BKS]ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ[BKE] ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು. [PE]
27.
28. [PS]ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು. [PE]
29. [PS]ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು. [PE]{#1ಯೆಹೋಶುವನ ಮರಣ } [PS]ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.
30. ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ. [PE]
31.
32. [PS]ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು. [PE]{#1ಯೋಸೇಫನ ಎಲುಬುಗಳನ್ನು ಸ್ವದೇಶದಲ್ಲಿ ಹೂಳಿಟ್ಟದ್ದು }
33. [PS]ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು. [PE][PS]ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು. [PE]
మొత్తం 24 అధ్యాయాలు, ఎంపిక చేయబడింది అధ్యాయము 24 / 24
1 {#1ಯೆಹೋಶುವನು ವಂದನೆಗಳನ್ನು ಹೇಳಿದನು } 2 ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು. ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು. 3 ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ. 4 ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು. 5 “ ‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ. 6 ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು. 7 ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “ ‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ. 8 ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ. 9 “ ‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು. 10 ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ. 11 “ ‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು. 12 ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ. 13 14 “ ‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’ ” 15 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು. 16 “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು. ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ. 17 ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು. 18 ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು. 19 ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. 20 ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು. 21 22 ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು. 23 ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು. 24 ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು. 25 ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು. ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು. 26 ಯೆಹೋಶುವನು ಇವುಗಳನ್ನು [BKS]ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ[BKE] ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು. 27 28 ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು. 29 ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು. {#1ಯೆಹೋಶುವನ ಮರಣ } ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು. 30 ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ. 31 32 ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು. {#1ಯೋಸೇಫನ ಎಲುಬುಗಳನ್ನು ಸ್ವದೇಶದಲ್ಲಿ ಹೂಳಿಟ್ಟದ್ದು } 33 ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು. ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.
మొత్తం 24 అధ్యాయాలు, ఎంపిక చేయబడింది అధ్యాయము 24 / 24
×

Alert

×

Telugu Letters Keypad References